ಸಮಗ್ರ ಕೃಷಿ ಪದ್ಧತಿಯಿಂದ ಸಂಪನ್ಮೂಲ ಸೂಕ್ತ ರೀತಿ ಬಳಸಲು ಸಾಧ್ಯ: ಡಾ.ಕೆ.ಜಿ.ಕಾಂತರಾಜ್

KannadaprabhaNewsNetwork |  
Published : Feb 21, 2024, 02:02 AM IST
ಬೇಲೇನಹಳ್ಳಿ ಗ್ರಾಮದಲ್ಲಿ ಕೃಷಿ ಮಾಹಿತಿ ಕೇಂದ್ರ  ಉದ್ಗಾಟನೆ | Kannada Prabha

ಸಾರಾಂಶ

ಸಮಗ್ರ ಕೃಷಿ ಪದ್ಧತಿ ಸಹಾಯದಿಂದ ಸಂಪನ್ಮೂಲಗಳನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಬಹುದು ಎಂದು ಉಪವಿಭಾಗಾಧಿಕಾರಿ ಡಾ.ಕೆ.ಜಿ. ಕಾಂತರಾಜ್ ಹೇಳಿದ್ದಾರೆ.

ಬೇಲೇನಹಳ್ಳಿ ಗ್ರಾಮದಲ್ಲಿ ಕೃಷಿ ಮಾಹಿತಿ ಕೇಂದ್ರ ಉದ್ಗಾಟನೆ

ಕನ್ನಡಪ್ರಭ ವಾರ್ತೆ, ತರೀಕೆರೆ

ಸಮಗ್ರ ಕೃಷಿ ಪದ್ಧತಿ ಸಹಾಯದಿಂದ ಸಂಪನ್ಮೂಲಗಳನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಬಹುದು ಎಂದು ಉಪವಿಭಾಗಾಧಿಕಾರಿ ಡಾ.ಕೆ.ಜಿ. ಕಾಂತರಾಜ್ ಹೇಳಿದ್ದಾರೆ.

ಬೇಲೇನಹಳ್ಳಿ ಗ್ರಾಮದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ , ಕೃಷಿ ಮಹಾವಿದ್ಯಾಲಯ ಶಿವಮೊಗ್ಗದ ವಿದ್ಯಾರ್ಥಿನಿಯರು ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದಡಿ ಕೃಷಿ ಮಾಹಿತಿ ಕೇಂದ್ರ ಹೊಂಬಾಳೆ ಹೊನ್ನಾಗಲಿ ರೈತರ ಬೆಳೆ, ಹಾಗೂ ಅಡಿಕೆ ಕೃಷಿ ಮತ್ತು ಮೌಲ್ಯವರ್ಧನೆ ಬಗ್ಗೆ ಏರ್ಪಾಡಾಗಿದ್ದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಕೃಷಿ ಕಾರ್ಯಾನುಭವವನ್ನು ಗ್ರಾಮಸ್ಥರು ಸದುಪಯೋಗ ಪಡೆದುಕೊಳ್ಳಬೇಕು. ಕೃಷಿ ಮಾಹಿತಿ ಕೇಂದ್ರದಿಂದ ಮಾಹಿತಿಯನ್ನು ಪಡೆಯಬೇಕು ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿಗಳಾದ ಡಾ. ನಾಗರಾಜಪ್ಪ ಅಡಿವಪ್ಪರ್ ಅಡಿಕೆ ಕೃಷಿ ಮತ್ತು ಅಡಕೆಯ ಮೌಲ್ಯವರ್ಧನೆ ಕುರಿತು ಮಾತನಾಡಿ ಅಡಕೆ ಉತ್ಪಾದನಗಳನ್ನು ಮೌಲ್ಯವರ್ಧನೆ ಮಾಡುವುದರಿಂದ ರೈತರು ಹೆಚ್ಚಿನ ಲಾಭಗಳಿಸಬಹುದು ಎಂದು ತಿಳಿಸಿದರು.

ಬೇಲೇನಹಳ್ಳಿ ಪಿಎಂಸಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಸ್ ಡಿಎಂಸಿ ಅಧ್ಯಕ್ಷ ಕೆ.ನಂಜುಂಡಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿನಿ ಚೈತನ್ಯ ಡಿ ಅವರು ಕೃಷಿ ಮಾಹಿತಿ ಕೇಂದ್ರದ ಪರಿಚಯ ಮಾಡಿಕೊಟ್ಟರು. ವಿದ್ಯಾರ್ಥಿನಿ ಪೂರ್ಣಿಮಾ ಜಿ.ಎಸ್. ಗ್ರಾಮೀಣ ಕೃಷಿ ಕಾರ್ಯಾನುಭವದ ಬಗ್ಗೆ ತಮ್ಮ ಅನುಭವ ತಿಳಿಸಿದರು.ಗ್ರಾಮಸ್ಥರಾದ ಸೋಮಶೇಖರ್ ಹಾಗೂ ಗೌಡ್ರು ಬಸವರಾಜಪ್ಪ, ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷ ಬಿ.ಸುರೇಶ್ ಮಾತನಾಡಿದರು. ಗ್ರಾಮೀಣ ಕೃಷಿ ಕಾರ್ಯಾನುಭವದ ಸಂಯೋಜಕ ಡಾ.ಗಜೇಂದ್ರ ಟಿ.ಎಚ್. ಭಾಷಣ ಮಾಡಿದರುಬೇಲೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಇ.ಟಿ.ಕಾಂತರಾಜ್ ನಾಯ್ಕ್, ಉಪಾಧ್ಯಕ್ಷೆ ಡಿ.ಸಿ. ಶೃತಿ, ಸದಸ್ಯರಾದ ದೀಪಾ ಜಯ್ಯಣ್ಣ, ಸುಮಿತ್ರ ಸೋಮಶೇಖರ್, ಎಸ್ ಡಿಎಂಸಿ ಉಪಾಧ್ಯಕ್ಷರಾದ ಕವಿತಾ ದಾಸಾ ನಾಯ್ಕ್, ಮುಖ್ಯ ಶಿಕ್ಷಕರು ಕಲ್ಲಪ್ಪ ಪಿ.ಎಂ.. ಸಹಾಯಕ ಪ್ರಾಧ್ಯಾಪಕರಾದ ಡಾ.ಚಂಪಾ ಬಿ.ವಿ. ಡಾ. ರೇಣುಕಸ್ವಾಮಿ, ಪನ್ನಗ ಅಶೋಕ್ ಬೋಗರ್ . ನಿಸರ್ಗ ಕೆ., ಚಂದನ ಜೆ.ಪಿ ಭಾಗವಹಿಸಿದ್ದರು.

20ಕೆಟಿಆರ್.ಕೆ.1ಃ

ತರೀಕೆರೆ ಸಮೀಪದ ಬೇಲೇನಹಳ್ಳಿ ಗ್ರಾಮದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಉಪವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಮಾತನಾಡಿದರು. ಬೇಲೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಇ.ಟಿ.ಕಾಂತರಾಜ್ ನಾಯ್ಕ, ಶಾಲೆ ಎಸ್ ಡಿಎಂಸಿ ಅಧ್ಯಕ್ಷ ಕೆ.ನಂಜುಂಡಸ್ವಾಮಿ ಸಂಪನ್ಮೂಲ ವ್ಯಕ್ತಿಗಳಾದ ಡಾ. ನಾಗರಾಜಪ್ಪ ಅಡಿವಪ್ಪರ್ ಮತ್ತಿತರರು ಇದ್ದರು.

----------------------

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ