ಇಂದು ಜೆಡಿಎಸ್ ನಿಂದ ಧರ್ಮಸ್ಥಳ ಚಲೋ

KannadaprabhaNewsNetwork |  
Published : Aug 31, 2025, 01:09 AM IST
ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಸ್.ಎಲ್.ಭೋಜೇಗೌಡ | Kannada Prabha

ಸಾರಾಂಶ

ಚಿಕ್ಕಮಗಳೂರು, ಜಿಲ್ಲೆಯ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಆ. 31 ರಂದು ನಗರದಿಂದ ಧರ್ಮಸ್ಥಳ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಸ್.ಎಲ್.ಭೋಜೇಗೌಡ ತಿಳಿಸಿದರು.

ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಸ್.ಎಲ್.ಭೋಜೇಗೌಡ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಜಿಲ್ಲೆಯ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಆ. 31 ರಂದು ನಗರದಿಂದ ಧರ್ಮಸ್ಥಳ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಸ್.ಎಲ್.ಭೋಜೇಗೌಡ ತಿಳಿಸಿದರು.

ಜಿಲ್ಲೆಯಿಂದ 1,500 ಮಂದಿ ಧರ್ಮಸ್ಥಳ ಚಲೋದಲ್ಲಿ ಪಾಲ್ಗೊಳ್ಳುತ್ತಿದ್ದೇವೆ. ರಾಜ್ಯದಲ್ಲಿ 15 ಸಾವಿರ ಜನರು ಭಾಗವಹಿಸುತ್ತಿದ್ದಾರೆ. ಶಿವಮೊಗ್ಗ, ದಾವಣಗೆರೆ ಮೂಲಕ ಚಿಕ್ಕಮಗಳೂರಿಗೆ ಆಗಮಿಸುತ್ತಿದ್ದು, ಅಂದು ಬೆಳಗ್ಗೆ 8 ಗಂಟೆಗೆ ಕಾರ್ಯಕ್ರಮ ಆರಂಭಗೊಳ್ಳಲಿದೆ. ಚಾರ್ಮಾಡಿ ಘಾಟ್ ಮೂಲಕ ನೇತ್ರಾವತಿಯಲ್ಲಿ ಸೇರುತ್ತಿದ್ದಾರೆ. ಬೆಂಗಳೂರು, ಮೈಸೂರು ಮತ್ತು ಮಂಡ್ಯದವರು ಶಿರಾಡಿಘಾಟ್ ಮೂಲಕ ಆಗಮಿಸುತ್ತಿ ದ್ದಾರೆ. ಉತ್ತರ ಕನ್ನಡದವರು ಮಂಗಳೂರು ಮೂಲಕ ಧರ್ಮಸ್ಥಳಕ್ಕೆ ಆಗಮಿಸುತ್ತಿದ್ದಾರೆ ಎಂದು ಶುಕ್ರವಾರ ಸುದ್ಧಿಗೋಷ್ಠಿಯಲ್ಲಿ ತಿಳಿಸಿದರು.

ನೇತ್ರಾವತಿ ನದಿ ಬಳಿ ಎಲ್ಲರೂ ಸೇರಿ ಅಲ್ಲಿಂದ ಹೊರಟು ಧರ್ಮಸ್ಥಳದ ಮಂಜುನಾಥಸ್ವಾಮಿ ದರ್ಶನ ಪಡೆಯಲಾಗುವುದು. ಧರ್ಮಸ್ಥಳದ ವಿಷಯದಲ್ಲಿ ರಾಜಕೀಯ ಹಸ್ತಕ್ಷೇಪ ಇರಬಾರದು. ಧರ್ಮಸ್ಥಳ ಜಾಗದ ಪಾವಿತ್ರ್ಯತೆ ಎತ್ತಿ ಹಿಡಿಯುವ, ಈ ಸ್ಥಳದ ಬಗ್ಗೆ ವಿಶ್ವಾಸವಿಲ್ಲದವರು ಆಡುತ್ತಿರುವ ಮಾತಿಗೆ ಬೀಗ ಹಾಕ ಬೇಕೆನ್ನುವ ಉದ್ದೇಶದಿಂದ ಹಾಗೂ ಧರ್ಮಸ್ಥಳದೊಂದಿಗೆ ನಾವಿದ್ದೇವೆಂದು ಹೇಳುವ ಉದ್ದೇಶದಿಂದ ಚಲೋ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಾಕ್‌ ಸ್ವಾತಂತ್ರ್ಯವಿದೆ. ಹಾಗೆಂದ ಮಾತ್ರಕ್ಕೆ ವಾಕ್‌ ಸ್ವಾತಂತ್ರ್ಯ ದುರುಪ ಯೋಗಪಡಿಸಿಕೊಳ್ಳಬಾರದು. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವರ ಬಳಿ ದಾಖಲೆಗಳಿದ್ದರೆ ಅದನ್ನು ಸಂಬಂಧಿಸಿದವರಿಗೆ ನೀಡಿದರೆ ಅದನ್ನು ಸ್ವಾಗತಿಸುತ್ತೇವೆ. ಅದನ್ನು ಬಿಟ್ಟು ಹಾದಿ ಬೀದಿಯಲ್ಲಿ ಧರ್ಮಸ್ಥಳದ ಬಗ್ಗೆ ಅವಹೇಳನ ಮಾಡುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು,.

ಧರ್ಮಸ್ಥಳವನ್ನು ಅಪವಿತ್ರಗೊಳಿಸಬಾರದು. ಸಮಾಜಘಾತುಕ ಶಕ್ತಿಗಳು ಅವಹೇಳನಮಾಡುತ್ತಿದ್ದಾರೆ. ಆ ಜಾಗದಲ್ಲಿ ನಿಂತು ಪ್ರಚೋದನಕಾರಿ ಭಾಷಣ ಮಾಡುತ್ತಿದ್ದಾರೆ. ದೌರ್ಜನ್ಯಕ್ಕೆ ಒಳಗಾದವರ ಪರವಾಗಿಯೂ ನಾವಿದ್ದೇವೆಂದು ತಿಳಿಸಿದ ಅವರು, ರಾಜಕೀಯ ಮಾಡುವ ಸಲುವಾಗಿ ಧರ್ಮಸ್ಥಳಕ್ಕೆ ಹೋಗುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್, ಜೆಡಿಎಸ್ ನಗರ ಅಧ್ಯಕ್ಷ ಕುಮಾರಗೌಡ, ಮಹಾ ಪ್ರಧಾನ ಕಾರ್ಯದರ್ಶಿ ಸಿ.ಕೆ.ಮೂರ್ತಿ, ನಗರಸಭೆ ಸದಸ್ಯ ಗೋಪಿ, ನಗರಸಭೆ ಮಾಜಿ ಸದಸ್ಯ ದಿನೇಶ್ ಉಪಸ್ಥಿತರಿದ್ದರು.

29 ಕೆಸಿಕೆಎಂ 3

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ