ಬೆಂ.ಗ್ರಾ ಜಿಲ್ಲೆಯಲ್ಲಿ ಇಂದು- ನಾಳೆ ಗುಡುಗು ಸಹಿತ ಮಳೆ

KannadaprabhaNewsNetwork |  
Published : Jun 04, 2026, 01:15 AM IST
ಗುಡುಗು ಸಹಿತ ಮಳೆ | Kannada Prabha

ಸಾರಾಂಶ

ಸಾರ್ವಜನಿಕರು ತಗ್ಗು ಪ್ರದೇಶದಲ್ಲಿ ಅಥವಾ ಮಳೆಯಿಂದ ಅಪಾಯಕ್ಕೀಡಾಗುವ ಪ್ರದೇಶದಲ್ಲಿ ವಾಸವಿದ್ದಲ್ಲಿ ಅಥವಾ ಶಿಥಿಲಾವಸ್ಥೆಯಿಂದ ಜಾರುವ ಹಂತದಲ್ಲಿರುವ ಕಂಪೌಂಡ್ ಅಥವಾ ಮನೆಯ ಗೋಡೆ, ಇಂತಹ ದುರ್ಬಲವಾದ ಕಟ್ಟಡದಲ್ಲಿ ವಾಸವಿರುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ವಾಸಿಸುವುದು. ಗ್ರಾಮೀಣ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಕಾಲುವೆ, ಕಿರು ಸೇತುವೆ ಇತ್ಯಾದಿಗಳನ್ನು ದಾಟುವ ಮುನ್ನ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ತಿಳಿಸಿದೆ.

ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ

ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜೂ.4 ಮತ್ತು 5ರಂದು ಮಿಂಚು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇರುತ್ತದೆ.

ಈ ಹಿನ್ನೆಲೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ಸೂಚನೆಗಳನ್ನು ನೀಡಲಾಗಿದೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿನ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರವನ್ನು (ಜಿಲ್ಲಾ ಸಹಾಯವಾಣಿ ಸಂಖ್ಯೆ: 080-28388005) ತೆರೆಯಲಾಗಿದ್ದು, ಸಾರ್ವಜನಿಕರು ಜಿಲ್ಲೆಯ ಹವಾಮಾನ ಪರಿಸ್ಥಿತಿಯ ಕುರಿತಂತೆ 24/7 ವರದಿಗಳನ್ನು ಪರಿಶೀಲಿಸಬಹುದಾಗಿರುತ್ತದೆ.

ಅಲ್ಲದೆ ಸಾರ್ವಜನಿಕರು ಯಾವುದೇ ಅನಧಿಕೃತ ವದಂತಿಗಳಿಗೆ ಕಿವಿಗೊಡುವ ಅಗತ್ಯವಿಲ್ಲ. ನೀರು ಇರುವ ತಗ್ಗು ಪ್ರದೇಶ, ಕೆರೆ, ಕಾಲುವೆ ಪ್ರದೇಶಗಳಿಗೆ ಹೋಗದಂತೆ ಸಾರ್ವಜನಿಕರು ಹಾಗೂ ಮುಖ್ಯವಾಗಿ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆವಹಿಸುವುದು ಅಗತ್ಯ. ಕೃಷಿಕರು ಮಳೆಯಂತಹ ಸಂದರ್ಭದಲ್ಲಿ ಕೃಷಿ ಚಟುವಟಿಕೆಯಿಂದ ದೂರವಿರಬೇಕು. ಸಾರ್ವಜನಿಕರು, ಮಕ್ಕಳು, ಕಾರ್ಮಿಕರು ಮಳೆ ಬೀಳುವ ಸಂದರ್ಭದಲ್ಲಿ ಹೊರಗೆ ತಿರುಗಾಡದೆ, ಸೂಕ್ತ ಕಟ್ಟಡದಲ್ಲಿ ಆಶ್ರಯ ಪಡೆಯುವುದು ಅಗತ್ಯ.

ಈ ಸಂದರ್ಭದಲ್ಲಿ ಮಕ್ಕಳು, ಸಾರ್ವಜನಿಕರು ಅಪಾಯಕಾರಿ ಮರ, ವಿದ್ಯುತ್ ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರುವುದು. ದುರ್ಬಲವಾದ, ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ, ಮರಗಳ ಕೆಳಗೆ ನಿಲ್ಲಬಾರದು. ಮೇಲಿನ ಅಂಶಗಳನ್ನು ಮಳೆ- ಗಾಳಿಯಂತಹ ಸಂದರ್ಭಗಳಲ್ಲಿ ಚಾಚೂ ತಪ್ಪದೇ ಕಡ್ಡಾಯವಾಗಿ ಪಾಲಿಸುವುದು ಅಗತ್ಯ ಎಂದು ತಿಳಿಸಿದೆ.

ಸಾರ್ವಜನಿಕರು ತಗ್ಗು ಪ್ರದೇಶದಲ್ಲಿ ಅಥವಾ ಮಳೆಯಿಂದ ಅಪಾಯಕ್ಕೀಡಾಗುವ ಪ್ರದೇಶದಲ್ಲಿ ವಾಸವಿದ್ದಲ್ಲಿ ಅಥವಾ ಶಿಥಿಲಾವಸ್ಥೆಯಿಂದ ಜಾರುವ ಹಂತದಲ್ಲಿರುವ ಕಂಪೌಂಡ್ ಅಥವಾ ಮನೆಯ ಗೋಡೆ, ಇಂತಹ ದುರ್ಬಲವಾದ ಕಟ್ಟಡದಲ್ಲಿ ವಾಸವಿರುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ವಾಸಿಸುವುದು. ಗ್ರಾಮೀಣ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಕಾಲುವೆ, ಕಿರು ಸೇತುವೆ ಇತ್ಯಾದಿಗಳನ್ನು ದಾಟುವ ಮುನ್ನ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಪಪ್ರಚಾರ ಸಹಿಸಲ್ಲ: ಕಾಂಗ್ರೆಸ್‌ಗೆ ಎಸ್‌ಡಿಪಿಐ ಎಚ್ಚರಿಕೆ
2 ತಿಂಗಳಲ್ಲಿ 5 ಕೋಟಿ ಸಸಿ ನೆಡುವ, ಕೆರೆಗಳ ಪುನಶ್ಚೇತನ ಅಭಿಯಾನ