ಇಂದು ಪ್ರತಿಭಾ ಪುರಸ್ಕಾರ, ಸನ್ಮಾನ ಸಮಾರಂಭ

KannadaprabhaNewsNetwork | Published : Jul 14, 2024 1:30 AM

ಸಾರಾಂಶ

ತಾಲೂಕು ಗಾಣಿಗ ಸಮಾಜ ಕ್ಷೇಮಾಭಿವೃದ್ಧಿ ಸಂಘ, ಜ್ಯೋತಿ ಪತ್ತಿನ ಸಹಕಾರಿ ಸಂಘ ನಿ., ಬೀಳಗಿ, ಗಾಣಿಗ ಸಮಾಜ ನೌಕರರ ಸಂಘ, ಯುವ ಘಟಕ, ನಗರ ಘಟಕ ಹಾಗೂ ಮಹಿಳಾ ಘಟಕ ಸಂಯುಕ್ತ ಆಶ್ರಯದಲ್ಲಿ ಸಿದ್ಧೇಶ್ವರ ದೇವಾಲಯದಲ್ಲಿ ಜು.14 ರಂದು ಬೆಳಗ್ಗೆ 11.05ಕ್ಕೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಬೀಳಗಿ ತಾಲೂಕು ಗಾಣಿಗ ಸಮಾಜದ ಅಧ್ಯಕ್ಷ ಹನುಮಂತ ಸೂಳಿಕೇರಿ ಹೇಳಿದರು.

ಕನ್ನಡಪ್ರಭ ವಾರ್ತೆ ಬೀಳಗಿ

ಪಟ್ಟಣದ ಜೋತಿ ಪತ್ತಿನ ಸಹಕಾರಿ ಸಂಘದ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಮಾರಂಭದ ಸಾನ್ನಿಧ್ಯವನ್ನು ಕುಳ್ಳೂರ-ಯಡಹಳ್ಳಿ ಗುರು ಶಿವಯೋಗೀಶ್ವರ ಸಂಸ್ಥಾನ ಕಲ್ಮಠದ ಬಸವಾನಂದ ಭಾರತಿ ಮಹಾಸ್ವಾಮಿಗಳು ವಹಿಸುವರು. ಸಂಸದ ಪಿ.ಸಿ. ಗದ್ದಿಗೌಡರ, ಅಥಣಿ ಶಾಸಕ ಲಕ್ಷ್ಮಣ ಎಸ್.ಸವದಿ ಸಮಾರಂಭ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಬಸವಪ್ರಭು ಸರನಾಡಗೌಡ, ಬಾಗಲಕೋಟೆ ಬಿಟಿಡಿಎ ಮಾಜಿ ಸದಸ್ಯ ಕುಮಾರ ಜಿ.ಯಳ್ಳಿಗುತ್ತಿ, ರಾಜ್ಯ ಗಾಣಿಗ ನೌಕರರ ಸಂಘದ ಗೌರವಾಧ್ಯಕ್ಷ ಆರ್.ಜಿ.ಪಾಟೀಲ, ಗಾಣಿಗ ಸಮಾಜದ ಜಿಲ್ಲಾಧ್ಯಕ್ಷ ಅಶೋಕ ಲಾಗಲೋಟಿ, ಬಿಜೆಪಿ ಬೆಳಗಾವಿ ವಿಭಾಗದ ಸಹಪ್ರಭಾರಿ ಬಸವರಾಜ ಯಂಕಂಚಿ, ಗಾಣಿಗ ಸಮಾಜ ಯುವ ಘಟಕದ ರಾಜ್ಯಾಧ್ಯಕ್ಷ ದುಂಡಪ್ಪ ಏಳೆಮ್ಮಿ, ಬೀಳಗಿ ತಾಲೂಕು ಬಿಜೆಪಿ ಅಧ್ಯಕ್ಷ ಈರಣ್ಣ ಗಿಡ್ಡಪ್ಪಗೋಳ ಆಗಮಿಸುವರು ಎಂದು ತಿಳಿಸಿದರು.

ಜ್ಯೋತಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಶಿವಪ್ಪ ಸಿ.ಅವಟಿ, ಉಪಾಧ್ಯಕ್ಷ ಕಲ್ಲಪ್ಪ ರಾ.ಸುಳ್ಳದ, ಗಾಣಿಗ ಸಮಾಜದ ನೌಕರ ಘಟಕದ ಅಧ್ಯಕ್ಷ ಬಿ.ಕೆ.ಸುಳ್ಳದ, ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಬಗಲಿ, ಯುವ ಘಟಕದ ಅಧ್ಯಕ್ಷ ನಿಂಗಪ್ಪ ಹುಗ್ಗಿ, ನಗರ ಘಟಕದ ಅಧ್ಯಕ್ಷ ಹನಮಂತ ಮೆಳ್ಳಿಗೇರಿ ಉಪಸ್ಥಿತರಿರುವರು ಎಂದು ಮಾಹಿತಿ ನೀಡಿದರು.

ಗೋಷ್ಠಿಯಲ್ಲಿ ತಾಲೂಕು ಗಾಣಿಗ ಸಮಾಜದ ಕಾರ್ಯದರ್ಶಿ ಬಸವರಾಜ ಬಗಲಿ, ಜ್ಯೋತಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಶಿವಪ್ಪ ಅವಟಿ, ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ವಿಠ್ಠಲ ಬಾಗೇವಾಡಿ, ಕಜಾಪ ಜಿಲ್ಲಾಧ್ಯಕ್ಷ ಡಿ.ಎಂ.ಸಾವಕಾರ, ನಿಂಗಪ್ಪ ಹುಗ್ಗಿ, ಹನಮಂತ ಮೆಳ್ಳಿಗೇರಿ, ಬಸವರಾಜ ಬೆಣ್ಣಿರೊಟ್ಟಿ ಇದ್ದರು.

Share this article