ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ಪ್ರಾಥಮಿಕ ಮಾಹಿತಿಯಂತೆ ಹುಲಿ ಸುಮಾರು ಒಂದು ದಿನದ ಹಿಂದೆಯೇ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ. ಮೃತದೇಹ ಪತ್ತೆಯಾಗುತ್ತಿದ್ದಂತೆಯೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಹಿರಿಯ ಅಧಿಕಾರಿಗಳೂ ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ.
ಕೇಂದ್ರ ಸರ್ಕಾರದ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಮಾರ್ಗಸೂಚಿಗಳ ಪ್ರಕಾರ ಮಂಗಳವಾರ ಮರಣೋತ್ತರ ಪರೀಕ್ಷೆ ನಡೆಸಲಾಗಲಿದ್ದು, ಹುಲಿಯ ಸಾವಿಗೆ ನಿಖರ ಕಾರಣ ಪರೀಕ್ಷಾ ವರದಿ ಬಳಿಕವೇ ತಿಳಿದುಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಈ ನಡುವೆ, ಹುಲಿಯ ಸಾವಿನ ಕುರಿತು ಸಮಗ್ರ ತನಿಖೆ ನಡೆಸಿ, ಅದು ಸಹಜ ಸಾವೇ ಅಥವಾ ಬೇರೆ ಯಾವುದೇ ಕಾರಣದಿಂದ ಸಂಭವಿಸಿದೆಯೇ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ವನ್ಯಜೀವಿ ಪ್ರೇಮಿಗಳು ಆಗ್ರಹಿಸಿದ್ದಾರೆ. ತಪ್ಪಿತಸ್ಥರು ಇದ್ದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದ್ದಾರೆ. ಅರಣ್ಯ ಇಲಾಖೆ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದೆ.ಫೋಟೋ: