ಹುದಿಕೇರಿಯಲ್ಲಿ ಹುಲಿ ದಾಳಿ: ಹಸು ಬಲಿ, ಮತ್ತೆರಡು ಗಂಭೀರ

KannadaprabhaNewsNetwork |  
Published : Jul 15, 2025, 01:00 AM IST
ಚಿತ್ರ :  14ಎಂಡಿಕೆ3 : ಹುಲಿ ದಾಳಿಯಿಂದ ಬಲಿಯಾಗಿರುವ ಹಸು. | Kannada Prabha

ಸಾರಾಂಶ

ಹುದಿಕೇರಿ ಗ್ರಾಮದಲ್ಲಿ ಮೇಯಲು ಕಟ್ಟಿದ ಹಸುಗಳ ಮೇಲೆ ಹುಲಿ ದಾಳಿ ನಡೆಸಿದ್ದು ಒಂದು ಹಸುವನ್ನು ಕೊಂದು ಹಾಕಿದೆ.

ಕನ್ನಡಪ್ರಭ ವಾರ್ತೆ ಶ್ರೀಮಂಗಲ

ಪೊನ್ನಂಪೇಟೆ ತಾಲೂಕು ಹುದಿಕೇರಿ ಗ್ರಾಮದಲ್ಲಿ ಮೇಯಲು ಕಟ್ಟಿದ್ದ ಹಸುಗಳ ಮೇಲೆ ಹುಲಿ ದಾಳಿ ನಡೆಸಿದ್ದು ಒಂದು ಹಸುವನ್ನು ಕೊಂದು ಹಾಕಿದ್ದು ಮತ್ತೆರಡು ಹಸುಗಳ ಮೇಲೆ ಗಂಭೀರವಾಗಿ ಗಾಯಮಾಡಿದೆ.ಶನಿವಾರ ಸಂಜೆ ಘಟನೆ ನಡೆದಿದ್ದು, ಸಂಜೆ ಹಸುವನ್ನು ಕೊಟ್ಟಿಗೆಗೆ ಸೇರಿಸಲು ತೆರಳಿದ ವೇಳೆ ಘಟನೆ ಅರಿವಾಗಿದೆ. ಗ್ರಾಮದ ರೈತ ಕುಂಞಪಂಡ ರಾಜೇಶ್ ಅವರಿಗೆ ಸೇರಿದ ಹಸುಗಳ ಹುಲಿ ಮೇಲೆ ದಾಳಿ ನಡೆಸಿದ್ದು, ರೈತ ರಾಜೇಶ್ ಕುಟುಂಬ ಇದರಿಂದ ನೊಂದಿದ್ದು, ಹುಲಿ ಗ್ರಾಮದಲ್ಲಿಯೇ ಇರುವ ಆತಂಕವನ್ನು ಗ್ರಾಮಸ್ಥರು ವ್ಯಕ್ತಪಡಿಸಿದ್ದಾರೆ.

-----------------------------------

ನವೆಂಬರ್, ಡಿಸೆಂಬರ್ ತಿಂಗಳಿನಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟ: ಮೋಕ್ಷಿತ್

ಕನ್ನಡಪ್ರಭ ವಾರ್ತೆ ಸೋಮವಾರಪೇಟೆಕಳೆದ 11 ವರ್ಷಗಳ ಹಿಂದೆ ಜಿಲ್ಲೆಯಲ್ಲಿ ಪ್ರಾರಂಭಗೊಂಡ ಅಖಿಲ ಭಾರತ ವೀರಶೈವ ಸಮಾಜದ ಯುವ ಘಟಕ ಹತ್ತು ಹಲವು ಸಮಾಜ ಮುಖಿ ಕೆಲಸಗಳನ್ನು ಮಾಡಿಕೊಂಡು ಬರುತ್ತಿದ್ದು, ಮುಂದಿನ ದಿನಗಳಲ್ಲಿಯೂ ಅನೇಕ ಕಾರ್ಯಕ್ರಮ ನಡೆಸಲಾಗುವುದು ಎಂದು ಜಿಲ್ಲಾ ಸಮಿತಿ ಅಧ್ಯಕ್ಷ ಮೋಕ್ಷಿತ್ ತಿಳಿಸಿದರು.

ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಕಷ್ಟು ಸಮಾಜ ಸೇವೆಗಳನ್ನು ಯುವ ಘಟಕದ ವತಿಯಿಂದ ಮಾಡಿಕೊಂಡು ಬರುತ್ತಿದೆ. ಈ ನಿಟ್ಟಿನಲ್ಲಿ ಮುಂದಿನ ನವೆಂಬರ್ ಅಥವಾ ಡಿಸೆಂಬರ್ ತಿಂಗಳಿನಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ನಡೆಸಲಾಗುವುದು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದರು.

ಜಿಲ್ಲೆಯಲ್ಲಿ ಯುವ ಘಟಕವನ್ನು ಪ್ರಬಲವಾಗಿ ಕಟ್ಟುವ ನಿಟ್ಟಿನಲ್ಲಿ ಎಲ್ಲ ತಾಲ್ಲೂಕು ಘಟಕಗಳನ್ನು ಪುನರ್ ರಚನೆ ಮಾಡಲಾಗುತ್ತಿದೆ. ಸೋಮವಾರಪೇಟೆ ತಾಲೂಕು ಘಟಕಕ್ಕೆ ಡಿ.ಯು. ಕಿರಣ್ ಅವರನ್ನು ಅಧ್ಯಕ್ಷರನ್ನಾಗಿ, ಪ್ರಧಾನ ಕಾರ್ಯದರ್ಶಿಯನ್ನಾಗಿ ರತನ್ ಮಹೇಶ್ ಅವರನ್ನು ನೇಮಿಸಲಾಗಿದೆ. ಇವರು ಮುಂದಿನ 20 ದಿನಗಳ ಒಳಗೆ ಪೂರ್ಣ ಪ್ರಮಾಣದ ಸಮಿತಿ ರಚಿಸಲಿದ್ದಾರೆ. ನಂತರ ಜಿಲ್ಲೆಯಲ್ಲಿ ಎಲ್ಲ ತಾಲ್ಲೂಕು ಘಟಕಗಳ ಪದಾಧಿಕಾರಿಗಳ ಮಾಹಿತಿಯನ್ನು ರಾಜ್ಯದ ಕೇಂದ್ರ ಸಮಿತಿಗೆ ಕಳಿಸಲಾಗುವುದು ಎಂದು ತಿಳಿಸಿದರು.

ತಾಲ್ಲೂಕು ಘಟಕದ ಅಧ್ಯಕ್ಷ ಕಿರಣ್ ಮಾತನಾಡಿ, ಹಿರಿಯರ ಮಾರ್ಗದರ್ಶನದಂತೆ ತಾಲ್ಲೂಕಿನಲ್ಲಿ ಸಮಾಜದ ಅಭಿವೃದ್ಧಿಗಾಗಿ ಕೆಲಸ ಮಾಡಲಾಗುವುದು ಎಂದು ತಿಳಿಸಿದರು

ಗೋಷ್ಠಿಯಲ್ಲಿ ಕೊಡಗು ಜಿಲ್ಲಾ ವೀರಶೈವ ಸಮಾಜದ ಮಾಜಿ ಉಪಾಧ್ಯಕ್ಷ ಕಾಂತರಾಜ್, ತಾಲೂಕು ಘಟಕದ ಅಧ್ಯಕ್ಷ ಆದರ್ಶ್, ಯುವ ಘಟಕದ ಪ್ರಧಾನ ಕಾರ್ಯದರ್ಶಿ ರತನ್ ಮಹೇಶ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!