ಕನ್ನಡಪ್ರಭ ವಾರ್ತೆ ಬೆಂಗಳೂರು
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ। ಜಿ.ಪರಮೇಶ್ವರ್ ಅವರಿಗೆ ಸುದೀರ್ಘ ಪತ್ರ ಬರೆದಿರುವ ಅವರು, ಮಾದಕ ಜಾಲವನ್ನು ಕೊನೆಗಾಣಿಸಲು ಬಲಿಷ್ಠ ಕಾನೂನು ರೂಪಿಸಿ, ಪ್ರತೀ ಜಿಲ್ಲಾ ಮಟ್ಟದಲ್ಲೂ ವಿಶೇಷ ತಂಡ ರಚಿಸಿ ಅದಕ್ಕೆ ಮುಕ್ತ ಅಧಿಕಾರ ನೀಡಬೇಕು ಎಂಬುದು ಸೇರಿದಂತೆ ವಿವಿಧ ಸಲಹೆಗಳನ್ನು ನೀಡಿದ್ದಾರೆ.
ಪತ್ರದಲ್ಲೇನಿದೆ: ನಾನಿಂದು ಅತ್ಯಂತ ವಿಷಾದ ಹಾಗೂ ನೋವಿನಿಂದ ಈ ಪತ್ರವನ್ನು ಬರೆಯುತ್ತಿದ್ದೇನೆ. ನೊಂದ ಮಕ್ಕಳ ಹಾಗೂ ಅವರ ಪೋಷಕರ ಪರವಾಗಿ ಸರ್ಕಾರದ ಗಮನಕ್ಕೆ ತರಲು ಬಯಸುತ್ತಿದ್ದೇನೆ. ಮಾದಕ ವ್ಯಸನಗಳಿಗೆ ಇಂದು ಅನೇಕ ಮಕ್ಕಳು ಬಲಿಯಾಗುತ್ತಿದ್ದಾರೆ. ರಾಜ್ಯದಲ್ಲಿ ಈ ಜಾಲವನ್ನು ಬೇರು ಸಹಿತ ಕಿತ್ತುಹಾಕಲು ವಿಶೇಷ ತಂಡವನ್ನು ರಚನೆ ಮಾಡಿ ತಪ್ಪಿತಸ್ಥರಿಗೆ ಕಾನೂನಿನಡಿ ಕಠಿಣ ಕ್ರಮ ಜರುಗಿಸಲು ಬಲಿಷ್ಠ ಕಾನೂನು ರೂಪಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.ಸಲಹೆಗಳೇನುಮಾದಕ ವಸ್ತು ಮಾರಾಟ ಮತ್ತು ಸೇವನೆ ಜಾಲ ತಡೆಗಟ್ಟಲು ಜಿಲ್ಲಾ ಮಟ್ಟದಲ್ಲಿ ವಿಶೇಷ ದಳವನ್ನು ರಚಿಸಿ ಅದಕ್ಕೆ ಮುಕ್ತ ಅಧಿಕಾರ ಮತ್ತು ಬೆಂಬಲ ನೀಡಬೇಕು.
ಜನರು ಮುಕ್ತವಾಗಿ ಮಾಹಿತಿ ನೀಡುವಂತಾಗಲು ಹೆಸರು ಮತ್ತು ವಿಳಾಸವನ್ನು ಗೌಪ್ಯವಾಗಿ ಇಡುವುದಾಗಿ ಮನವರಿಕೆ ಮಾಡಬೇಕು.
ಜಾಗೃತಿ ಕಾರ್ಯಕ್ರಮ ಆಯೋಜಿಸಿ ಇಂಥ ಜಾಲದ ಬಗ್ಗೆ ಗಮನಕ್ಕೆ ಬಂದ ಕೂಡಲೇ ಶಾಲಾ ಮುಖ್ಯಸ್ಥರು, ವಿದ್ಯಾರ್ಥಿಗಳು ಹಾಗೂ ಪೋಷಕರ ಮಾಹಿತಿ ನೀಡುವಂತೆ ಮನವರಿಕೆ ಮಾಡಬೇಕು ಎಂದು ಶಾಸಕ ದಿನೇಶ್ ಗೂಳೀಗೌಡ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.