ಪೊನ್ನಂಪೇಟೆ: ಕಾಫಿ ತೋಟದಲ್ಲಿ ಹುಲಿ ಮೃತದೇಹ ಪತ್ತೆಯಾದ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ವೆಸ್ಟ್ ನೆಮ್ಮಲೆ ಗ್ರಾಮದಲ್ಲಿ ಬುಧವಾರ ನಡೆದಿದೆ.
ಪೊನ್ನಂಪೇಟೆ ತಾಲೂಕಿನ ಕಾಡಂಚಿನ ಪ್ರದೇಶದಲ್ಲಿ ಹುಲಿ ಓಡಾಟ ಸಾಮಾನ್ಯವಾಗಿದ್ದು, ಈ ಭಾಗದಲ್ಲಿ ಜನ, ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದೆ.
----------------------------ತೋಟಗಳಿಗೆ ಕಾಡಾನೆ ಹಾವಳಿ: ಸಂಕೇತ ಪೂವಯ್ಯ ಭೇಟಿ, ಪರಿಶೀಲನೆ
ಕನ್ನಡಪ್ರಭ ವಾರ್ತೆ ನಾಪೋಕ್ಲುನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಡಪಾಲ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಕಾಡಾನೆಗಳ ಹಾವಳಿಯಿಂದ ತೋಟಗಳಿಗೆ ಹಾನಿಯಾಗಿತ್ತು. ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ ಪೂವಯ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅರಣ್ಯಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ಅವರು ಕೂಡಲೇ ಆನೆಗಳನ್ನು ಕಾಡಿಗೆ ಅಟ್ಟಬೇಕು ಎಂದರು.
ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೋಡೀರ ವಿನೋದ್ ನಾಣಯ್ಯ, ಗ್ರಾಮ ಪಂಚಾಯಿತಿ ಸದಸ್ಯರಾದ ಸುಬೀರ್ ಸಿ.ಇ, ಮೊಹಮ್ಮದ್ ಎಡಪಾಲ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಶರೀಫ್, ಶಾಫಿ, ಜಕ್ರಿಯ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.