ಇಂದು ಹಳ್ಳಿಗಟ್ಟು ಮಾರಮ್ಮ ದೇವರ ವಾರ್ಷಿಕ ಉತ್ಸವ

KannadaprabhaNewsNetwork |  
Published : Jul 16, 2024, 12:31 AM IST
ಚಿತ್ರ : 15ಎಂಡಿಕೆ1 : ಹಳ್ಳಿಗಟ್ಟು ಮಾರಿಗುಡಿ | Kannada Prabha

ಸಾರಾಂಶ

ಹಳ್ಳಿಗಟ್ಟು ಮಾರಮ್ಮ ದೇವರ ವಾರ್ಷಿಕ ಉತ್ಸವ ಇದೇ ಜು. 16ರಂದು ನಡೆಯಲಿದೆ. ಬೆಳಗ್ಗೆ 9ರಿಂದ ಸಂಜೆ 3 ಗಂಟೆಯ ವರೆಗೆ ನಡೆಯಲಿದೆ.

ಕನ್ನಡಪ್ರಭ ವಾರ್ತೆ ಪೊನ್ನಂಪೇಟೆ

ಹಳ್ಳಿಗಟ್ಟು ಮಾರಮ್ಮ ದೇವರ ವಾರ್ಷಿಕ ಉತ್ಸವ ಇದೇ ಜು. 16ರಂದು ನಡೆಯಲಿದೆ ಎಂದು ಶ್ರೀ ಗುಂಡಿಯತ್ ಅಯ್ಯಪ್ಪ, ಭದ್ರಕಾಳಿ ಹಾಗೂ ಮಾರಮ್ಮ ದೇವರ ಅಭಿವೃದ್ಧಿ ಸಮಿತಿ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಪ್ರತಿ ವರ್ಷದಂತೆ ಈ ಬಾರಿಯೂ ಕಕ್ಕಡ ಮಾಸಕ್ಕೆ ಒಂದು ದಿನ ಮುಂಚೆ ನಡೆಯುವ ಮಾರಮ್ಮ ದೇವರ ವಾರ್ಷಿಕ ಹಬ್ಬ ‘ಮಾರಿಗುಡಿ’ ಇದೇ ಜು.16ರಂದು ಬೆಳಗ್ಗೆ 9ಗಂಟೆಯಿಂದ ಸಂಜೆ 3 ಗಂಟೆಯವರೆಗೆ ನಡೆಯಲಿದ್ದು ಒಂದು ವಾರಗಳ ನಂತರ ಕೊಕ್ಕಡ ಮಾಸದಲ್ಲಿ ನಡೆಯುವ ಮತ್ತೊಂದು ಮಾರಿಗುಡಿ ಹಬ್ಬ ಜು. 22ರಂದು ನಡೆಯಲಿದೆ. ಹರಕೆ ಕಾಣಿಕೆ ಸಲ್ಲಿಸುವವರು ಈ ಎರಡು ದಿನಗಳಲ್ಲಿ ಯಾವ ದಿವಸ ಬೇಕಾದರೂ ಸಲ್ಲಿಸಬಹುದಾಗಿದೆ. ಊರಿನವರು ಮಾತ್ರವಲ್ಲದೆ ಯಾರು ಬೇಕಾದರೂ ಹಬ್ಬದಲ್ಲಿ ಪಾಲ್ಗೊಳ್ಳಬಹುದಾಗಿದ್ದು, ಜೋಡುಬೀಟಿಯಿಂದ ಮೂಕಳೇರ ಹಾಗೂ ಮಚ್ಚಿಯಂಡ ಬಲ್ಯಮನೆಗೆ ಹೋಗುವ ರಸ್ತೆಯಲ್ಲಿರುವ ಈ ದೇವಸ್ಥಾನಕ್ಕೆ ಪುರಾತನ ಕಾಲದ ಇತಿಹಾಸವಿದ್ದು ವರ್ಷಕ್ಕೆ ಎರಡು ಬಾರಿ ಮಾತ್ರ ಇಲ್ಲಿ ಪೂಜೆ ಪುನಸ್ಕಾರ ಹಾಗೂ ಹಬ್ಬ ನಡೆಯುತ್ತದೆ.

ಮಚ್ಚಿಯಂಡ ಕುಟುಂಬದ ಮುಂದಾಳತ್ವದಲ್ಲಿ ಇಲ್ಲಿ ಹಬ್ಬ ನಡೆಯಲಿದ್ದು, ಈ ಕುಟುಂಬದವರೇ ಇಲ್ಲಿ ಪೂಜಾರಿಗಳಾಗಿ ಕಾರ್ಯ ನಿರ್ವಹಿಸುತ್ತಾರೆ. ಇಲ್ಲಿಗೆ ಬ್ರಾಹ್ಮಣರ ಪೂಜೆ ನಿಷೇಧವಾಗಿದ್ದು ಕೊಡವ ಜನಾಂಗದವರೇ ಇಲ್ಲಿ ಪೂಜಾರಿಗಳಾಗಿರುತ್ತಾರೆ. ಹೆಚ್ಚಿನ ಮಾಹಿತಿಗೆ ಚಮ್ಮಟೀರ ಪ್ರವೀಣ್ ಉತ್ತಪ್ಪ, ಅಧ್ಯಕ್ಷರು- 9880967573 ಅಥವಾ ಮೂಕಳೇರ ರಮೇಶ್, ಗೌರವ ಕಾರ್ಯದರ್ಶಿ- 94838 15430 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಲವಿನ ಊಟ ಬಡಿಸಲು ಸಿದ್ಧವಾದ ಅಕ್ಕ ಕೆಫೆ
ಚನ್ನಮ್ಮ ಮೂರ್ತಿ ಉದ್ಘಾಟನಾ ಸಮಾರಂಭಕ್ಕೆ ಬಹಿಷ್ಕಾರ