ಗದಗ:ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘ, ಜಿಲ್ಲಾ ಶಾಖೆ, ವಿವಿಧ ಇಲಾಖೆಗಳ ವೃಂದ ಸಂಘಗಳು ಮತ್ತು ನೌಕರರ ಸಂಘಟನೆಗಳ ಸಹಯೋಗದಿಂದ ನೂತನ ಜಿಲ್ಲಾಧ್ಯಕ್ಷರ ಹಾಗೂ ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು ನೌಕರರ ಜನಸ್ನೇಹಿ ಕಾರ್ಯಾಗಾರವನ್ನು ಸೆ. 6ರಂದು ಬೆಳಗ್ಗೆ 11ಕ್ಕೆ ನಗರದ ಭಾರತ ರತ್ನ ಪಂ. ಭೀಮಸೇನ ಜೋಶಿ ರಂಗಮಂದಿರದಲ್ಲಿ ಆಯೋಜನೆ ಮಾಡಲಾಗಿದೆ.
ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರು ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಉದ್ಘಾಟನೆ ನೆರವೇರಿಸುವರು.
ರಾಜ್ಯ ಸರ್ಕಾರಿ ನೌಕರರ ಗದಗ ಜಿಲ್ಲಾ ಶಾಖೆಯ ಜಿಲ್ಲಾಧ್ಯಕ್ಷ ಡಾ. ಬಸವರಾಜ ಬಳ್ಳಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.ಮುಖ್ಯ ಅತಿಥಿಗಳಾಗಿ ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ, ಶಾಸಕ ಸಿ.ಸಿ. ಪಾಟೀಲ, ಡಾ. ಚಂದ್ರು ಲಮಾಣಿ, ವಿಪ ಶಾಸಕ ಎಸ್.ವಿ. ಸಂಕನೂರ, ಮಾಜಿ ಶಾಸಕ ಡಿ. ಆರ್. ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ನೌಕರ ಸಂಘದ ನಿಕಟ ಪೂರ್ವ ರಾಜ್ಯ ಹಿರಿಯ ಉಪಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ ಡಾ. ರವಿ ಗುಂಜಿಕರ ಆಗಮಿಸುವರು.
ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ, ಎಸ್ಪಿ ರೋಹನ್ ಜಗದೀಶ್, ಅಪರ ಜಿಲ್ಲಾಧಿಕಾರಿ ದುರಗೇಶ ಕೆ.ಆರ್., ಉಪ ವಿಭಾಗಾಧಿಕಾರಿ ಗಂಗಪ್ಪ ಎಂ. ಅವರುಗಳು ಉಪಸ್ಥಿತರಿರುವರು.
ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾಡಳಿತ ಭವನದಿಂದ ಭಾರತ ರತ್ನ ಪಂ. ಭೀಮ್ ಸೇನ್ ಜೋಶಿ ರಂಗಮಂದಿರದವರೆಗೆ ಕುಂಭಮೇಳ ಮೆರವಣಿಗೆ ಜರುಗಲಿದೆ. ಸಾಂಸ್ಕೃತಿಕ ರಸದೌತಣವನ್ನು ಗದಗ ನಟರಂಗ ಕಲ್ಚರಲ್ ಅಕಾಡೆಮಿ ತಂಡದಿಂದ ಏರ್ಪಡಿಸಿದೆ.