ದಾವಣಗೆರೆ: ಮನೆಯಲ್ಲಿ ಅಪ್ರಾಪ್ತೆ ಒಬ್ಬಳೇ ಇದ್ದ ವೇಳೆ ಅತಿಕ್ರಮವಾಗಿ ಮನೆಯೊಳಗೆ ನುಗ್ಗಿ ಆಕೆಯ ಕೈ ಹಿಡಿದು, ಎಳೆದಾಡಿ ಅತ್ಯಾಚಾರಕ್ಕೆ ಯತ್ನಿಸಿದ ಅಪರಾಧಿಗೆ 3 ವರ್ಷ ಕಾರಾಗೃಹ ಶಿಕ್ಷೆ ಹಾಗೂ ₹5 ಸಾವಿರ ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯ ತೀರ್ಪು ನೀಡಿದೆ.
ಜಗದೀಶನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದ ಅಂದಿನ ತನಿಖಾಧಿಕಾರಿ, ಪೊಲೀಸ್ ವೃತ್ತ ನಿರೀಕ್ಷಕ ಹಾರೂನ್ ಅಖ್ತರ್ ತನಿಖೆ ಕೈಗೊಂಡು, ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯದ ನ್ಯಾಯಾಧೀಶ ಶ್ರೀರಾಮ್ ನಾರಾಯಣ ಹೆಗಡೆ ವಿಚಾರಣೆ ಆಲಿಸಿ, ಜಗದೀಶನನ್ನು ಅಪರಾಧಿಕ ಎಂದು ತೀರ್ಮಾನಿಸಿ, ತೀರ್ಪು ನೀಡಿದರು. ಅಪರಾಧಿಗೆ ವಿಧಿಸಿದ ದಂಡದ ಮೊತ್ತದಲ್ಲಿ ₹5 ಸಾವಿರವನ್ನು ಸಂತ್ರಸ್ತೆಗೆ ನೀಡುವಂತೆ ಆದೇಶಿಸಲಾಗಿದೆ. ಪ್ರಕರಣದಲ್ಲಿ ಸರ್ಕಾರದ ಪರ ಸುನಂದಾ ಮಡಿವಾಳರ್ ವಾದ ಮಂಡಿಸಿದ್ದರು.
- - - (ಸಾಂದರ್ಭಿಕ ಚಿತ್ರ)