ಇಂದು ಪುತ್ತಿಗೆ ಸೋಮನಾಥೇಶ್ವರ ದೇಗುಲ ಬ್ರಹ್ಮಕಲಶೋತ್ಸವ

KannadaprabhaNewsNetwork |  
Published : Mar 06, 2025, 12:33 AM IST
ಪುತ್ತೆ | Kannada Prabha

ಸಾರಾಂಶ

ಬೆಳಗ್ಗೆ 7.37ಕ್ಕೆ ಶ್ರೀ ಸೋಮನಾಥೇಶ್ವರ ಹಾಗೂ ಶ್ರೀ ಮಹಿಷಮರ್ಧಿನಿ ಅಮ್ಮನವರಿಗೆ ಬ್ರಹ್ಮಕಲಶಾಭಿಷೇಕವು ಎಡಪದವು ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಪನ್ನಗೊಳ್ಳಲಿದೆ. ನ್ಯಾಸ ಪೂಜೆ, ಪ್ರತಿಜ್ಞಾ ವಿಧಿ, ಮಹಾಪೂಜೆ, ಪಲ್ಲಪೂಜೆಯಾಗಿ ಮಹಾಅನ್ನಸಂತರ್ಪಣೆ ನಡೆಯಲಿದೆ ಎಂದು ಕ್ಷೇತ್ರದ ಆನುವಂಶಿಕ ಆಡಳಿತ ಮೊಕ್ತಸರ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕುಲದೀಪ ಎಂ. ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮೂಡುಬಿದಿರೆ

ಎಂಟು ಶತಮಾನಗಳ ಇತಿಹಾಸವಿರುವ ಚೌಟರ ಸೀಮೆ ‘ಪುತ್ತೆ’ (ಪುತ್ತಿಗೆ) ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮಾ.6ರಂದು ಬ್ರಹ್ಮಕಲಶೋತ್ಸವ ನಡೆಯಲಿದೆ.ಬೆಳಗ್ಗೆ 7.37ಕ್ಕೆ ಶ್ರೀ ಸೋಮನಾಥೇಶ್ವರ ಹಾಗೂ ಶ್ರೀ ಮಹಿಷಮರ್ಧಿನಿ ಅಮ್ಮನವರಿಗೆ ಬ್ರಹ್ಮಕಲಶಾಭಿಷೇಕವು ಎಡಪದವು ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಪನ್ನಗೊಳ್ಳಲಿದೆ.

ನ್ಯಾಸ ಪೂಜೆ, ಪ್ರತಿಜ್ಞಾ ವಿಧಿ, ಮಹಾಪೂಜೆ, ಪಲ್ಲಪೂಜೆಯಾಗಿ ಮಹಾಅನ್ನಸಂತರ್ಪಣೆ ನಡೆಯಲಿದೆ ಎಂದು ಕ್ಷೇತ್ರದ ಆನುವಂಶಿಕ ಆಡಳಿತ ಮೊಕ್ತಸರ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕುಲದೀಪ ಎಂ. ತಿಳಿಸಿದ್ದಾರೆ.

ತಿರುಮಲರಾಯ ಚೌಟ ವೇದಿಕೆಯಲ್ಲಿ ಸಂಜೆ 6.30ರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆ, ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಡೆಯುವ ಧಾರ್ಮಿಕ ಸಭೆಯಲ್ಲಿ ವಾಸ್ತುತಜ್ಞ ಅವಧಾನಿ ಗುಂಡಿಬೈಲು ಸುಬ್ರಹ್ಮಣ್ಯ ಭಟ್ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ವಿಧಾನಸಭಾಧ್ಯಕ್ಷಯು. ಟಿ. ಖಾದರ್, ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ಉಮಾನಾಥ ಕೋಟ್ಯಾನ್, ರಾಮದಾಸ ಮಡ್ಡಣ್ಣಾಯ, ಅದಾನಿ ಗ್ರೂಪ್‌ನ ಕಿಶೋರ್ ಆಳ್ವ, ಪ್ರಶಾಂತ್ ವಾಟಿಕಾ, ಪಾಂಡುರಂಗ ಕಾಮತ್, ವೆಂಕಟರಮಣ ಭಟ್ ಪಡುಬೆಟ್ಟು, ಡಾ. ಎಂ. ಮೋಹನ ಆಳ್ವ, ಕೆ. ಶ್ರೀಪತಿ ಭಟ್, ಸುಧಾಕರ ಶೆಟ್ಟಿ, ಪ್ರಕಾಶ್ ಶೆಟ್ಟಿ, ದಯಾನಂದ ಶೆಟ್ಟಿ ಕಟ್ಟಣಿಗೆ ಪುತ್ತಿಗೆ ಭಾಗವಹಿಸಲಿದ್ದಾರೆ.

ಮಾ.7ರಂದು ಸಂಪ್ರೋಕ್ಷಣೆ, ಸಂಜೆ ಧರ್ಮ ದೈವಗಳ ನೇಮ ನಡೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ