ಬಹುತೇಕ ಕಡೆಗಳಲ್ಲಿ ಗುಡುಗು, ಮಿಂಚಿನೊಂದಿಗೆ ಅಬ್ಬರದ ಮಳೆ

KannadaprabhaNewsNetwork |  
Published : Mar 26, 2025, 01:37 AM IST
ಕಾರವಾರ ನಗರದಲ್ಲಿ ಹಠಾತ್ತಾಗಿ ಬಂದು ಮಾಯವಾದ ಮಳೆ  | Kannada Prabha

ಸಾರಾಂಶ

ಕಾರವಾರದಲ್ಲಿ ಬಿರುಗಾಳಿ ಜೋರಾಗಿ ಬೀಸಿತಾದರೂ ಕೇವಲ ಒಂದು ನಿಮಿಷ ಮಾತ್ರ ಭರ್ರೆಂದು ಮಳೆ ಬಂದು ಮಾಯವಾಯಿತು.

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಮಂಗಳವಾರ ಮಳೆಯಾಗಿದೆ. ಕೆಲವೆಡೆ ಗುಡುಗು, ಮಿಂಚಿನೊಂದಿಗೆ ಭಾರಿ ಮಳೆಯಾದರೆ ಕೆಲವೆಡೆ ಸಾಧಾರಣ ಮಳೆಯಾಗಿದೆ. ಇದರಿಂದ ಬಿಸಿಲ ಬೇಗುದಿಯಲ್ಲಿದ್ದ ಜನತೆಗೆ ತಂಪೆರೆದಂತಾಗಿದೆ.

ಜೋಯಿಡಾ, ಮುಂಡಗೋಡ, ಯಲ್ಲಾಪುರ, ದಾಂಡೇಲಿಗಳಲ್ಲಿ ಗುಡುಗು, ಮಿಂಚಿನ ಅಬ್ಬರದೊಂದಿಗೆ ಭಾರಿ ಮಳೆಯಾಗಿದೆ. ಶಿರಸಿಯಲ್ಲೂ ಭಾರಿ ಮಳೆಯಾಗಿದೆ. ಕೆಲವೆಡೆ ಅರ್ಧ ಗಂಟೆಗೂ ಹೆಚ್ಚು ಕಾಲ ಜೋರಾದ ಮಳೆ ಸುರಿದಿದೆ.

ಕಾರವಾರದಲ್ಲಿ ಬಿರುಗಾಳಿ ಜೋರಾಗಿ ಬೀಸಿತಾದರೂ ಕೇವಲ ಒಂದು ನಿಮಿಷ ಮಾತ್ರ ಭರ್ರೆಂದು ಮಳೆ ಬಂದು ಮಾಯವಾಯಿತು. ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳದ ವಿವಿಧೆಡೆ ಸಾಧಾರಣ ಮಳೆಯಾಗಿದೆ.

20 ದಿನಗಳಿಗೂ ಹೆಚ್ಚು ಕಾಲ ಜಿಲ್ಲೆಯಾದ್ಯಂತ ಬಿಸಿಲಿನ ಝಳ,ಸೆಕೆಯಿಂದ ಜನತೆ ಬಸವಳಿದಿದ್ದರು. ಮಂಗಳವಾರ ಮಧ್ಯಾಹ್ನವಾಗುತ್ತಿದ್ದಂತೆ ಏಕಾಏಕಿ ಮೋಡ ಮುಸುಕಿದ ವಾತಾವರಣ ಉಂಟಾಗಿ ಬಿರುಗಾಳಿ, ಗುಡುಗು, ಮಿಂಚಿನೊಂದಿಗೆ ಮಳೆ ಸುರಿಯ ತೊಡಗಿತು. ಪಟ್ಟಣಗಳಲ್ಲಿದ್ದ ಜನತೆ ಅಂಗಡಿ, ಮಳಿಗೆಗಳಲ್ಲಿ ಆಶ್ರಯ ಪಡೆದರು.

ಮಳೆ ಬರುತ್ತಿದ್ದಂತೆ ಸೆಕೆ ಮಾಯವಾಗಿ ಜಿಲ್ಲೆಯ ಎಲ್ಲೆಡೆ ತಂಪಾದ ವಾತಾವರಣ ಉಂಟಾಗಿದೆ.ತಾತ್ಕಾಲಿಕವಾಗಿಯಾದರೂ ಕೂಲ್ ಕೂಲ್ ಆಗಿರುವುದರಿಂದ ಜನತೆ ಸಮಾಧಾನದ ನಿಟ್ಟುಸಿರು ಬಿಡುತ್ತಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌