ಕನ್ನಡಪ್ರಭ ವಾರ್ತೆ ಚಾಮರಾಜನಗರ
ವಿವಿಧ ಇಲಾಖೆಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪಯೋಜನೆಗಳಡಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅಗತ್ಯ ಅನುದಾನದ ನಿರೀಕ್ಷೆಯಲ್ಲಿವೆ. ಹಲವು ಇಲಾಖೆಗಳಿಗೆ ಕಾರ್ಯಕ್ರಮ ಅನುಷ್ಠಾನಕ್ಕಾಗಿ ಈಗಾಗಲೇ ಅನುದಾನ ಬಿಡುಗಡೆಯಾಗಿದೆ. ರಾಜ್ಯ ಹಾಗೂ ಜಿಲ್ಲಾ ವಲಯವಾರು ಅನುದಾನ ಬಿಡುಗಡೆಯಾಗಿರುವ ಇಲಾಖೆಗಳು ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸಿ ನಿಗದಿತ ಗುರಿ ಸಾಧಿಸಬೇಕು. ಯೋಜನೆ ಅನುಷ್ಠಾನದಲ್ಲಿ ಯಾವುದೇ ಲೋಪಗಳಿಗೆ ಅವಕಾಶವಾಗದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಖುದ್ದು ಗಮನ ಹರಿಸಬೇಕು ಎಂದರು.
ಗಂಗಾ ಕಲ್ಯಾಣ ಯೋಜನೆಯನ್ನು ವಿವಿಧ ನಿಗಮಗಳು ಹಾಗೂ ಸಣ್ಣ ನೀರಾವರಿ ಇಲಾಖೆ ಅನುಷ್ಠಾನಗೊಳಿಸುತ್ತಿದ್ದು, ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಶಾಸಕರ ಸಮ್ಮುಖದಲ್ಲಿ ನಡೆಯಲಿದೆ. ಈ ಸಂಬಂಧ ಫಲಾನುಭವಿಗಳ ಆಯ್ಕೆಯಲ್ಲಿ ಗೊಂದಲವಾಗಬಾರದು. ದಾಖಲಾತಿಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಪರಿಶೀಲಿಸಬೇಕು ಎಂದು ಜಿಪಂ ಸಿಇಒ ಮೋನಾ ರೋತ್ ಅವರು ಅಧಿಕಾರಿಗಳಿಗೆ ತಿಳಿಸಿದರು.ಇದೇ ವೇಳೆ ಮಾತನಾಡಿದ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮುನಿರಾಜು ಅವರು, ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪಯೋಜನೆಗಳಡಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಇಲಾಖೆಗಳು ಪ್ರಗತಿ ವರದಿಯನ್ನು ಪ್ರತಿ ತಿಂಗಳ ೫ನೇ ದಿನಾಂಕದೊಳಗೆ ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು. ಮಾಹಿತಿ ಪ್ರತಿ ತಿಂಗಳು ಅಪ್‌ಡೇಟ್ ಆಗಬೇಕು ಎಂದರು.
ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಚ್.ಎಸ್. ಬಿಂದ್ಯಾ, ಜಂಟಿ ಕೃಷಿ ನಿರ್ದೇಶಕ ಅಬೀದ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ ಪ್ರಸನ್ನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಮಂಜುನಾಥ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಚಿದಂಬರ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ಯೋಗಾನಂದ, ಜಿಲ್ಲಾಮಟ್ಟದ ಅಧಿಕಾರಿಗಳು, ಅರಣ್ಯಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.