ಇಂದು ಕಲಾಭವನದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ

KannadaprabhaNewsNetwork |  
Published : Jun 27, 2025, 12:54 AM IST
26ಎಚ್ಎಸ್ಎನ್13 :  | Kannada Prabha

ಸಾರಾಂಶ

ಶುಕ್ರವಾರ ನಾಡಪ್ರಭು ಕೆಂಪೇಗೌಡರ ಅದ್ಧೂರಿ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕಲಿಗರ ಸಂಘದ ರಘುಗೌಡ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಚ್.ಎಲ್. ಮಲ್ಲೇಶಗೌಡ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಬಳಿಯಿಂದ ಬೆಳಗ್ಗೆ ೧೦ ಗಂಟೆಗೆ ಹೊರಡುವ ಕೆಂಪೇಗೌಡರ ಭಾವಚಿತ್ರ ಮೆರವಣಿಗೆಗೆ ಡಿಸಿ ಅವರು ಚಾಲನೆ ನೀಡಲಿದ್ದಾರೆ. ಎಲ್ಲ ಸಮುದಾಯದವರ ಜೊತೆಗೆ ಸುಮಾರು ೧೨ ವಿವಿಧ ಕಲಾ ತಂಡಗಳು ಭಾಗಿಯಾಗಲಿವೆ ಎಂದು ಹೇಳಿದರು. ಬೆಳಗ್ಗೆ ೧೧ ಗಂಟೆಗೆ ಹಾಸನಾಂಬ ಕಲಾಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸುವರು ಎಂದರು.

ಕನ್ನಡಪ್ರಭ ವಾರ್ತೆ ಹಾಸನ

ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಲವು ಸಂಘಟನೆಗಳ ಆಶ್ರಯದಲ್ಲಿ ಜೂನ್ ೨೭ರ ಶುಕ್ರವಾರ ನಾಡಪ್ರಭು ಕೆಂಪೇಗೌಡರ ಅದ್ಧೂರಿ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕಲಿಗರ ಸಂಘದ ರಘುಗೌಡ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಚ್.ಎಲ್. ಮಲ್ಲೇಶಗೌಡ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ಜಿಲ್ಲಾಧಿಕಾರಿ ಕಚೇರಿ ಬಳಿಯಿಂದ ಬೆಳಗ್ಗೆ ೧೦ ಗಂಟೆಗೆ ಹೊರಡುವ ಕೆಂಪೇಗೌಡರ ಭಾವಚಿತ್ರ ಮೆರವಣಿಗೆಗೆ ಡಿಸಿ ಅವರು ಚಾಲನೆ ನೀಡಲಿದ್ದಾರೆ. ಎಲ್ಲ ಸಮುದಾಯದವರ ಜೊತೆಗೆ ಸುಮಾರು ೧೨ ವಿವಿಧ ಕಲಾ ತಂಡಗಳು ಭಾಗಿಯಾಗಲಿವೆ ಎಂದು ಹೇಳಿದರು. ಬೆಳಗ್ಗೆ ೧೧ ಗಂಟೆಗೆ ಹಾಸನಾಂಬ ಕಲಾಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸುವರು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಉಪಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣನ ಉದ್ಘಾಟನೆ ನೆರವೇರಿಸುವರು ಎಂದರು.

ಅರಸೀಕೆರೆ ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಗೌರವ ಉಪಸ್ಥಿತಿ ಇರುವರು. ಸ್ಥಳೀಯ ಶಾಸಕ ಎಚ್.ಪಿ.ಸ್ವರೂಪ್ ಪ್ರಕಾಶ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲೆಯ ಸಂಸದ ಶ್ರೇಯಸ್ ಪಟೇಲ್, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಹಾನಗರ ಪಾಲಿಕೆ ಅಧ್ಯಕ್ಷ ಎಂ. ಚಂದ್ರೇಗೌಡ, ಅತಿಥಿಗಳಾಗಿ ಕನ್ನಡ ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಕೆ.ಎಂ. ಗಾಯತ್ರಿ, ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನ ಸ್ವಾಮಿ, ಶ್ರೀ ಶಂಭುನಾಥ ಸ್ವಾಮೀಜಿ, ಮೊದಲಾದವರು ಜಿ.ಎಲ್. ಮುದ್ದೇಗೌಡ ಭಾಗವಹಿಸುವರು. ಮಂಡ್ಯದ ನಿವೃತ್ತ ಪ್ರಾಧ್ಯಾಪಕ ಡಾ.ಮ. ರಾಮಕೃಷ್ಣ ಉಪನ್ಯಾಸ ನೀಡುವರು ಎಂದು ವಿವರಿಸಿದರು.ಪ್ರತಿಭಾ ಪುರಸ್ಕಾರ:

ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ೬೨೩ರಿಂದ ೬೨೫ ಅಂಕ ಪಡೆದಿರುವ ಎಲ್ಲ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಪಿಯುಸಿಯ ಮೂರು ವಿಭಾಗಗಳಲ್ಲಿ ಹೆಚ್ಚು ಅಂಕ ಪಡೆದ ಮಕ್ಕಳನ್ನು ಸನ್ಮಾನಿಸಿ ಅಭಿನಂದಿಸಲಾಗುವುದು ಎಂದು ತಿಳಿಸಿದರು. ಇದೇ ವೇಳೆ ಕೆಂಪೇಗೌಡ ಅವರ ಸಾಧನೆ, ಕೊಡುಗೆ ಕುರಿತು ಮಕ್ಕಳಲ್ಲಿ ಸ್ಪರ್ಧೆ ಏರ್ಪಡಿಸಿ ಬಹುಮಾನ ನೀಡಲು ರಾಜ್ಯದ ಎಲ್ಲಾ ತಾಲೂಕುಗಳಿಗೆ ತಲಾ ೧ ಲಕ್ಷ ರು. ಅನುದಾನ ನೀಡಿರುವ ಬೆಂಗಳೂರು ಗ್ರೇಟರ್ ಮಹಾನಗರ ಪಾಲಿಕೆಗೆ ಧನ್ಯವಾದ ಹೇಳಿದರು. ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಎಸ್.ಎಸ್.ರಘುಗೌಡ ಮಾತನಾಡಿ, ಕೆಂಪೇಗೌಡರ ಜಯಂತಿ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಸಹಕರಿಸುವಂತೆ ಮನವಿ ಮಾಡಿದರು.

ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾ ಒಕ್ಕಲಿಗರ ಸಂಘದ ಕಾರ್ಯದರ್ಶಿ ಅಪ್ಪೇಗೌಡ, ಆದಿಚುಂಚನಗಿರಿ ಮಹಿಳಾ ಒಕ್ಕಲಿಗರ ಸಂಘದ ಅಧ್ಯಕ್ಷೆ ಡಾ. ಲತಾ ರಾಜಶೇಖರ್ , ಕಾರ್ಯದರ್ಶಿ ಕಲಾ ನರಸಿಂಹ, ಶ್ರೀ ಆದಿಚುಂಚನಗಿರಿ ಮಠದ ಮಾಧ್ಯಮ ವಕ್ತಾರ ಬಿ.ಆರ್‌. ಬೊಮ್ಮೇಗೌಡ ಇತರರು ಉಪಸ್ಥಿತರಿದ್ದರು.

PREV

Recommended Stories

ವೈದ್ಯರ ಕೊರತೆಗೆ ನಲುಗಿದ ಸಾರ್ವಜನಿಕ ಆಸ್ಪತ್ರೆ
ಸತ್ಯಕಾಮರ ಸುಮ್ಮನೆಯಲ್ಲಿ ಕಸಾಪ ವಾರ್ಷಿಕ ಸಭೆ: ಡಾ.ಮಹೇಶ ಜೋಷಿ