ಕನ್ನಡಪ್ರಭ ವಾರ್ತೆ ಶಿರಾ
ಅವರು ಶನಿವಾರ ತಾಲೂಕಿನ ಹುಲಿಕುಂಟೆ ಹೋಬಳಿಯ ಹೊಸಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀ ವಿದ್ಯಾಗಣಪತಿ, ಶ್ರೀ ಆಂಜನೇಯ ಸ್ವಾಮಿ, ಶ್ರೀ ಭೈರಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಡೆದ ಮಂಡಲ ಪೂಜಾ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದರು. ಎಲ್ಲರೂ ಒಗ್ಗಟ್ಟಿನಿಂದ ದೇವಸ್ಥಾನಗಳನ್ನು ನಿರ್ಮಾಣ ಮಾಡಿದ್ದೀರಿ, ಅದೇ ರೀತಿ ತಂದೆ- ತಾಯಿ ಸೇವೆ ಮಾಡಿದರೆ, ಎಲ್ಲಾ ದೇವರುಗಳ ಸೇವೆ ಮಾಡಿದಷ್ಟೇ ಪುಣ್ಯ ಲಭಿಸಲಿದೆ. ಕಷ್ಟದಲ್ಲಿರುವವರಿಗೆ ಸಹಾಯ ಮಾಡುವಂತಹ ಮನೋಭಾವವನ್ನು ಎಲ್ಲರೂ ರೂಢಿಸಿಕೊಳ್ಳಬೇಕು. ನಮ್ಮ ಧಾರ್ಮಿಕ ಸಂಸ್ಕೃತಿ ಶ್ರೀಮಂತವಾಗಿದ್ದು, ನಾವು ನಡೆದುಕೊಳ್ಳುವ ರೀತಿ ಮೇಲೆ ಭಗವಂತ ಒಲಿಯಲಿದ್ದಾನೆ. ರಾಜ್ಯದಲ್ಲಿ ಅನ್ನದಾತ ಸಂಕಷ್ಟದಲ್ಲಿದ್ದು ಈ ಮೂರು ದೇವರುಗಳ ಕೃಪಾಕಟಾಕ್ಷದಿಂದ ಉತ್ತಮ ಮಳೆ- ಬೆಳೆಯಾಗಿ ನಾಡು ಸಂತೃಪ್ತಿ ಕಾಣಲಿ ಎಂದರು.
ವಿಧಾನಪರಿಷತ್ ಸದಸ್ಯ ಚಿದಾನಂದ ಎಂ. ಗೌಡ ಮಾತನಾಡಿ, ಹೊಸಹಳ್ಳಿ ಗ್ರಾಮದಲ್ಲಿ ದೇವಸ್ಥಾನ ನಿರ್ಮಾಣ ಮಾಡಬೇಕೆಂಬ ನಮ್ಮ ಸಂಕಲ್ಪಕ್ಕೆ ಬಲ ನೀಡಿ ಆರ್ಥಿಕ ಶಕ್ತಿ ಕೊಟ್ಟು, ದೇವಸ್ಥಾನಗಳನ್ನು ನಿರ್ಮಾಣ ಮಾಡಲು ಸಹಕರಿಸಿ, ೪೭ ದಿನಗಳ ಕಾಲ ವಿಶೇಷ ಪೂಜಾ ಕಾರ್ಯಗಳನ್ನು ನೆರವೇರಿಸಿದ ಎಲ್ಲರಿಗೂ ಹೃದಯ ತುಂಬಿದ ಕೃತಜ್ಞತೆಗಳು. ಒಗ್ಗಟ್ಟು, ಸ್ನೇಹ, ಪ್ರೀತಿ, ವಿಶ್ವಾಸದಿಂದ ಹಳ್ಳಿಗಳಲ್ಲಿ ಜೀವನ ಕಟ್ಟಿಕೊಂಡಾಗ ಬದುಕು ಸಾರ್ಥಕತೆ ಕಾಣುತ್ತದೆ ಎಂದರು.ನಿವೃತ್ತ ಸಾರಿಗೆ ಅಧಿಕಾರಿ, ದೇವಸ್ಥಾನ ದೇವಸ್ಥಾನ ಸಮಿತಿ ಅಧ್ಯಕ್ಷ ತಿಮ್ಮರಾಯಪ್ಪ ಮಾತನಾಡಿ, ಹೊಸಹಳ್ಳಿ ಗ್ರಾಮದಲ್ಲಿ ಭವ್ಯ ದೇಗುಲಗಳು ನಿರ್ಮಾಣ ಮಾಡಬೇಕೆಂಬ ನಮ್ಮೆಲ್ಲರ ಸಂಕಲ್ಪ ನಿಮ್ಮೆಲ್ಲರ ಸಹಕಾರದೊಂದಿಗೆ ಸಾಕಾರಗೊಂಡಿದ್ದು, ನನ್ನ ಜೀವನದಲ್ಲಿ ಎಂದೂ ಮರೆಯಲು ಸಾಧ್ಯವಿಲ್ಲ. ಜನರ ನಂಬಿಕೆ, ವಿಶ್ವಾಸಕ್ಕೆ ಚ್ಯುತಿ ಬಾರದಂತೆ ಕೊಟ್ಟ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿರುವ ತೃಪ್ತಿ ನನಗೆ ಇದೆ ಎಂದರು.