ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕ್‌ನಲ್ಲಿ ಜಮಾಯಿಸಿದ ಎಲ್ಲ ಸಂಘಟನೆಗಳ ಕಾರ್ಯಕರ್ತರು, ಬೆಂಗಳೂರು-ಮೈಸೂರು ಹೆದ್ದಾರಿ ಮಾರ್ಗವಾಗಿ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆವರೆಗೆ ತಿರಂಗ ಯಾತ್ರೆ ನಡೆಯಿತು.
ಬಾಳೇಹೊನ್ನೂರು ರಂಬಾಪುರಿ ಶಾಖಾ ಮಠದ ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಪಹಲ್ಗಾಂನಲ್ಲಿ ಹಿಂದೂಗಳನ್ನು ಉಗ್ರರು ಹತ್ಯೆ ಮಾಡಿರುವುದನ್ನು ಖಂಡಿಸುತ್ತೇವೆ. ಕೇಂದ್ರ ಸರ್ಕಾರ ಮೂರು ಸೇನಾ ಪಡೆಗಳು ಹೋರಾಟ ನಡೆಸಿ ಪಾಕಿಸ್ತಾನದ ಉಗ್ರರ ನೆಲೆಗಳನ್ನು ಧ್ವಂಸ ಮಾಡಿದ್ದಾರೆ. ಇದು ದೇಶಕ್ಕೆ ನೀಡಿದ ಕೊಡುಗೆಯಾಗಿದೆ ಎಂದರು.ಹಿಂದೂ ಮಹಿಳೆಯರ ಸಿಂಧೂರವನ್ನು ಅಳಿಸಿಹಾಕಿದ್ದ ಕಾರಣಕ್ಕೆ ಕೇಂದ್ರ ಸರ್ಕಾರ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಕಾರ್ಯಾಚಾರಣೆ ನಡೆಸಿ ನೂರಕ್ಕು ಹೆಚ್ಚು ಮಂದಿ ಉಗ್ರರನ್ನು ಹತ್ಯೆ ಮಾಡಿದೆ. ಪಾಕಿಸ್ತಾನದಲ್ಲಿ ಉಗ್ರ ನೆಲೆಗಳನ್ನು ಧ್ವಂಸ ಮಾಡಿದೆ. ಅಲ್ಲಿನ ಸೇನಾ ನೆಲೆಗಳನ್ನೂ ಸಹ ಹೊಡೆದು ಹಾಕಿದೆ. ಇದು ಪಾಕಿಸ್ತಾನಕ್ಕೆ ಎಚ್ಚರಿಕೆಯ ಸಂದೇಶವಾಗಿದೆ ಎಂದರು.
ಭಾರತದ ಸೇನಾ ಬತ್ತಳಿಕೆಯಲ್ಲಿರುವ ಆಯುಧಗಳ ಪರಿಚಯವನ್ನು ಜಗತ್ತಿಗೇ ಮಾಡಿಕೊಡುವ ಮೂಲಕ ಎಲ್ಲರಿಗೂ ಎಚ್ಚರಿಕೆಯ ಸಂದೇಶವನ್ನು ನಮ್ಮ ಸೇನೆ ಮಾಡಿದೆ ಎಂದು ಸೇನೆಯ ಕಾರ್ಯವನ್ನು ಶ್ಲಾಘಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್, ಮುಖಂಡರಾದ ಅಶೋಕ್ ಜಯರಾಂ, ಎಚ್.ಆರ್.ಅರವಿಂದ್, ಎಚ್.ಆರ್. ಅಶೋಕ್, ಕೆಂಪುಬೋರಯ್ಯ, ಸಿ.ಟಿ.ಮಂಜುನಾಥ್, ಶಿವಕುಮಾರ್ ಆರಾಧ್ಯ, ನಿತ್ಯಾನಂದ, ನಾಗಾನಂದ, ವಿವಿಧ ಸಂಘಟನೆಗಳ ಮುಖಂಡರು, ನಿವೃತ್ತ ಯೋಧರು, ವಿದ್ಯಾರ್ಥಿಗಳು, ವೈದ್ಯರು ತಿರಂಗ ಯಾತ್ರೆಯಲ್ಲಿ ಭಾಗವಹಿಸಿದ್ದರು.