ಕೊಲ್ಹಾರ ಸೇತುವೆ ಮೇಲಿಂದವಕೃಷ್ಣಾ ನದಿಗೆ ಉರುಳಿದ ಟಿಪ್ಪರ್

KannadaprabhaNewsNetwork |  
Published : Jul 02, 2026, 03:00 AM IST
ಕೊಲ್ಹಾರ ಬಳಿ ಕೃಷ್ಣಾ ನದಿಗೆ ಉರುಳಿ ಬಿದ್ದ ಟಿಪ್ಪರ್ ಚಾಲಕನನ್ನು ಹುಡುಕುತ್ತೀರುವ ಅಗ್ನಿ ಶಾಮಕ ತಂಡದ  ದೃಶ್ಯ  | Kannada Prabha

ಸಾರಾಂಶ

ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಓವರ್‌ ಟೇಕ್‌ ಮಾಡುವ ವೇಳೆ ಕಾರಿಗೆ ಟಿಪ್ಪರ್‌ ಡಿಕ್ಕಿ ಹೊಡೆದು ಚಾಲಕನ ನಿಯಂತ್ರಣ ಕಳೆದುಕೊಂಡ ಟಿಪ್ಪರ್‌ ಕೊಲ್ಹಾರ ಸೇತುವೆ ಮೇಲಿಂದ ನದಿಗೆ ಉರುಳಿಬಿದ್ದ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಕನ್ನಡಪ್ರಭ ವಾರ್ತೆ ಕೊಲ್ಹಾರ

ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಓವರ್‌ ಟೇಕ್‌ ಮಾಡುವ ವೇಳೆ ಕಾರಿಗೆ ಟಿಪ್ಪರ್‌ ಡಿಕ್ಕಿ ಹೊಡೆದು ಚಾಲಕನ ನಿಯಂತ್ರಣ ಕಳೆದುಕೊಂಡ ಟಿಪ್ಪರ್‌ ಕೊಲ್ಹಾರ ಸೇತುವೆ ಮೇಲಿಂದ ನದಿಗೆ ಉರುಳಿಬಿದ್ದ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಬಾಗಲಕೋಟೆ ಜಿಲ್ಲೆಯ ಬೀಳಗಿಯಿಂದ ಕೊಲ್ಹಾರದತ್ತ ಬರುತ್ತಿದ್ದ ಟಿಪ್ಪರ್‌ ಹಾಗೂ ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಈ ದುರ್ಘಟನೆ ಸಂಭವಿಸಿದೆ. ಬಾಗಲಕೋಟೆ ಜಿಲ್ಲೆಯ ಬೆಣ್ಣೂರ ಗ್ರಾಮದ ನಿವಾಸಿ ಹಾಗೂ ಚಾಲಕ ಸಂತೋಷ ಕೋಟಿ ಟಿಪ್ಪರ್ ಒಳಗೆ ಸಿಲುಕಿರುವ ಶಂಕೆ ಇದೆ. ಕ್ಲೀನರ್ ಬೀದರ್ ಜಿಲ್ಲೆಯ ಯರಣಗಿ ಗ್ರಾಮದ ಸಂಜು ಮೂಲಗಿ (28) ನದಿಯಲ್ಲಿ ಮುಳುಗಿದ ಟಿಪ್ಪರ್ ಮೇಲೆ ಕುಳಿತು ರಕ್ಷಣೆಗಾಗಿ ಮೊರೆ ಇಟ್ಟಿದ್ದಾನೆ. ನಂತರ ಆತನನ್ನು ಗಮನಿಸಿದ ಸ್ಥಳೀಯ ಮೀನುಗಾರರು ತೆಪ್ಪದ ಮೂಲಕ ತೆರಳಿ ಸಂಜುನನ್ನು ರಕ್ಷಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಚಾಲಕನಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಘಟನೆ ಬಳಿಕ ಕಾರಿನ ಚಾಲಕ ಹಾಗೂ ಇತರರು ವಾಹನ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಘಟನೆಯಿಂದ ಸೇತುವೆ ಮೇಲೆ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಘಟನಾ ಸ್ಥಳಕ್ಕೆ ಬೀಳಗಿ ಹಾಗೂ ಕೊಲ್ಹಾರ ಪೊಲೀಸರು ಅಪಘಾತಕ್ಕೀಡಾದ ಕಾರನ್ನು ತೆರವುಗೊಳಿಸಿ ಸಂಚಾರ ಸುಗಮಗೊಳಿಸಿದ್ದಾರೆ. ಕೊಲ್ಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೈಜ ದೇವರ ಕೆಲಸ ಮಾಡುತ್ತಿರುವ ಕ್ರೆಡಿಟ್‌ ಆಕ್ಸೆಸ್ ಇಂಡಿಯಾ ಫೌಂಡೇಶನ್‌
ಆ್ಯಂಬುಲೆನ್ಸ್ ಸೇವೆಗೆ ಎಸ್.ಆರ್.ಪಾಟೀಲ ಚಾಲನೆ