ಕನ್ನಡಪ್ರಭ ವಾರ್ತೆ ಬೆಂಗಳೂರು
ರಾಜ್ಯ ಪೊಲೀಸ್ ಇಲಾಖೆಯ ಸುವರ್ಣ ಮಹೋತ್ಸವದ ಪ್ರಯುಕ್ತ ಭಾರತೀಯ ಸ್ಟೇಟ್ ಬ್ಯಾಂಕ್ ಸಹಯೋಗದೊಂದಿಗೆ ಆಯೋಜಿಸಿದ್ದ ‘ಪೊಲೀಸ್ ರನ್’ (5 ಕಿ.ಮೀ. ಮತ್ತು 10 ಕಿ.ಮೀ.) ಓಟ ಸ್ಫರ್ಧೆಗೆ ಭಾನುವಾರ ಬೆಳಗ್ಗೆ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಚಾಲನೆ ನೀಡಿ ಮಾತನಾಡಿದ ಅವರು, ಯುವಕರೇ ಈ ದೇಶದ ಸಂಪತ್ತು. ಅವರು ಮಾದಕವಸ್ತುಗಳ ವ್ಯಸನಿಗಳಾಗದಂತೆ ಜಾಗೃತಿ ಮೂಡಿಸಲು ಸರ್ಕಾರದ ಜತೆಗೆ ಸಾರ್ವಜನಿಕರು ಕೈಜೋಡಿಸಬೇಕು ಎಂದರು.
ಹಸಿರು ಕಡಿಮೆಯಾಗುತ್ತಿರುವ ಬೆಂಗಳೂರನ್ನು ಪುನಃ ಹಸಿರು ನಗರವನ್ನಾಗಿಸಬೇಕು ಮತ್ತು ಯುವಕರು ಆರೋಗ್ಯವಂತರಾಗಿ ಬದುಕಬೇಕು ಎನ್ನುವ ಉದ್ದೇಶದಿಂದ ಪೊಲೀಸ್ ಓಟ ಆಯೋಜಿಸಿ ಜಾಗೃತಿ ಮೂಡಿಸಲಾಗುತ್ತಿದೆ. ಎಲ್ಲರ ದೈಹಿಕ ಕ್ಷಮತೆಗಾಗಿ ಓಟ ಅಗತ್ಯವಿದೆ. ವಿಶೇಷವಾಗಿ ಯುವಕರು ಸಮಾಜದಲ್ಲಿ ಅರ್ಧ ಸಂಖ್ಯೆಯಲ್ಲಿದ್ದಾರೆ. ಎಷ್ಟು ವರ್ಷ ಬದುಕುತ್ತೇವೆಯೋ ಅಷ್ಟು ವರ್ಷವೂ ಆರೋಗ್ಯವಂತರಾಗಿ ಜೀವಿಸಬೇಕು ಎಂದು ತಿಳಿಸಿದರು.ಸೈಬರ್ ಅಪರಾಧಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಅದು ಕಡಿಮೆಯಾಗಬೇಕು ಎಂದರೆ ಜನರಲ್ಲಿ ಜಾಗೃತಿ ಅಗತ್ಯ. ಪೊಲೀಸರು ತಡೆಗೆ ಪ್ರಯತ್ನ ಪಟ್ಟರೂ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಿದರೂ ಸೈಬರ್ ಅಪರಾಧಗಳು ಕಡಿಮೆಯಾಗುತ್ತಿಲ್ಲ. ಈ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಅಗತ್ಯ. ಅಪರಾಧ ಮಾಡಬಾರದು, ಉತ್ತಮ ಪ್ರಜೆಗಳಾಗಿ ಬದುಕಬೇಕು ಎಂದು ಜನರಲ್ಲಿ ಅರಿವು ಮೂಡಬೇಕು. ಎಲ್ಲರೂ ಆರೋಗ್ಯವಂತರಾಗಿ ಸಮಾಜದ ಆಸ್ತಿಯಾಗಿ ಬಾಳಬೇಕು. ಅಂತಿಮವಾಗಿ ಎಲ್ಲ ಅಪರಾಧಗಳ ನಿಯಂತ್ರಣಕ್ಕೆ ಜನರ ಸಹಕಾರ ಅತ್ಯಗತ್ಯ ಎಂದು ಹೇಳಿದರು.
ಗೃಹ ಸಚಿವ ಡಾ। ಜಿ.ಪರಮೇಶ್ವರ್ ಮಾತನಾಡಿ, ರಾಜ್ಯ ಪೊಲೀಸ್ ಇಲಾಖೆಯ ಸುವರ್ಣ ಮಹೋತ್ಸವದ ಪ್ರಯುಕ್ತ ಪ್ರಥಮ ಬಾರಿಗೆ ಈ ಓಟದ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ಮಾದಕವಸ್ತು ಮುಕ್ತವಾಗಬೇಕು. ಸೈಬರ್ ಅಪರಾಧ ಮುಕ್ತ ಕರ್ನಾಟಕವಾಗಬೇಕು. ಯುವಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಓಟ ಆಯೋಜಿಸಲಾಗಿದೆ. ಪ್ರತಿ ವರ್ಷ ಈ ಓಟ ಹಮ್ಮಿಕೊಳ್ಳಬೇಕು. ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಇದರ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಮುಂದೆ ಯಾರೇ ಡಿಜಿಪಿ ಬಂದರೂ ಇದನ್ನು ಮುಂದುವರೆಸಿಕೊಂಡು ಹೋಗಬೇಕು ಎಂದರು.