- ಸಂಸದರಾದ ಜಿ.ಎಂ.ಸಿದ್ದೇಶ್ವರ, ಪ್ರತಾಪ ಸಿಂಹ, ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಉಪಸ್ಥಿತಿ - ಶ್ರೀ ಅಭಿನವ ರೇಣುಕಾ ಮಂದಿರದಲ್ಲಿ ಆಯೋಜನೆ, 5 ಸಾವಿರ ಯುವಜನರ ಪಾಲ್ಗೊಳ್ಳುವ ನಿರೀಕ್ಷೆ - - -
ಕನ್ನಡಪ್ರಭ ವಾರ್ತೆ, ದಾವಣಗೆರೆಬಿಜೆಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ಜಿಲ್ಲಾ ಯುವ ಸಮಾವೇಶವನ್ನು ನಗರದ ಶ್ರೀ ಅಭಿನವ ರೇಣುಕಾ ಮಂದಿರದಲ್ಲಿ ಏ.16ರಂದು ಹಮ್ಮಿಕೊಳ್ಳಲಾಗಿದೆ ಎಂದು ಮೋರ್ಚಾ ರಾಜ್ಯ ಉಪಾಧ್ಯಕ್ಷ ಮಾಯಕೊಂಡ ಜಿ.ಎಸ್. ಶ್ಯಾಮ್ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 11 ಗಂಟೆಗೆ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಆರ್.ಎಲ್. ಶಿವಪ್ರಕಾಶ ಅಧ್ಯಕ್ಷತೆಯಲ್ಲಿ ಸಮಾವೇಶ ಉದ್ಘಾಟನೆಗೊಳ್ಳಲಿದೆ. ಮೈಸೂರು ಸಂಸದ ಪ್ರತಾಪ ಸಿಂಹ, ಧೀರಜ್ ಗುರುರಾಜ, ಹರೀಶ ಪೂಂಜಾ, ಸಂದೀಪ್ ರವಿ, ಮಲ್ಲಿಕಾರ್ಜುನ ಬಾಳೆಕಾಯಿ ಪ್ರಮುಖ ಭಾಷಣಕಾರರಾಗಿ ಭಾಗವಹಿಸುವರು ಎಂದರು.ಸಂಸದ ಜಿ.ಎಂ. ಸಿದ್ದೇಶ್ವರ, ದಾವಣಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಸೇರಿದಂತೆ ಪಕ್ಷದ ಮುಖಂಡರು, ಪದಾಧಿಕಾರಿಗಳು ಭಾಗವಹಿಸುವರು. 5 ಸಾವಿರಕ್ಕೂ ಅಧಿಕ ಯುವಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕಳೆದೊಂದು ದಶಕದಲ್ಲಿ ಯುವಜನರಿಗೆ ಜಾರಿಗೆ ತಂದ ಹಲವಾರು ಯೋಜನೆಗಳ ಬಗ್ಗೆ ಪ್ರಮುಖರು ವಿಚಾರ ವಿನಿಮಯ ಮಾಡುವರು ಎಂದು ಹೇಳಿದರು.
ಯುವ ಸಮಾವೇಶಕ್ಕೆ ಜಿಲ್ಲೆ, ಲೋಕಸಭಾ ಕ್ಷೇತ್ರದ ಯುವಕ- ಯುವತಿಯರು ಪಾಲ್ಗೊಳ್ಳುವ ಮೂಲಕ ಯಶಸ್ವಿಗೊಳಿಸಬೇಕು. ಮತ್ತೊಮ್ಮೆ ಮೋದಿ ಎಂಬ ಘೋಷ ವಾಕ್ಯದೊಂದಿಗೆ ಮೋದಿ ಪರಿವಾರದ ಎಲ್ಲ ಯುವಶಕ್ತಿಯು ಮತ್ತೊಮ್ಮೆ ಕೇಂದ್ರದಲ್ಲಿ ಬಿಜೆಪಿ ನೇತೃತ್ವದಲ ಸರ್ಕಾರ ಪ್ರತಿಷ್ಠಾಪನೆಗೆ ಸಂಕಲ್ಪ ಮಾಡಲಿದ್ದು, ಸಮಾವೇಶಕ್ಕೆ ಈಗಾಗಲೇ ಅಂತಿಮ ಸಿದ್ಧತೆ ಸಹ ಆಗಿವೆ ಎಂದು ತಿಳಿಸಿದರು.ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಆರ್.ಎಲ್. ಶಿವಪ್ರಕಾಶ, ಯಲ್ಲೇಶ, ಸಚಿನ್ ವರ್ಣೇಕರ್, ರಾಕೇಶ ಬಜರಂಗಿ, ಹರೀಶ ಶಾಮನೂರು, ಧನುಷ್ ರೆಡ್ಡಿ, ಪ್ರಮೋದ, ಶ್ರೀಧರ ಹಾಲುವರ್ತಿ ಇತರರು ಇದ್ದರು.
- - - -15ಕೆಡಿವಿಜಿ12:ದಾವಣಗೆರೆಯಲ್ಲಿ ಸೋಮವಾರ ಬಿಜೆಪಿ ಯುವ ಮೋರ್ಚಾ ರಾಜ್ಯಾ ಉಪಾಧ್ಯಕ್ಷ ಮಾಯಕೊಂಡ ಜಿ.ಎಸ್.ಶ್ಯಾಮ್ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.