ಕಾರು ತಪ್ಪಿಸಲು ಹೋಗಿ ವಿದ್ಯಾರ್ಥಿ ಮೇಲೆ ಹಾಯ್ದ ಟಿಪ್ಪರ್: ಸ್ಥಳದಲ್ಲೇ ಸಾವು

KannadaprabhaNewsNetwork |  
Published : Oct 02, 2024, 01:03 AM IST
ಮೃತ ವಿದ್ಯಾರ್ಥಿ ಧನುಷ್ | Kannada Prabha

ಸಾರಾಂಶ

ಧನುಷ್ ತನ್ನ ಇಬ್ಬರು ಸ್ನೇಹಿತರೊಂದಿಗೆ ಕಾಲೇಜು ಮುಗಿಸಿ ಕೋಟೇಶ್ವರದತ್ತ ರಸ್ತೆ ಬದಿಯ ಇಂಟರ್ ಲಾಕ್ ಮೇಲೆ ನಡೆದುಕೊಂಡು ಹೋಗುತ್ತಿದ್ದಾಗ ಅವಘಡ ಸಂಭವಿಸಿದೆ.

ಕನ್ನಡಪ್ರಭ ವಾರ್ತೆ ಕುಂದಾಪುರ

ಕಾಲೇಜು ಮುಗಿಸಿ ಸ್ನೇಹಿತರೊಂದಿಗೆ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಯೋರ್ವನಿಗೆ ಹಿಂದಿನಿಂದ ಟಿಪ್ಪರ್ ಡಿಕ್ಕಿ ಹೊಡೆದು ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಕೋಟೇಶ್ವರ-ಹಾಲಾಡಿ ರಾಜ್ಯ ಹೆದ್ದಾರಿಯಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.ಮೃತಪಟ್ಟ ವಿದ್ಯಾರ್ಥಿಯನ್ನು ಕೋಟೇಶ್ವರದ ಕಾಳಾವರ ವರದರಾಜ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಧನುಷ್ ಯು. ಅಮೀನ್ (19) ಎಂದು ಗುರುತಿಸಲಾಗಿದೆ.

ಧನುಷ್ ತನ್ನ ಇಬ್ಬರು ಸ್ನೇಹಿತರೊಂದಿಗೆ ಕಾಲೇಜು ಮುಗಿಸಿ ಕೋಟೇಶ್ವರದತ್ತ ರಸ್ತೆ ಬದಿಯ ಇಂಟರ್ ಲಾಕ್ ಮೇಲೆ ನಡೆದುಕೊಂಡು ಹೋಗುತ್ತಿದ್ದಾಗ ಅವಘಡ ಸಂಭವಿಸಿದೆ. ಎದುರಿನಿಂದ ಬರುತ್ತಿದ್ದ ಕಾರು ಏಕಾಏಕಿಯಾಗಿ ಬಲಬದಿಯ ರಸ್ತೆಗೆ ತಿರುವನ್ನು ಪಡೆದುಕೊಳ್ಳುತ್ತಿದ್ದಾಗ ಶರವೇಗದಲ್ಲಿ ಬಂದ ಟಿಪ್ಪರ್, ಕಾರನ್ನು ತಪ್ಪಿಸುವ ಭರದಲ್ಲಿ ನಿಯಂತ್ರಣ ಕಳೆದುಕೊಂಡ ಚಾಲಕ ರಸ್ತೆಯ ಎಡಬದಿಯಲ್ಲಿ ಸಾಗುತ್ತಿದ್ದ ವಿದ್ಯಾರ್ಥಿಗೆ ಡಿಕ್ಕಿ ಹೊಡೆದಿದ್ದಾನೆ. ಟಿಪ್ಪರ್ ಅಡಿ ಚಕ್ರಕ್ಕೆ ಸಿಲುಕಿಕೊಂಡ ಧನುಷ್ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಧನುಷ್ ಜೊತೆ ನಡೆದುಕೊಂಡು ಬರುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ.

ಧನುಷ್ ತನ್ನ ತಾಯಿಯೊಂದಿಗೆ ನಾವುಂದ ಕೋಯನಗರದಲ್ಲಿ ವಾಸವಾಗಿದ್ದು, ತಂದೆ ಬಾರ್ಕೂರಿನಲ್ಲಿ ಕೆಲಸ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಕುಂದಾಪುರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

------------ವೀಡಿಯೋ ವೈರಲ್‌ವಿದ್ಯಾರ್ಥಿ ಧನುಷ್ ಮೇಲೆ ಟಿಪ್ಪರ್ ಹರಿದ ವೀಡಿಯೋಅಲ್ಲೇ ಎದುರು ಬರುತ್ತಿದ್ದ ಕಾರೊಂದರ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆ ಸಿಕ್ಕಿದ್ದು, ಅಪಘಾತದ ಭಯಾನಕ ದೃಶ್ಯಾವಳಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರಲ್ಲಿ ಬಸವಣ್ಣ ಜೀವ ವೈವಿಧ್ಯ ಉದ್ಯಾನವನ
ಕೆಎಂಎಫ್‌ನಲ್ಲಿ ಉದ್ಯೋಗದ ನೆಪದಲ್ಲಿ50 ಲಕ್ಷ ವಂಚನೆ:ಇಬ್ಬರ ವಿರುದ್ಧ ಕೇಸ್‌