ಟ್ರಕ್ ಡಿಕ್ಕಿ ಮೂವರು ಸ್ಥಳದಲ್ಲಿ ಮೃತ

KannadaprabhaNewsNetwork |  
Published : Oct 12, 2026, 03:00 AM IST
ಬೆಳಗಾವಿ  | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಗೇಟ್ ಬಳಿ ದುರ್ಗಾದೇವಿಯ ಮೂರ್ತಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ಯುತ್ತಿದ್ದ ವೇಳೆ ಟ್ರಕ್ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಗೇಟ್ ಬಳಿ ದುರ್ಗಾದೇವಿಯ ಮೂರ್ತಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ಯುತ್ತಿದ್ದ ವೇಳೆ ಟ್ರಕ್ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.

ಅಪಘಾತದಲ್ಲಿ ಹುಂಚ್ಯಾನಟ್ಟಿ ಗ್ರಾಮದ ನಿವಾಸಿಗಳಾದ ಪ್ರಕಾಶ ವಾಸೇದಾರ (28) ಹಾಗೂ ದಾನಪ್ಪ ಜಾಗನೂರೆ (26) ಮತ್ತು ಶಿವಪ್ಪ ಖಾನಾಪೂರೆ (30) ಎಂಬುವರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಎಂಟಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಆಕಾಶ ಯರಗಟ್ಟಿ, ಶಿವಾನಂದ ಜಾಗನೂರೆ, ಸುನಿಲ್ ಸುರೇಶ ಲಬ್ಬಿ, ಸುನಿಲ ಶಂಕರ ಲಬ್ಬಿ, ಉಮೇಶ ಹಂಜಿ, ಮಲ್ಲಿಕಾರ್ಜುನ ಸಂಕೇಶ್ವರಿ, ನಂದೇಶ ಡಂಗಿ ಸೇರಿದಂತೆ ಹಲವರನ್ನು ತಕ್ಷಣವೇ ಸ್ಥಳೀಯರ ನೆರವಿನಿಂದ ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಹಾಗೂ ಸಮೀಪದ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

ಬೆಳಗಾವಿಯಿಂದ ಹುಕ್ಕೇರಿ ತಾಲೂಕಿನ ಹುಂಚ್ಯಾನಟ್ಟಿ ಗ್ರಾಮಕ್ಕೆ ದುರ್ಗಾಮಾತಾ ದೌಡ ದೇವಿಯ ಮೂರ್ತಿಯನ್ನು ಟ್ರ್ಯಾಕ್ಟರ್‌ನಲ್ಲಿ ಸಾಗಿಸಲಾಗುತ್ತಿತ್ತು. ಈ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಹಲವರು ಗಾಯಗೊಂಡಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಲ್ಲೆಂದರಲ್ಲಿ ಧೂಮಪಾನ, ನಿಯಂತ್ರಣವೇ ಸವಾಲು!
ಸಮಾಜದ ಒಳಿತಿಗಾಗಿ ಸಮರ್ಪಿಸಿಕೊಳ್ಳುವುದೇ ಶಕ್ತಿ ಆರಾಧನೆ: ರಂಭಾಪುರಿ ಜಗದ್ಗುರು