ಇಂದು ಪತ್ರಿಕಾ ದಿನಾಚರಣೆ: ಕನ್ನಡಪ್ರಭ ಶ್ರೀಶೈಲ ಮಠದ ಸೇರಿದಂತೆ ಹಿರಿಯ ಪತ್ರಕರ್ತರಿಗೆ ಸನ್ಮಾನ

KannadaprabhaNewsNetwork |  
Published : Aug 16, 2026, 04:15 AM IST
ಬೆಳಗಾವಿ | Kannada Prabha

ಸಾರಾಂಶ

ಕರ್ನಾಟಕ ಪತ್ರಕರ್ತರ ಸಂಘ (ರಿ) ಹಾಗೂ ಕರ್ನಾಟಕ ಜರ್ನಲಿಸ್ಟ್ಸ್ ಯೂನಿಯನ್ (ರಿ) ಟ್ರಸ್ಟ್ ಸಹಯೋಗದಲ್ಲಿ ನಗರದ ಎಸ್‌ಜಿಬಿಐಟಿ ಸಭಾಗ್ರಹ ನಾಗನೂರ ರುದ್ರಕ್ಷಿಮಠದಲ್ಲಿ ಆ.16ರ ಬೆಳಗ್ಗೆ 10 ಗಂಟೆಗೆ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ಕರ್ನಾಟಕ ಪತ್ರಕರ್ತರ ಸಂಘ (ರಿ) ಹಾಗೂ ಕರ್ನಾಟಕ ಜರ್ನಲಿಸ್ಟ್ಸ್ ಯೂನಿಯನ್ (ರಿ) ಟ್ರಸ್ಟ್ ಸಹಯೋಗದಲ್ಲಿ ನಗರದ ಎಸ್‌ಜಿಬಿಐಟಿ ಸಭಾಗ್ರಹ ನಾಗನೂರ ರುದ್ರಕ್ಷಿಮಠದಲ್ಲಿ ಆ.16ರ ಬೆಳಗ್ಗೆ 10 ಗಂಟೆಗೆ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.

ನಾಗನೂರು ರುದ್ರಾಕ್ಷಿ ಮಠದ ಪೀಠಾಧಿಕಾರಿ, ಕರ್ನಾಟಕ ಜರ್ನಲಿಸ್ಟ್ಸ್ ಯೂನಿಯನ್ (ರಿ) ಟ್ರಸ್ಟ್‌ನ ಗೌರವಾಧ್ಯಕ್ಷರಾದ ಡಾ.ಅಲ್ಲಮಪ್ರಭು ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ಹಾಗೂ ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಮುರುಗೇಶ ಶಿವಪೂಜಿ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ ಕಾರ್ಯಕ್ರಮ ಉದ್ಘಾಟಿಸುವರು.

ಮುಖ್ಯಅತಿಥಿಗಳಾಗಿ ಬೆಳಗಾವಿ ವಿಶ್ವೇಶ್ವರ ತಾಂತ್ರಿಕ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಪ್ರಸಾದ್‌ ರಾಂಪೂರೆ, ಬೆಳಗಾವಿ ಪೊಲೀಸ್‌ ಉಪಆಯುಕ್ತ ನಾರಾಯಣ ಭರಮನಿ, ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಕಾರ್ತಿಕ.ಎಂ, ಬೆಳಗಾವಿ ವಾರ್ತಾ ಮತ್ತು ಪ್ರಚಾರ ಇಲಾಖೆಯ ಹಿರಿಯ ಉಪನಿರ್ದೇಶಕ ಗುರುನಾಥ ಕಡಬೂರ, ಬೆಳಗಾವಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಾಗರಾಜ ಬಾಳೆಹೊಸೂರು ಸೇರಿದಂತೆ ಕನ್ನಡಪ್ರಭ ಬೆಳಗಾವಿ ಆವೃತ್ತಿಯ ಸ್ಥಾನಿಕ ಸಂಪಾದಕ ಬ್ರಹ್ಮಾನಂದ ಹಡಗಲಿ ಆಗಮಿಸುವರು. ನಾಡೋಜ ಪತ್ರಿಕೆಯ ಸಂಪಾದಕ ಎಸ್‌.ಬಿ.ಧಾರವಾಡಕರ, ಬೆಳಗಾವಿ ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ಡ, ಕರ್ನಾಟಕ ಪತ್ರಕರ್ತರ ಸಂಘದ ಕಾನೂನು ಸಲಹೆಗಾರ ಬಸವರಾಜ ರೊಟ್ಟಿ ಉಪಸ್ಥಿತರಿರುವರು. ಇದೇ ಸಂದರ್ಭದಲ್ಲಿ ಪತ್ರಿಕೋದ್ಯಮದಲ್ಲಿ ಅನುಪಮ ಸೇವೆ ಸಲ್ಲಿಸಿರುವ ಹಿರಿಯ ವರದಿಗಾರರಾದ ಬೆಳಗಾವಿ ಇಂಡಿಯನ್‌ ಎಕ್ಸಪ್ರೆಸ್‌ನ ಅಸೋಸಿಯೇಟ್‌ ಎಡಿಟರ್‌ ನೌಶಾದ್‌ ಬಿಜಾಪುರೆ, ಸಂಯುಕ್ತ ಕರ್ನಾಟಕದ ಮುಖ್ಯ ವರದಿಗಾರ ವಿಲಾಸ್‌ ಜೋಶಿ, ಕನ್ನಡಪ್ರಭದ ಪ್ರಧಾನ ವರದಿಗಾರ ಶ್ರೀಶೈಲ ಮಠದ, ನ್ಯೂಸ್‌ ಫಸ್ಟ್‌ ಜಿಲ್ಲಾ ವರದಿಗಾರ ಶ್ರೀಕಾಂತ ಕುಬಕಡ್ಡಿ, ತರುಣ ಭಾರತ ಪತ್ರಿಕೆಯ ಹಿರಿಯ ವರದಿಗಾರ ರಮೇಶ ಹಿರೇಮಠ, ವೇಣುಧ್ವನಿ ರೇಡಿಯೋ ಕಾರ್ಯಕ್ರಮದ ಸಂಯೋಜಕ ಮಂಜುನಾಥ ಬಳ್ಳಾರಿಯವರಿಗೆ ವಿಶೇಷ ಗೌರವ ಪ್ರದಾನ ನಡೆಯಲಿದೆ ಎಂದು ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಪತಕುಮಾರ ಮುಚಳಂಬಿ ಹಾಗೂ ದಿನಪತ್ರಿಕೆಗಳ ಸಂಪಾದಕರ ಸಂಘದ ಜಿಲ್ಲಾ ಉಪಾಧ್ಯಕ್ಷ ಹಿರೋಜಿ ಮಾವರಕರ ಹಾಗೂ ಕರ್ನಾಟಕ ಜರ್ನಲಿಸ್ಟ್ಸ್ ಯೂನಿಯನ್ (ರಿ) ಟ್ರಸ್ಟ್‌ನ ಕಾರ್ಯದರ್ಶಿ ವಸಂತ ಹೊಸಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸೈಕಲ್‌ ಸವಾರಿ ಮಾಡಿ ಅಚ್ಚರಿ ಮೂಡಿಸಿದ ಶಾಸಕ ಜಗದೀಶ ಗುಡಗುಂಟಿ
ಗ್ಯಾರಂಟಿಗಳಿಂದ ಸರ್ಕಾರಕ್ಕೆ ವಿಶೇಷ ಗೌರವ