ಕನ್ನಡಪ್ರಭ ವಾರ್ತೆ ಸಿರುಗುಪ್ಪ
ಪೆಹಲ್ಗಾಂನಲ್ಲಿ ಉಗ್ರರ ದಾಳಿಗೆ ಬಲಿಯಾದ ಪ್ರವಾಸಿಗರ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ಮಾಡಲಾಯಿತು. ಅಲ್ಲದೆ ೨೫೦ ಅಡಿ ಉದ್ದನೆಯ ರಾಷ್ಟ್ರಧ್ವಜವನ್ನು ಪ್ರದರ್ಶಿಸಲಾಯಿತು. ಯಾತ್ರೆಯಲ್ಲಿ ಭಾಗವಹಿಸಿದ್ದವರು ಭಾರತ ಮಾತೆಗೆ ಜೈ ಎನ್ನುವ ಘೋಷಣೆಯನ್ನು ಕೂಗಿದರು.
ನಗರದ ತಾಲೂಕು ಕ್ರೀಡಾಂಗಣದಲ್ಲಿ ಪ್ರಾರಂಭಗೊಂಡ ತಿರಂಗಾ ಯಾತ್ರೆಗೆ ಭಾರತ ಮಾತೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಿ ಮಾತನಾಡಿದ ಮಾಜಿ ಶಾಸಕ ಎಂ.ಎಸ್.ಸೋಮಲಿಂಗಪ್ಪ, ಭಾರತೀಯರು ಪ್ರವಾಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಕಾಶ್ಮೀರದ ಪೆಹಲ್ಗಾಂ ಪ್ರದೇಶದಲ್ಲಿ ಪಾಕಿಸ್ತಾನದ ಭಯೋತ್ಪಾದಕರು ನಮ್ಮ ಭಾರತೀಯರ ಪ್ರವಾಸಿಗರನ್ನು ಗುಂಡಿಟ್ಟು ಕೊಂದಿದ್ದರ ವಿರುದ್ಧ ಭಾರತ ಸರ್ಕಾರ ಆಪರೇಷನ್ ಸಿಂದೂರ ಕಾರ್ಯಾಚರಣೆ ಮೂಲಕ ನೂರಾರು ಭಯೋತ್ಪಾದಕರನ್ನು ಮಟ್ಟ ಹಾಕಿದೆ. ಭಾರತೀಯ ಸೈನಿಕರಿಗೆ ಬೆಂಬಲವಾಗಿ ಈ ಯಾತ್ರೆಯನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.ಗುರುಬಸವ ಮಠದ ಬಸವಭೂಷಣ ಸ್ವಾಮೀಜಿ ಮಾತನಾಡಿದರು.
ಮೆರವಣಿಗೆಯು ನಗರದ ಗಾಂಧಿ ವೃತ್ತ, ಅಂಬೇಡ್ಕರ್ ವೃತ್ತ, ಟಿಪ್ಪು ಸುಲ್ತಾನ್ ವೃತ್ತದ ವರೆಗೆ ನಡೆಯಿತು.ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ನಾಯ್ಡು, ತಾಲೂಕು ಅಧ್ಯಕ್ಷ ಎಚ್.ಎಂ. ಮಲ್ಲಿಕಾರ್ಜುನಸ್ವಾಮಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಜಿ.ಐನಾಥರೆಡ್ಡಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಎಂ.ಎಸ್. ಸಿದ್ದಪ್ಪ, ನಗರಸಭೆ ಸದಸ್ಯರಾದ ಮೋಹನ್‌ರೆಡ್ಡಿ, ವಿಕ್ರಮ್‌ಜೈನ್, ರಾಮಕೃಷ್ಣ, ಮುಖಂಡರಾದ ನೆಣಿಕೆಪ್ಪ, ಡಾ.ಬಿ.ಬಸವರಾಜ, ಅಂಗಯ್ಯ, ವೀರೇಶ, ಮಲ್ಲಿಕಾರ್ಜುನ ಮತ್ತು ವಿವಿಧ ಗ್ರಾಮಗಳ ಬಿಜೆಪಿ
ಕಾರ್ಯಕರ್ತರು, ಮಾಜಿ ಸೈನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಇದ್ದರು.