ಇಂದು ಮಾಜಿ ಸಂಸದ ದಿ. ಆರ್.ಧ್ರುವನಾರಾಯಣ ಹುಟ್ಟು ಹಬ್ಬ

KannadaprabhaNewsNetwork |  
Published : Jul 31, 2025, 12:45 AM IST
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ | Kannada Prabha

ಸಾರಾಂಶ

ಮಾಜಿ ಸಂಸದ ದಿವಂಗತ ಆರ್.ಧ್ರುವನಾರಾಯಣ 64ನೇ ಜನ್ಮದಿನದ ಅಂಗವಾಗಿ ಅವರ ಅಭಿಮಾನಿ ಬಳಗ, ರೋಟರಿ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹೆಲ್ಪ್ ಫೇಜ್ ಇಂಡಿಯಾ, ಬೃಂದವನ ಆಸ್ಪತ್ರೆ, ನಾರಾಯಣ ಆಸ್ಪತ್ರೆಯ ಸಹಯೋಗದಲ್ಲಿ ಗುರುವಾರ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರವನ್ನು ಅಯೋಜಿಸಲಾಗಿದೆ ಎಂದು ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ ತಿಳಿಸಿದರು

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಮಾಜಿ ಸಂಸದ ದಿವಂಗತ ಆರ್.ಧ್ರುವನಾರಾಯಣ 64ನೇ ಜನ್ಮದಿನದ ಅಂಗವಾಗಿ ಅವರ ಅಭಿಮಾನಿ ಬಳಗ, ರೋಟರಿ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹೆಲ್ಪ್ ಫೇಜ್ ಇಂಡಿಯಾ, ಬೃಂದವನ ಆಸ್ಪತ್ರೆ, ನಾರಾಯಣ ಆಸ್ಪತ್ರೆಯ ಸಹಯೋಗದಲ್ಲಿ ಗುರುವಾರ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರವನ್ನು ಅಯೋಜಿಸಲಾಗಿದೆ ಎಂದು ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ ತಿಳಿಸಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಧ್ರುವನಾರಾಯಣ್ ಸರಳ ವ್ಯಕ್ತಿತ್ವದ ರಾಜಕಾರಣಿಯಾಗಿದ್ದು, ಜಿಲ್ಲೆಯ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದರು. ಆಗಾಗಿ ಅವರ 64ನೇ ಹುಟ್ಟು ಹಬ್ಬವನ್ನು ಸರಳವಾಗಿ ಸಮಾಜಮುಖಿ ಕಾರ್ಯ ಮಾಡುವ ಮೂಲಕ ಅಚರಣೆ ಮಾಡಲಾಗುವುದು ಎಂದರು.

ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರಕ್ಕೆ ಧ್ರುವನಾರಾಯಣ ಅವರ ಭಾವಚಿತ್ರಕ್ಕೆ ಪುಷ್ಷಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಾಗುತ್ತದೆ. ಜಿಲ್ಲಾದ್ಯಂತ ಸಮಾಜ ಮುಖಿ ಕಾರ್ಯಗಳು ನಡೆಯುತ್ತದೆ. ಆರ್.ಧ್ರುವನಾರಾಯಣರವರ ಅಭಿಮಾನಿ ಬಳಗದ ವತಿಯಿಂದ ಕಳೆದ 13 ವರ್ಷಗಳಿಂದ ನಾನಾ ಸೇವಾ ಕಾರ್ಯಗಳೊಂದಿಗೆ ಧ್ರುವನಾರಾಯಣ ಅವರ ಹುಟ್ಟು ಹಬ್ಬವನ್ನು ಸರಳವಾಗಿ ಸಮಾಜಮುಖಿ ಯಾಗಿ ಆಚರಿಸಿಕೊಂಡು ಬರಲಾಗಿದ್ದು ,ಅಲ್ಲದೆ ನಂಜನಗೂಡಿನಲ್ಲಿ ಬೃಹತ್ ಉದ್ಯೋಗ ಮೇಳ ಅಯೋಜಿಸಲಾಗಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಆರ್.ಧ್ರುವನಾರಾಯಣ ರವರ ಅಭಿಮಾನಿ ಬಳಗದ ಅಧ್ಯಕ್ಷ ಹಾಗೂ ರೋಟರಿ ಅಧ್ಯಕ್ಷ ಕಾಗಲವಾಡಿ ಚಂದ್ರು, ಚೂಡಾಧ್ಯಕ್ಷ ಮಹಮ್ಮದ್ ಅಸ್ಗರ್, ಕನಿಷ್ಠ ವೇತನಾ ಸಲಹಾ ಮಂಡಳಿ ಮಾಜಿ ಅಧ್ಯಕ್ಷ ಉಮೇಶ್ ಎಸ್ ಪಿಕೆ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ತಾ.ಪಂ.ಮಾಜಿ ಅಧ್ಯಕ್ಷ ಚಿಕ್ಕಮಹದೇವು, ನಗರಸಭಾ ಮಾಜಿ ಸದಸ್ಯ ಚೆಂಗುಮಣಿ ಹಾಜರಿದ್ದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...