ಥ್ರೋಬಾಲ್: ಜ್ಞಾನಸುಧಾ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ

KannadaprabhaNewsNetwork |  
Published : Sep 08, 2026, 03:15 AM IST
ಉಡುಪಿ ಕೇರಳ ಸಮಾಜಂನ ಓಣಂ ಆಚರಣೆಯಲ್ಲಿ ಸಾಧಕರನ್ನು ಗೌರವಿಸಲಾಯಿತು | Kannada Prabha

ಸಾರಾಂಶ

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಸ.ಪ.ಪೂ.ಕಾಲೇಜು ಬೆಳ್ಮಣ್ ಇವರ ಜಂಟಿ ಆಶ್ರಯದಲ್ಲಿ ಜರುಗಿದ ಕಾರ್ಕಳ ತಾಲೂಕು ಮಟ್ಟದ ಥ್ರೋಬಾಲ್ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದ್ದು, ಬಾಲಕರ ತಂಡ ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಿದೆ. ಸಮರ್ಥ್ ನಾಯ್ಕ್, ವರುಣ್ ಎಸ್.ಜಿ ಮತ್ತು ಅಹನ್ ಜೈನ್ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಛಾಯಾ ಎಸ್ ಶೆಟ್ಟಿ ಮತ್ತು ಅಭಯ್ ಕೋಟಿ ಬೆಸ್ಟ್ ಥ್ರೋವರ್ ಅವಾರ್ಡ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು.

ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಸ.ಪ.ಪೂ.ಕಾಲೇಜು ಬೆಳ್ಮಣ್ ಇವರ ಜಂಟಿ ಆಶ್ರಯದಲ್ಲಿ ಜರುಗಿದ ಕಾರ್ಕಳ ತಾಲೂಕು ಮಟ್ಟದ ಥ್ರೋಬಾಲ್ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದ್ದು, ಬಾಲಕರ ತಂಡ ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಿದೆ. ಸಮರ್ಥ್ ನಾಯ್ಕ್, ವರುಣ್ ಎಸ್.ಜಿ ಮತ್ತು ಅಹನ್ ಜೈನ್ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಛಾಯಾ ಎಸ್ ಶೆಟ್ಟಿ ಮತ್ತು ಅಭಯ್ ಕೋಟಿ ಬೆಸ್ಟ್ ಥ್ರೋವರ್ ಅವಾರ್ಡ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು. ವಾಲಿಬಾಲ್‌ನಲ್ಲಿ ಪೂರ್ವಿಕ್ ಬಾಬು ಜಿಲ್ಲಾ ಮಟ್ಟಕ್ಕೆ

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ರಾಜೇಶ್ವರಿ ಪದವಿ ಪೂರ್ವ ಕಾಲೇಜು ಸಾಣೂರು ಇವರ ಜಂಟಿ ಆಶ್ರಯದಲ್ಲಿ ಜರುಗಿದ ಕಾರ್ಕಳ ತಾಲೂಕು ಮಟ್ಟದ ವಾಲಿಬಾಲ್ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪೂರ್ವಿಕ್ ಬಾಬು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.

ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ ಅಭಿನಂದಿಸಿ, ಶುಭಹಾರೈಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯಾವ ಪುರುಷಾರ್ಥಕ್ಕಾಗಿ ಬಿಜೆಪಿ ಪಾದಯಾತ್ರೆ?
ಪತ್ರಿಕಾ ವಿತರಕರಿಗೆ ಜೀವನ ಭದ್ರತೆ ಒದಗಿಸಲಿ