ಕನ್ನಡಪ್ರಭ ವಾರ್ತೆ ಪುತ್ತೂರು
ಮೃತಪಟ್ಟವರನ್ನು ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿಗಳಾದ ಅಣ್ಣು ನಾಯ್ಕ(೭೨), ಅವರ ಪುತ್ರ ಚಿದಾನಂದ ನಾಯ್ಕ (೫೮) ಮತ್ತು ನೆರೆಮನೆ ನಿವಾಸಿ ರಮೇಶ್ ನಾಯ್ಕ (೬೮) ಎಂದು ಗುರುತಿಸಲಾಗಿದೆ. ಇವರು ಬಂಟ್ವಾಳ ತಾಲೂಕಿನ ಪುಣಚದಲ್ಲಿ ನಡೆದ ಗೋಂದೊಳ್ ಪೂಜೆಗೆ ಆಲ್ಟೋ ಕಾರಿನಲ್ಲಿ ಪುಣಚಕ್ಕೆ ಶುಕ್ರವಾರ ರಾತ್ರಿ ಆಗಮಿಸಿದ್ದರು ಎನ್ನಲಾಗಿದ್ದು, ಹಿಂತಿರುಗಿ ಸುಳ್ಯಕ್ಕೆ ತೆರಳುತ್ತಿದ್ದ ವೇಳೆ ಮುಂಜಾನೆ ಸುಮಾರು ೪.೧೫ರ ವೇಳೆಗೆ ಕಾರು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದು ಕಾರಿನಲ್ಲಿದ್ದ ಮೂವರೂ ಮೃತಪಟ್ಟಿದ್ದಾರೆ. ಆದರೆ ಬೆಳಗ್ಗಿನ ಬಳಿಕವಷ್ಟೇ ಘಟನೆ ಬೆಳಕಿಗೆ ಬಂದಿದೆ. ಕಂದಕಕ್ಕೆ ಉರುಳಿದ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಮೃತದೇಹಗಳು ಕಾರಿನ ಹೊರಭಾಗಕ್ಕೆ ಎಸೆಯಲ್ಪಟ್ಟಿದ್ದವು.
ಪುತ್ತೂರು ಸಂಚಾರಿ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಉದಯ ರವಿ ಹಾಗೂ ಎಫ್.ಎಸ್.ಐ.ಎಲ್ ತಂಡದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು. ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಬಿಟ್ಟು ಕೊಡಲಾಯಿತು. ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.