ಕನ್ನಡ ನಾಡಿನಲ್ಲಿ ಹುಟ್ಟಲು ಏಳೇಳು ಜನ್ಮದ ಪುಣ್ಯ ಮಾಡಿರಬೇಕು-ಶಾಸಕ ಬಣಕಾರ

KannadaprabhaNewsNetwork |  
Published : Nov 02, 2025, 03:15 AM IST
ಪೊಟೋ : 01 ಎಚ್‌ಕೆಆರ್ 01 | Kannada Prabha

ಸಾರಾಂಶ

ಕನ್ನಡ ನಾಡಿನಲ್ಲಿ ಹುಟ್ಟ ಬೇಕಾದರೆ ಏಳೇಳು ಜನ್ಮದ ಪುಣ್ಯ ಮಾಡಿರಬೇಕು. ಕನ್ನಡ ನಾಡು ಪುಣ್ಯದ ಬೀಡು. ಅತ್ಯಂತ ಸಂಪದ್ಭರಿತ ನಾಡು ನಮ್ಮ ನಾಡು. ಕರ್ನಾಟಕದ ಏಕೀಕರಣ ಹೋರಾಟದ ಯಾರೂ ಮರೆಯುವಂತಿಲ್ಲ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ಹಿರೇಕೆರೂರು: ಕನ್ನಡ ನಾಡಿನಲ್ಲಿ ಹುಟ್ಟ ಬೇಕಾದರೆ ಏಳೇಳು ಜನ್ಮದ ಪುಣ್ಯ ಮಾಡಿರಬೇಕು. ಕನ್ನಡ ನಾಡು ಪುಣ್ಯದ ಬೀಡು. ಅತ್ಯಂತ ಸಂಪದ್ಭರಿತ ನಾಡು ನಮ್ಮ ನಾಡು. ಕರ್ನಾಟಕದ ಏಕೀಕರಣ ಹೋರಾಟದ ಯಾರೂ ಮರೆಯುವಂತಿಲ್ಲ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.ಪಟ್ಟಣದ ಪೊಲೀಸ್ ಮೈದಾನದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕನ್ನಡ ಬರೀ ಭಾಷೆಯಲ್ಲ, ಅದು ನಮ್ಮ ಬದುಕು. ಪ್ರತಿಯೊಬ್ಬ ಕನ್ನಡಿಗರ ಮಾತೃ ಸ್ವರೂಪಿಣಿ ಕನ್ನಡ ಭಾಷೆ. ಈ ಭಾಷೆ ನಮ್ಮ ಕಣಕಣದಲ್ಲಿ ಬೆರೆತು ಕನ್ನಡಾಭಿಮಾನ ವೃದ್ಧಿಯಾಗಬೇಕು. ಇಂದು ಕನ್ನಡ ನಾಡು ಮರು ಹುಟ್ಟು ಪಡೆದ ದಿನವಾಗಿದ್ದು, ಸಮಸ್ತ ನಾಡಿನ ಜನತೆ ಯಾವುದೇ ಜಾತಿ, ಧರ್ಮ, ಪಂಥಗಳ ಭೇದವಿಲ್ಲದೆ ಒಟ್ಟುಗೂಡಿ ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಾರೆ. ಕರ್ನಾಟಕದ ಏಕೀಕರಣಕ್ಕೆ ಹೋರಾಡಿದ ಮಹನೀಯರ ಸ್ಮರಿಸುವ ಉದ್ದೇಶದಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತದೆ. ಕನ್ನಡದ ಹೋರಾಟಗಳ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸುವ ಉದ್ದೇಶದಿಂದ ಹಾಗೂ ಕರ್ನಾಟಕದ ಏಕೀಕರಣಕ್ಕೆ ಹೋರಾಡಿದ ಮಹನೀಯರನ್ನು ಸ್ಮರಿಸುವ ಉದ್ದೇಶದಿಂದ ಕನ್ನಡ ರಾಜ್ಯೋತ್ಸವ ಅತ್ಯಂತ ಮಹತ್ವವನ್ನು ಪಡೆದುಕೊಂಡಿದೆ.ಪ್ರತಿಯೊಬ್ಬರು ಕನ್ನಡದ ಉಳಿವಿಗಾಗಿ ಮತ್ತು ಅಭಿವೃದ್ಧಿಗಾಗಿ ಶ್ರಮಿಸಬೇಕು ಎಂದರು.ತಹಸೀಲ್ದಾರ್ ರೇಣುಕಾ ಎಂ. ಮಾತನಾಡಿ, ಕನ್ನಡ ನಾಡಿಗಾಗಿ, ಕನ್ನಡಕ್ಕಾಗಿ ದುಡಿದ ಮಹನೀಯರಿಗೆ ಈ ಮಾಸದಲ್ಲಿ ರಾಜ್ಯ ಸರ್ಕಾರ ಸೇರಿದಂತೆ ಹಲವು ಕನ್ನಡ ಪರ ಸಂಘಟನೆಗಳು ಗೌರವಿಸುವ ಮೂಲಕ, ನಾಡಿನ ಸೇವೆಯನ್ನು ಮುಂದುವರೆಸಲು ಇನ್ನಷ್ಟು ಪ್ರೇರಣೆ ನೀಡಿದಂತಾಗುತ್ತದೆ. ಕನ್ನಡ ನಾಡಿನ ಮಹತ್ವವನ್ನು ಕನ್ನಡಿಗರು ಅರಿತಾಗ ಮಾತ್ರ ಕನ್ನಡ ರಾಜ್ಯೋತ್ಸವದ ಆಚರಣೆ ಸಾರ್ಥಕವಾಗುತ್ತದೆ ಎಂದರು.ಕನ್ನಡ ರಾಜ್ಯೋತ್ಸವದ ನಿಮಿತ್ತ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಪ.ಪಂ. ಅಧ್ಯಕ್ಷೆ ಸುಧಾ ಚಿಂದಿ, ಉಪಾಧ್ಯಕ್ಷ ರಾಜು ಕರಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ಶ್ರೀಧರ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಎನ್.ರವಿ, ಸಿಪಿಐ ಮಂಜುನಾಥ ಪಂಡಿತ, ಕ್ಷೇತ್ರ ಸಮನ್ವಯಾಧಿಕಾರಿ ಎನ್. ಸುರೇಶಕುಮಾರ, ಪ.ಪ, ಮುಖ್ಯಾಧಿಕಾರಿ ಕೋಡಿ ಬೀಮರಾಯ್, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಬುರಡಿಕಟ್ಟಿ, ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಚ್.ಎಚ್. ಜಾಡರ, ಪ.ಪಂ. ಸದಸ್ಯರಾದ ಮಹೇಂದ್ರ ಬಡಳ್ಳಿ, ವಿಜಯಶ್ರೀ ಬಂಗೇರ, ಕವಿತಾ ಹಾರ್ನಳ್ಳಿ, ರಮೇಶ ಕೋಡಿಹಳ್ಳಿ, ಹರೀಶ ಕಲಾಲ, ಚಂದ್ರಕಲಾ ಕೋರಿಗೌಡ್ರ ಹಾಗೂ ತಾಲೂಕಿನ ಕನ್ನಡ ಪರ ಸಂಘಟನೆಗಳ ಅಧ್ಯಕ್ಷರು, ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಮತ್ತು ವಿವಿಧ ಶಾಲಾ ಮಕ್ಕಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

PREV

Recommended Stories

ಪಾಳು ಬಿದ್ದ ರೈತ ಸಭಾ ಭವನ ಕಟ್ಟಡ
ಕೊಂಕಣಿ ನೆಲದಲ್ಲಿ ಕನ್ನಡದಲ್ಲಿ ಸಹಿ ಸಂಗ್ರಹ, ಕದಂಬ ವೃಕ್ಷ ಪೂಜಿಸಿ ರಾಜ್ಯೋತ್ಸವ ಆಚರಣೆ