ಇಂದು ಶರಣ ಶ್ರೀನುಲಿಯ ಚಂದಯ್ಯ ಜಯಂತಿ

KannadaprabhaNewsNetwork |  
Published : Aug 28, 2026, 01:15 AM IST
27ಕೆಎಂಎನ್ ಡಿ21 | Kannada Prabha

ಸಾರಾಂಶ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಶ್ರಾಯದಲ್ಲಿ ಆ. 28 ರಂದು ಬೆಳಿಗ್ಗೆ 11ಕ್ಕೆ ಕುವೆಂಪು ರಂಗಮಂದಿರದಲ್ಲಿ ಶರಣ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಆಯೋಜಿಸಿದೆ.

ಶಿವಮೊಗ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಶ್ರಾಯದಲ್ಲಿ ಆ. 28 ರಂದು ಬೆಳಿಗ್ಗೆ 11ಕ್ಕೆ ಕುವೆಂಪು ರಂಗಮಂದಿರದಲ್ಲಿ ಶರಣ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಆಯೋಜಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಉದ್ಘಾಟಿಸುವರು. ವಿಶೇಷ ಆಹ್ವಾನಿತರಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪ ಆಗಮಿಸುವರು. ಶಾಸಕ ಎಸ್.ಎನ್. ಚನ್ನಬಸಪ್ಪ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನ ಸಭಾ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಪಾಲಿಕೆ ಆಯುಕ್ತರು, ಜಿಲ್ಲಾಧಿಕಾರಿ, ಎಸ್ಪಿ, ಜಿ.ಪಂ. ಸಿಇಓ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು, ಅಧಿಕಾರಿ ವರ್ಗದವರು ಹಾಗೂ ಸಿಬ್ಬಂದಿ ಮತ್ತು ವಿವಿಧ ಸಂಘಟನೆಯ ಮುಖಂಡರು ಭಾಗವಹಿಸುವರು. ಕುವೆಂಪು ವಿವಿ ಕನ್ನಡ ಪ್ರಾಧ್ಯಾಪಕರು ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ಶುಭಾ ಮರವಂತೆ ವಿಶೇಷ ಉಪನ್ಯಾಸ ನೀಡುವರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆಧ್ಯಾತ್ಮಿಕ ಅನುಭೂತಿಯ ಮುದ್ರಾಧಾರಣೆ
ದಸರಾ ಗಜಪಯಣಕ್ಕೆ ಅದ್ಧೂರಿ ಚಾಲನೆ - ವೀರನಹೊಸಹಳ್ಳಿಯಿಂದ ಮೈಸೂರಿಗೆ ಬಂದ 9 ಆನೆಗಳು