ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಶ್ರಯದಲ್ಲಿ ಅ.2ರಂದು ರಾಮನಗರದ ಗಾಂಧಿ ಭವನದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ 155ನೇ ಜನ್ಮ ದಿನಾಚರಣೆ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಸಮಾರಂಭ ನಿಮಿತ್ತ ಸ್ವಚ್ಛತಾ ನಡಿಗೆ, ಸರ್ವಧರ್ಮ ಪ್ರಾರ್ಥನೆ ಹಾಗೂ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ ಆಯೋಜಿಸಲಾಗಿದೆ.
ಬೆಳಗ್ಗೆ 10 ಗಂಟೆಗೆ ರಾಷ್ಟ್ರ ಧ್ವಜಾರೋಹಣದೊಂದಿಗೆ ಸ್ವಚ್ಛತಾ ನಡಿಗೆ ಆರಂಭವಾಗಲಿದೆ. ಅನಂತರ ಸ್ವಚ್ಛತೆಯ ಶ್ರಮದಾನ ನಂತರ ಸ್ವಚ್ಛತೆ ಕುರಿತು ಪ್ರತಿಜ್ಞಾವಿಧಿ ಸ್ವೀಕರಿಸಲಾಗುತ್ತದೆ. ಗಾಂಧಿ ಭವನ ಸಭಾಂಗಣದಲ್ಲಿ ಸರ್ವಧರ್ಮ ಪ್ರಾರ್ಥನೆ, ಭಜನ್ ಗೀತೆಗಳು, ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ, ವಿದ್ಯಾಥಿಗಳಿಂದ ಗಾಂಧಿ ಕುರಿತು ಭಾಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಂದ ಜಯಂತಿ ಕುರಿತು ಸಂದೇಶ ಕಾರ್ಯಕ್ರಮವಿದೆ.ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟನೆ ಮಾಡುವರು. ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ, ಚನ್ನಗಿರಿ ಶಾಸಕ ಬಸವರಾಜು ವಿ. ಶಿವಗಂಗಾ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ ಹರಿಹರ ಶಾಸಕ ಬಿ.ಪಿ. ಹರೀಶ್, ಹೊನ್ನಾಳಿ ಶಾಸಕ ಡಿ.ಜಿ.ಶಾಂತನಗೌಡ, ವಿಧಾನ ಪರಿಷತ್ತು ಸದಸ್ಯ ಎಸ್.ಎಲ್. ಭೋಜೇಗೌಡ, ಚಿದಾನಂದ ಎಂ. ಗೌಡ, ಡಿ.ಎಸ್. ಅರಣ್, ಕೆ.ಎಸ್. ನವೀನ್, ಕೆ.ಅಬ್ದುಲ್ ಜಬ್ಬಾರ್, ಡಾ.ಧನಂಜಯ್ ಸರ್ಜಿ, ಡಿ.ಟಿ. ಶ್ರೀನಿವಾಸ್, ಪಾಲಿಕೆ ಮಹಾಪೌರ ಕೆ.ಚಮನ್ ಸಾಬ್, ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಹಾಗೂ ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಜಿಪಂ ಸಿಇಒ ಸುರೇಶ್ ಬಿ. ಇಟ್ನಾಳ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಭಾಗವಹಿಸುವರು.
- - -