ಕನ್ನಡಪ್ರಭ ವಾರ್ತೆ ಮೂಡುಬಿದಿರೆ
ಅವರು ಮಹಾವೀರ ಕಾಲೇಜಿನಲ್ಲಿ ನಡೆದ ಸ್ಥಾಪಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಎಂಜಿನಿಯರಿಂಗ್ ಮೂಡುಬಿದಿರೆ ಅಧ್ಯಕ್ಷ ರಾಜೇಶ್ ಚೌಟ ಮಾತನಾಡಿ, ಪದವಿ ನಂತರ ವಿದ್ಯಾರ್ಥಿಗಳಲ್ಲಿ ಅವರು ಹೊಂದಿದ ಜ್ಞಾನ ಮತ್ತು ಕೌಶಲ್ಯವೇ ಶಾಶ್ವತವಾಗಿ ಉಳಿಯುತ್ತದೆ. ಇದಕ್ಕಾಗಿ ಕಾಲೇಜಿನ ಸ್ಥಾಪಕರನ್ನು ಆದರ್ಶ ವ್ಯಕ್ತಿಗಳನ್ನಾಗಿ ತೆಗೆದುಕೊಂಡು ಸಾಧನೆ ಮಾಡಿ ಎಂದು ಶುಭಹಾರೈಸಿದರು.ಅಧ್ಯಕ್ಷತೆ ವಹಿಸಿದ್ದ ಆಡಳಿತ ಮಂಡಳಿ ಅಧ್ಯಕ್ಷ ಅಭಯಚಂದ್ರ ಜೈನ್, ಮಧ್ಯಮ ವರ್ಗದ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಸ್ಥಾಪನೆಯಾದ ಈ ಮಹಾವೀರ ಕಾಲೇಜು ಉತ್ತಮ ಸಾಧನೆ ಮಾಡುತ್ತಿದೆ. ಸ್ಥಾಪಕರಾದ ಟಿ.ಎಂ.ಎ. ಪೈ ಹಾಗೂ ಎಸ್.ಎನ್. ಮೂಡುಬಿದಿರೆ ಅವರ ಕೊಡುಗೆ ಅಪಾರ ಎಂಬುದರ ಜೊತೆಗೆ ಕಾಲೇಜಿನ ಏಳಿಗಾಗಿ ದುಡಿದ ಎಲ್ಲ ವಿಶ್ವಸ್ಥ ಮಂಡಳಿಯ ಸದಸ್ಯರು, ಅಧ್ಯಾಪಕ ಹಾಗೂ ಅಧ್ಯಾಪಕೇತರ ವರ್ಗದವರನ್ನು ಅಭಿನಂದಿಸಿದರು.ಸೇವೆಯಿಂದ ನಿವೃತ್ತರಾದ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ಪ್ರವೀಣ್ ಕೆ., ಮಂಗಳೂರು ವಿ.ವಿ. ಕನ್ನಡ ಅಧ್ಯಾಪಕ ಸಂಘ ಅಧ್ಯಕ್ಷರಾಗಿ ಆಯ್ಕೆಯಾದುದಕ್ಕಾಗಿ ಕನ್ನಡ ವಿಭಾಗ ಮುಖ್ಯಸ್ಥ ಡಾ. ಚಿನ್ನಸ್ವಾಮಿ, ಮಂಗಳೂರು ವಿವಿಯ ಬಿಸಿಎ ಅಂತಿಮ ಪದವಿ ಪರೀಕ್ಷೆಯಲ್ಲಿ ೯ನೇ ರ‍್ಯಾಂಕ್ ಪಡೆದ ವಿದ್ಯಾರ್ಥಿ ಶ್ರೀರಾಂ, ಬಿ.ಎಸ್ಸಿ. ಆರನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ೬೫೦ರಲ್ಲಿ ೬೪೯ ಅಂಕ ಗಳಿಸಿದ ವಿದ್ಯಾರ್ಥಿ ಹೆನ್ವಿಲ್ ಅವರನ್ನು ಸನ್ಮಾನಿಸಲಾಯಿತು.ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ಕಾಲೇಜಿನ ವರದಿ ಮಂಡಿಸಿದರು. ವಿದ್ಯಾರ್ಥಿಕ್ಷೇಮ ಪಾಲನಾಧಿಕಾರಿ ಪ್ರೊ. ಹರೀಶ್ ಸಂಸ್ಥಾಪಕರ ಸ್ಮರಣೆ ಮಾಡಿದರು. ಆಡಳಿತ ಮಂಡಳಿ ಉಪಾಧ್ಯಕ್ಷ ಸಂಪತ್ ಸಾಮ್ರಾಜ್ಯ, ರಕ್ಷಕ ಶಿಕ್ಷಕ ಸಂಘ ಅಧ್ಯಕ್ಷ ಅಬ್ದುಲ್ ರೆಹಮಾನ್, ವಿದ್ಯಾರ್ಥಿ ಸಂಘದ ನಾಯಕಿ ಶೃತಿ ಎಸ್. ಪೆರಿ ಉಪಸ್ಥಿತರಿದ್ದರು.
ಪದವಿ ಪೂರ್ವ ಪ್ರಾಂಶುಪಾಲ ಪ್ರೊ. ರಮೇಶ್ ಭಟ್ ಸ್ವಾಗತಿಸಿದರು. ಕನ್ನಡ ವಿಭಾಗ ಮುಖ್ಯಸ್ಥ ಡಾ. ಚಿನ್ನಸ್ವಾಮಿ ವಂದಿಸಿದರು. ಭೌತಶಾಸ್ತ್ರ ಉಪನ್ಯಾಸಕಿ ಚೈತ್ರ ಕಾರ್ಯಕ್ರಮ ನಿರೂಪಿಸಿದರು.