ಗದಗ:ಜಿಲ್ಲಾಡಳಿತ, ಜಿಪಂ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಶಿಕ್ಷಕರ ದಿನ, ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭವನ್ನು ಸೆ.5ರಂದು ಬೆಳಗ್ಗೆ 10ಕ್ಕೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.ವಿಪ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು.ಸಂಸದ ಬಸವರಾಜ ಬೊಮ್ಮಾಯಿ, ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕ ಜಿ.ಎಸ್. ಪಾಟೀಲ, ಸಂಸದರಾದ ಪಿ.ಸಿ. ಗದ್ದಿಗೌಡರ, ವಿಪ ಸದಸ್ಯರಾದ ಎಸ್.ವಿ. ಸಂಕನೂರ, ಪ್ರದೀಪ ಶೆಟ್ಟರ್, ಶಾಸಕರಾದ ಸಿ.ಸಿ. ಪಾಟೀಲ, ಡಾ. ಚಂದ್ರು ಲಮಾಣಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಆಗಮಿಸುವರು.
ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯ ಉಪನಿರ್ದೇಶಕ ಡಾ. ಹರಿಪ್ರಸಾದ್ ಜಿ.ವಿ. ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.