ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿಕೆಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ನೋಂದಾಯಿತ ಹಾಗೂ ಮಾನ್ಯತೆ ಪಡೆದ ಎಲ್ಲ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,
ಜನವರಿ 1ನೇ, ಏಪ್ರಿಲ್ 1ನೇ, ಜುಲೈ1 ಹಾಗೂ ಅಕ್ಟೋಬರ್ 1ಕ್ಕೆ 18 ವರ್ಷ ಪೂರ್ಣಗೊಳ್ಳುವವರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಬಹುದು.ಹೆಸರು ಕೈಬಿಟ್ಟು ಹೋಗಿರುವವರು ಹಾಗೂ ಮತದಾರರ ಪಟ್ಟಿಯಲ್ಲಿ ಮಾಹಿತಿಯನ್ನು ತಿದ್ದುಪಡಿ ಮಾಡಿಸಬೇಕಾದಲ್ಲಿ ಮತ್ತು ಅದೇ ವಿಧಾನಸಭಾ ಕ್ಷೇತ್ರದ ಬೇರೆ ಮತಗಟ್ಟೆಗೆ ವರ್ಗಾಯಿಸಬೇಕಾಗಿದ್ದಲ್ಲಿ ನಿಗದಿಪಡಿಸಿರುವ ನಮೂನೆಗಳಲ್ಲಿ ಅರ್ಜಿ ಭರ್ತಿ ಮಾಡಿ, ತಮ್ಮ ವ್ಯಾಪ್ತಿಯ ಮತದಾನ ಕೇಂದ್ರದಲ್ಲಿ, ತಾಲೂಕು ಕಚೇರಿಯಲ್ಲಿ, ಉಪವಿಭಾಗಾಧಿಕಾರಿಗಳ ಕಾರ್ಯಾಲಯದಲ್ಲಿ ನೀಡಿ ಸ್ವೀಕೃತಿ ಪಡೆಯಬಹುದಾಗಿದೆ ಎಂದು ತಿಳಿಸಿದರು.
ಮತದಾನ ಕೇಂದ್ರಗಳಲ್ಲಿ ನೇಮಕಗೊಂಡಿರುವ ನಿರ್ಧಿಷ್ಠಾಧಿಕಾರಿಗಳಿಗೆ, ಮತಗಟ್ಟೆ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. 2025ರ ಜ.06ರಂದು ಪ್ರಚುರ ಪಡಿಸಿದ ಅಂತಿಮ ಮತದಾರರ ಪಟ್ಟಿಯನ್ನು ಮತಗಟ್ಟೆ ಕೇಂದ್ರ, ಗ್ರಾಪಂ ಕಚೇರಿ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ, ತಾಲೂಕು ಕಚೇರಿ, ಉಪ ವಿಭಾಗಾಧಿಕಾರಿಗಳ ಕಚೇರಿ ಹಾಗೂ www.ceokarnataka.kar.nic.in, https://chitradurga.nic.in ವೆಬ್‍ಸೈಟ್‍ನಲ್ಲಿಯೂ ಸಹ ಪರಿಶೀಲಿಸಿಕೊಂಡು ಪಟ್ಟಿಯಲ್ಲಿ ಹೆಸರು ಇಲ್ಲದಿದ್ದಲ್ಲಿ ಪೂರಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ವೋಟರ್ ಹೆಲ್ಪ್‍ಲೈನ್‌ನಲ್ಲಿ ಆನ್‍ಲೈನ್ ಮೂಲಕವೂ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.
ವಿಳಾಸದ ಬಗ್ಗೆ ದಾಖಲೆಗಾಗಿ ಕನಿಷ್ಠ 1 ವರ್ಷದ ನೀರು, ವಿದ್ಯುತ್‍ಚ್ಛಕ್ತಿ, ಗ್ಯಾಸ್ ಸಂಪರ್ಕದ ಬಿಲ್, ಆಧಾರ್ ಕಾರ್ಡ್, ರಾಷ್ಟ್ರೀಕೃತ, ಶೆಡ್ಯೂಲ್ಡ್ ಬ್ಯಾಂಕ್, ಅಂಚೆ ಕಚೇರಿಯ ಚಾಲ್ತಿಯಲ್ಲಿರುವ ಪಾಸ್‍ಬುಕ್, ಪಾಸ್‍ಪೋರ್ಟ್, ಕಿಸಾನ್ ವಹಿಯನ್ನೊಳಗೊಂಡ ಕಂದಾಯ ಇಲಾಖೆಯ ಭೂ ಮಾಲೀಕತ್ವದ ದಾಖಲೆಗಳು, ನೋಂದಾಯಿತ ಬಾಡಿಗೆ ಭೋಗ್ಯ ಪತ್ರ, ನೋಂದಾಯಿತ ಕ್ರಯ ಪತ್ರ ವಿಳಾಸದ ಬಗ್ಗೆ ದಾಖಲೆಯನ್ನು ನೀಡಬಹುದಾಗಿದೆ ಎಂದು ತಿಳಿಸಿದರು.
ಈ ವೇಳೆ ಉಪವಿಭಾಗಾಧಿಕಾರಿ ಮಹಬೂಬ್ ಜಿಲಾನಿ ಖುರೇಷಿ, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಟಿ.ಯಶವಂತ್ ಕುಮಾರ್, ಜಿಲ್ಲಾ ಜೆಡಿಎಸ್ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ, ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಕಾರ್ಯದರ್ಶಿ ಸಿ.ಜೆ.ನಾಸಿರುದ್ದೀನ್, ಸಿಪಿಐ(ಎಂ) ಡಿಒಸಿ ಸಿ.ಕೆ.ಗೌಸ್‍ಪೀರ್ ಸೇರಿ ಚುನಾವಣಾ ತಹಸೀಲ್ದಾರ್ ಮಲ್ಲಿಕಾರ್ಜುನ ನಾಯಕ ಸೇರಿ ಚುನಾವಣಾ ಶಾಖೆ ಸಿಬ್ಬಂದಿ ಇದ್ದರು.