
ಕನ್ನಡಪ್ರಭ ವಾರ್ತೆ ಮಡಿಕೇರಿ
ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಉದ್ಘಾಟಿಸಿ ಮಾತನಾಡಿ, ಯುವ ಸಮೂಹವು ಇತ್ತೀಚಿನ ದಿನಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆಗೆ ಒಳಗಾಗಿ ತಮ್ಮ ಅಮೂಲ್ಯವಾದ ಜೀವನ ಹಾಳು ಮಾಡಿಕೊಳ್ಳುತ್ತಿದ್ದು, ಅಂತಹ ಯುವ ಸಮೂಹಕ್ಕೆ ಹೆಚ್ಚು ಜಾಗೃತಿ ಮೂಡಿಸಿ ಇಂತಹ ದುಶ್ಚಟಗಳಿಂದ ಹೊರತರಬೇಕಾಗಿದೆ ಎಂದರು.
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಡೀನ್ ಮತ್ತು ನಿರ್ದೇಶ ಡಾ.ಲೋಕೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿ ತಂಬಾಕು ವ್ಯಸನದಿಂದ ಸಮಾಜದ ಸ್ವಾಸ್ಯ್ಥ ಹಾಳಾಗುತ್ತಿರುವುದರಿಂದ ಸಾರ್ವಜನಿಕರಿಗೆ ಇದರ ಬಗ್ಗೆ ಅರಿವು ಮೂಡಿಸಿ ಆರೋಗ್ಯಯುತ ಸಮಾಜ ನಿರ್ಮಾಣ ಮಾಡಬೇಕಾಗಿದೆ ಎಂದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್‍ಕುಮಾರ್ ತಂಬಾಕು ಉತ್ಪನ್ನಗಳಿಂದಾಗುವ ದುಷ್ಪರಿಣಾಮಗಳು ಹಾಗೂ ಕೋಟ್ಪಾ ಕಾಯಿದೆ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ರಾಮಚಂದ್ರ ಕಾಮತ್ ಉಪನ್ಯಾಸ ನೀಡಿದರು.
ರಂಗೋಲಿ ಸ್ಪರ್ಧೆ, ಚಿತ್ರಕಲೆ ಸ್ವರ್ಧೆ, ಕ್ವಿಜ್ ಮತ್ತು ಪಿಕ್ ಎಂಡ್ ಸ್ಪೀಚ್ ಸ್ಪರ್ಧೆ ಹಮ್ಮಿಕೊಂಡು ವಿಜೇತರಿಗೆ ಗಣ್ಯರಿಂದ ಪ್ರಶಸ್ತಿ ಪ್ರದಾನ ಮಾಡಲಾಯಿತು.