ಶಿವಮೊಗ್ಗ: ವಿನ್‍ಲೈಫ್, ಮೆಟ್ರೋ ಆಸ್ಪತ್ರೆ, ಡಯಾಬಿಟಿಸ್, ವೆಲ್‍ನೆಸ್ ಸೆಂಟರ್ ಹಾಗೂ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಸಹಯೋಗದಲ್ಲಿ ‘ವಿಶ್ವ ಮಧುಮೇಹ ದಿನಾಚರಣೆಯ ಅಂಗವಾಗಿ ನ.12ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಕುವೆಂಪು ರಂಗಮಂದಿರದಲ್ಲಿ ಜಿಲ್ಲೆಯ ಆಶಾ ಕಾರ್ಯಕರ್ತೆಯರಿಗೆ ತರಬೇತಿ ಮತ್ತು ಕಾರ್ಯಾಗಾರ ಏರ್ಪಡಿಸಲಾಗಿದೆ ಎಂದು ವಿನ್‍ಲೈಫ್‍ನ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ಮೆಟ್ರೋ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಬಿ.ಸಿ.ಪೃಥ್ವಿ ತಿಳಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಕಾರ್ಯಾಗಾರದಲ್ಲಿ ‘ಮಧುಮೇಹ @360 ಎಲ್ಲಾ ಆಯಾಮದಲ್ಲೂ ಮಧುಮೇಹದೊಂದಿಗೆ 100 ವರ್ಷ ಬಾಳಿ‘ ಇದರ ಬಗ್ಗೆ ಸಮಾಲೋಚನೆ, ಉಪನ್ಯಾಸ, ತುರ್ತು ಜೀವರಕ್ಷಕ ತರಬೇತಿ, ಸಮತೋಲನ ಆಹಾರ ಪದ್ದತಿ, ಮೆಡಿಕಲ್ ಯೋಗ ಥೆರೆಪಿ ಬಗ್ಗೆ ಸವಿಸ್ತಾರವಾಗಿ ತಿಳಿಸಲಾಗುವುದು. ಸಕ್ಕರೆ ಕಾಯಿಲೆಗೆ ಸಂಬಂಧಪಟ್ಟ ಎಲ್ಲಾ ಆಧುನಿಕ ಅವಿಷ್ಕಾರವನ್ನು ಪ್ರತ್ಯಕ್ಷಿಕವಾಗಿ ಆಸ್ಪತ್ರೆಯ ನಮ್ಮ ತಂಡದಿಂದ ತೋರಿಸಲಾಗವುದು ಎಂದು ವಿವರಿಸಿದರು.ಇದೀಗ ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಡಯಾಬಿಟಿಸ್‍ನ ಕುರಿತು ಸಂಪೂರ್ಣ ಮತ್ತು ನಿರಂತರ ಮಾಹಿತಿಗಾಗಿ ‘ಕ್ಯೂಆರ್ ಸ್ಕಾನರ್ ಕೋಡ್ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಜಿಲ್ಲಾ ರಕ್ಷಣಾಧಿಕಾರಿ ಬಿ.ಕೆ.ಮಿಥುನ್‍ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಸ್.ನಟರಾಜ್, ಆರ್‌ಸಿಎಚ್ ಅಧಿಕಾರಿ ಡಾ.ಓ.ಮಲ್ಲಪ್ಪ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರಾಜ್ ನಾಯಕ್.ಎಲ್. ಮೆಟ್ರೋ ಆಸ್ಪತ್ರೆ ಅಧ್ಯಕ್ಷ ಡಾ.ಪಿ.ಲಕ್ಷ್ಮೀನಾರಾಯಣ ಆಚಾರ್ ಉಪಸ್ಥಿತರಿರುವರು ಎಂದು ಮಾಹಿತಿ ನೀಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.