ವರಿಷ್ಠರ ತೀರ್ಮಾನಕ್ಕೆ ಬದ್ಧ: ನಳಿನ್‌ ಕುಮಾರ್‌

KannadaprabhaNewsNetwork |  
Published : Mar 01, 2024, 02:17 AM IST
11 | Kannada Prabha

ಸಾರಾಂಶ

ರಾಮಮಂದಿರ ನಿರ್ಮಾಣದ ಬಳಿಕ ಬಿಜೆಪಿ ಪರ ವಾತವರಣ ಅದ್ಭುತವಾಗಿದೆ. ವಿಧಾನಸಭಾ ಚುನಾವಣೆಗೂ ಲೋಕಸಭಾ ಚುನಾವಣೆಗೂ ವ್ಯತ್ಯಾಸ ಇದೆ. ಹಿಂದುತ್ವ, ರಾಷ್ಟ್ರವಾದ, ಅಭಿವೃದ್ಧಿ ವಿಚಾರವಾಗಿ ಜನರು ಒಗ್ಗಟಾಗುತ್ತಾರೆ ಎಂದು ನಳಿನ್ ಕುಮಾರ್‌ ಹೇಳಿದರು.

ಕನ್ನಡಪ್ರಭ ವಾರ್ತೆ ಮಂಗಳೂರುಮುಂಬರುವ ಲೋಕಸಭೆ ಚುನಾವಣೆ ಸ್ಪರ್ಧೆಗೆ ಟಿಕೆಟ್‌ ನೀಡುವುದು ರಾಷ್ಟ್ರೀಯ ನಾಯಕರ ತೀರ್ಮಾನ. ವರಿಷ್ಠರು ಏನೇ ತೀರ್ಮಾನ ಮಾಡಿದರೂ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಅದಕ್ಕೆ ಬದ್ಧ ಎಂದು ಸಂಸದ ನಳಿನ್‌ ಕುಮಾರ್ ಕಟೀಲು ಹೇಳಿದ್ದಾರೆ.ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ನಳಿನ್‌, ಪುತ್ತಿಲ ಪರಿವಾರದಿಂದ ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಸ್ಪರ್ಧೆ ಸಾಧ್ಯತೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪುತ್ತಿಲ ಪರಿವಾರ ಒಂದು ಸ್ವತಂತ್ರ ಸಂಸ್ಥೆ. ಆ ಸಂಸ್ಥೆಗೆ ತೀರ್ಮಾನ ತೆಗೆದುಕೊಳ್ಳುವ ಸ್ವಾತಂತ್ರ್ಯ ಇದೆ. ಅವರ ಮನವೊಲಿಕೆಗೆ ಪಕ್ಷ ಪ್ರಯತ್ನ ಮಾಡಿದೆ. ಬಿಜೆಪಿ ಬಹಳ ವರ್ಷಗಳ ಹೋರಾಟದಿಂದ ಇದೀಗ ಅತಿ ದೊಡ್ಡ ಪಕ್ಷವಾಗಿ ಬೆಳೆದಿದೆ. ರಾಷ್ಟ್ರೀಯ ಪಕ್ಷ ಕಾಂಗ್ರೆಸ್‌ನ್ನು ಎದುರಿಸಿ ಲೋಕಸಭೆಯಲ್ಲಿ ಅತಿ ಹೆಚ್ಚು ಸೀಟು ಗೆದ್ದಿದೆ. ಪಕ್ಷಕ್ಕೆ ಎದುರಾಳಿಯ ಪ್ರಶ್ನೆ ಇಲ್ಲ. ಇದು ಪ್ರಜಾಪ್ರಭುತ್ವ, ಚುನಾವಣೆಗೆ ನಿಲ್ಲುವ ಹಕ್ಕು ಎಲ್ಲರಿಗೂ ಇದೆ. ಪ್ರತಿ ಚುನಾವಣೆಗೆ ಬಂದಾಗ ಹತ್ತಾರು ಸಮಸ್ಯೆಗಳು ಉದ್ಭವವಾಗುತ್ತವೆ. ಆ ಎಲ್ಲ ಸವಾಲುಗಳನ್ನು ಬಿಜೆಪಿ ಗೆದ್ದು ಗೆಲುವು ಸಾಧಿಸಿದೆ. ಈ ಬಾರಿಯ ಚುನಾವಣೆಯಲ್ಲೂ ಭಾರೀ ಗೆಲುವು ಸಾಧಿಸುವುದು ನಿಶ್ಚಿತ ಎಂದರು.ರಾಮಮಂದಿರ ನಿರ್ಮಾಣದ ಬಳಿಕ ಬಿಜೆಪಿ ಪರ ವಾತವರಣ ಅದ್ಭುತವಾಗಿದೆ. ವಿಧಾನಸಭಾ ಚುನಾವಣೆಗೂ ಲೋಕಸಭಾ ಚುನಾವಣೆಗೂ ವ್ಯತ್ಯಾಸ ಇದೆ. ಹಿಂದುತ್ವ, ರಾಷ್ಟ್ರವಾದ, ಅಭಿವೃದ್ಧಿ ವಿಚಾರವಾಗಿ ಜನರು ಒಗ್ಗಟಾಗುತ್ತಾರೆ ಎಂದು ನಳಿನ್ ಕುಮಾರ್‌ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾವೇರಿ 33 ಹಳ್ಳಿಗಳಲ್ಲಿ ಪ್ರತಿ ದಿನ ಸಂಜೆ 7- 9 ಗಂಟೆವರೆಗೆ ಮೊಬೈಲ್‌, ಟಿವಿ ಬಂದ್‌
ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್ ಕೊಟ್ರು ಸಚಿವೆ ಲಕ್ಷ್ಮೀ