ವಿಶ್ವವಿಖ್ಯಾತ ಹಂಪಿ ಹಾಗೂ ಕೊಪ್ಪಳ ಜಿಲ್ಲೆ ವ್ಯಾಪ್ತಿಯ ಕಿಷ್ಕಂದದಲ್ಲಿ ಹುಲಿ ಪ್ರತ್ಯಕ್ಷವಾಗಿರುವುದು ಸ್ಥಳೀಯ ನಾಗರಕರಲ್ಲಿ ಆತಂಕಕ್ಕೆ ಒಳಗಾಗಿದ್ದಾರೆ.
ಹೊಸಪೇಟೆ: ವಿಶ್ವವಿಖ್ಯಾತ ಹಂಪಿ ಹಾಗೂ ಕೊಪ್ಪಳ ಜಿಲ್ಲೆ ವ್ಯಾಪ್ತಿಯ ಕಿಷ್ಕಂದದಲ್ಲಿ ಹುಲಿ ಪ್ರತ್ಯಕ್ಷವಾಗಿರುವುದು ಸ್ಥಳೀಯ ನಾಗರಕರಲ್ಲಿ ಆತಂಕಕ್ಕೆ ಒಳಗಾಗಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಕೊಪ್ಪಳ ಜಿಲ್ಲೆಯ ವ್ಯಾಪ್ತಿಯಲ್ಲಿ ಹುಲಿಯೂ ಪ್ರತ್ಯಕ್ಷವಾಗಿರುವುದು ಅರಣ್ಯ ಇಲಾಖೆ ಅಳವಡಿಸಿರುವ ಟ್ರ್ಯಾಕಿಂಗ್ ಕ್ಯಾಮೆರಾದಲ್ಲಿ ಹುಲಿ ಸಂಚರಿಸುವ ದೃಶ್ಯ ಸೆರೆಯಾಗಿದೆ. ಈ ಭಾಗದಲ್ಲಿ ಹುಲಿ ಇರುವುದನ್ನು ಖಚಿತಪಡಿಸಲಾಗಿದೆ. ಸುಮಾರು 3-4 ತಿಂಗಳ ಹಿಂದೆ ಹಂಪಿಯ ಪರಿಸರದಲ್ಲಿನ ಕಂಪ್ಲಿ ಮತ್ತು ಗಂಗಾವತಿ ಸಂಪರ್ಕಿಸುವ ಸೇತುವೆಯಲ್ಲಿ ಪ್ರತ್ಯಕ್ಷವಾಗಿತ್ತು.
ಈ ಪ್ರದೇಶದಲ್ಲಿ ಕಾಣಿಸಿಕೊಂಡಿರುವ ಹುಲಿ ಶ್ರೀಶೈಲ ಅರಣ್ಯದಿಂದ ವಲಸೆ ಬಂದಿರಬಹುದು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ. ಹುಲಿ ಈ ಭಾಗದಲ್ಲಿ ಪ್ರತ್ಯಕ್ಷವಾಗಿರುವುದು ಜನರಲ್ಲಿ ಆಶ್ಚರ್ಯದ ಜೊತೆಗೆ ಆತಂಕವನ್ನೂ ಉಂಟುಮಾಡಿದೆ.
ಅರಣ್ಯ ಇಲಾಖೆ ಹುಲಿಯನ್ನು ಸೆರೆ ಹಿಡಿದು ಹಂಪಿಯ ಅಟಲ್ ಬಿಹಾರಿ ವಾಜಪೇಯಿ ಮೃಗಾಲಯಕ್ಕೆ ಸ್ಥಳಾಂತರ ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಈ ಕುರಿತು ಹಂಪಿ ಗ್ರಾಮಸ್ಥರು ಹಾಗೂ ಹಂಪಿ ವಿಶ್ವ ಪರಂಪರ ಪ್ರದೇಶ ನಿರ್ವಹಣಾ ಪ್ರಾಧಿಕಾರದ ವ್ಯಾಪ್ತಿ ಹಳ್ಳಿಗಳ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳುಪಿಡಿಒ ಬಿ. ಗಂಗಾಧರ್ ಅವರ ಮೂಲಕ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸುವ ಮೂಲಕ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರದ ವ್ಯಾಪ್ತಿ ಹಳ್ಳಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ವಿರೂಪಾಕ್ಷಿ ವಿ., ಎಚ್. ಹುಲುಗಪ್ಪ, ಹನುಮಂತ, ನಾಗಮ್ಮ ಸೇರಿದಂತೆ ಸ್ಥಳೀಯ ಮಾರ್ಗದರ್ಶಿಗಳು, ಆಟೋ ಚಾಲಕರು ಸ್ಥಳೀಯ ಮುಖಂಡರು ಮನವಿ ಸಲ್ಲಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.