ಇಂದು ಶ್ರೀ ಚಂದ್ರಶೇಖರ ಸ್ವಾಮೀಜಿ ಹುಟ್ಟೂರ ಜನ್ಮ ದಿನ ಸಂಭ್ರಮ

KannadaprabhaNewsNetwork |  
Published : Oct 25, 2025, 01:02 AM IST
ಆಧ್ಯಾತ್ಮಿಕ ವಿಶ್ವ ಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿಯವರ ಹುಟ್ಟೂರಿನಲ್ಲಿ ಜನ್ಮ ದಿನ ಸಂಭ್ರಮ | Kannada Prabha

ಸಾರಾಂಶ

ಆಧ್ಯಾತ್ಮಿಕ ವಿಶ್ವ ಗುರು ಶ್ರೀ ಚಂದ್ರಶೇಖರ ಸ್ವಾಮೀಜಿ ಜನ್ಮದಿನ ಅ.25. ಸ್ವಾಮೀಜಿ ಅವರ ಹುಟ್ಟು ಹಬ್ಬವನ್ನು ದೀಪಾವಳಿ ಸಂಭ್ರಮದೊಂದಿಗೆ ಅವರ ಹುಟ್ಟೂರಿನಲ್ಲಿ ಸ್ವಾಮೀಜಿ ಸೇವಾಶ್ರಮದ ಮೂಲಕ ಅನೇಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಮೂಲ್ಕಿ: ಅಂತಾರಾಷ್ಟ್ರೀಯ ವಾಸ್ತು ತಜ್ಞ, ಆಧ್ಯಾತ್ಮಿಕ ವಿಶ್ವ ಗುರು ಶ್ರೀ ಚಂದ್ರಶೇಖರ ಸ್ವಾಮೀಜಿ ಜನ್ಮದಿನ ಅ.25. ಸ್ವಾಮೀಜಿ ಅವರ ಹುಟ್ಟು ಹಬ್ಬವನ್ನು ದೀಪಾವಳಿ ಸಂಭ್ರಮದೊಂದಿಗೆ ಅವರ ಹುಟ್ಟೂರಿನಲ್ಲಿ ಸ್ವಾಮೀಜಿ ಸೇವಾಶ್ರಮದ ಮೂಲಕ ಅನೇಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ತಮ್ಮ ಜನ್ಮ ದಿನದಂದು ಶ್ರೀ ಚಂದ್ರಶೇಖರ ಸ್ವಾಮೀಜಿ ಸಹ ಕುಟುಂಬಿಕರಾಗಿ ತಮ್ಮ ಆರಾಧ್ಯ ಕ್ಷೇತ್ರ ತಿರುಪತಿ ಶ್ರೀ ವೆಂಕಟೇಶ್ವರ ದೇವಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಯುಎಇ ಅರಬ್ ದೇಶದಲ್ಲಿ ನಡೆಯುವ ವಿಶೇಷ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅವರು ವಿದೇಶ ಪ್ರವಾಸದಲ್ಲಿದ್ದರೂ ಬೆಂಗಳೂರು ಮತ್ತು ಮೂಲ್ಕಿಯ ಅವರ ಆಶ್ರಮದ ಮೂಲಕ ವಿವಿಧ ಸಾಮಾಜಿಕ ಕಾರ್ಯವನ್ನು ನಡೆಸಲು ಸಿದ್ಧತೆ ನಡೆಸಲಾಗಿದೆ.

ಸ್ವಾಮೀಜಿ ಹುಟ್ಟು ಹಬ್ಬವನ್ನು ವಿವಿಧ ಸಾಮಾಜಿಕ ಚಟುವಟಿಕೆಯೊಂದಿಗೆ ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಹುಟ್ಟೂರಿನ ಅಭಿಮಾನದಿಂದ ಅವರ ಭಕ್ತರು ಹಾಗೂ ಅಭಿಮಾನಿಗಳು ಸೇರಿಕೊಂಡು ಹಲವು ಸೇವಾ ಕಾರ್ಯ ಹಮ್ಮಿಕೊಂಡಿದ್ದಾರೆ.ಮೂಲ್ಕಿ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶುದ್ಧ ಕುಡಿಯುವ ನೀರಿನ ಯಂತ್ರ ಹಾಗೂ ಒಳ ರೋಗಿಗಳಿಗೆ ವಿಶೇಷವಾಗಿ ಹಣ್ಣು ವಿತರಣೆ, ಕಿನ್ನಿಗೋಳಿಯ ಸೈಂಟ್ ಮೇರಿಸ್ ಸ್ಪೆಷಲ್ ಸ್ಕೂಲ್ ನ ವಿಶೇಷ ವಿಶೇಷಚೇತನ ಮಕ್ಕಳ ಶಾಲೆಗೆ ಊಟೋಪಚಾರ ಹಾಗೂ ಉಡುಗೊರೆ ಕೊಡುಗೆ, ಶ್ರಮಿಕರಿಗೆ, ದುರ್ಬಲ ವರ್ಗ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿಶೇಷ ನೆರವು, ಬೆಂಗಳೂರಿನ ಸೇವಾಶ್ರಮದಲ್ಲಿ ನಿರಂತರ ಧಾರ್ಮಿಕ ಕಾರ್ಯಕ್ರಮದೊಂದಿಗೆ ಬಡವರ್ಗದವರಿಗೆ ಉಚಿತ ಕೊಡುಗೆಗಳನ್ನುಆಶ್ರಮದ ಸಂಚಾಲಕ ಪುನೀತ್ ಕೃಷ್ಣ ನೇತೃತ್ವ ದಲ್ಲಿ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಸಿದ್ಧತೆ ಸಂಪೂರ್ಣವಾಗಿದೆ ಎಂದು ಸೇವಾಶ್ರಮದ ಗೌರವಾಧ್ಯಕ್ಷ ಐಕಳಬಾವ ಡಾ.ದೇವಿಪ್ರಸಾದ ಶೆಟ್ಟಿ ಬೆಳಪು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಿರಂತರ ಸೇವಾ ಚಟುವಟಕೆ: ಸ್ವಾಮೀಜಿ ಸೇವಾಶ್ರಮದ ಮೂಲಕ ನಿರಂತರ ಸಾಮಾಜಿಕ ಚಟುವಟಿಕೆಗೆ ವಿಶೇಷ ಆದ್ಯತೆ ನೀಡಿದ್ದು ಶೈಕ್ಷಣಿಕ ನೆರವು, ಸಾಧಕ ಕ್ರೀಡಾಳುಗಳಿಗೆ ಗೌರವ, ಮಹಿಳೆಯರಿಗೆ ಶುಭದಿನದ ಉಡುಗೊರೆ, ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಪ್ರೋತ್ಸಾಹ, ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಯ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ, ಸಂಘ ಸಂಸ್ಥೆಗಳ ಪ್ರಮುಖರಿಗೆ ಗೌರವ, ಸನ್ಮಾನದ ಜೊತೆಗೆ ಬೆಂಗಳೂರಿನಂತಹ ನಗರ ಪ್ರದೇಶದಲ್ಲಿರುವ ಹೈಟೆಕ್ ಬಸ್ ನಿಲ್ದಾಣವನ್ನು ಲಕ್ಷಾಂತರ ರು. ವೆಚ್ಚದಲ್ಲಿ ತಮ್ಮ ಹುಟ್ಟೂರಿನ (ಮೂಲ್ಕಿ-ಕಿಲ್ಪಾಡಿಯ ರಾಜ್ಯ ಹೆದ್ದಾರಿಯ)ಲ್ಲಿಯೇ ತೀರ್ಥರೂಪರಾದ ಕೀರ್ತಿಶೇಷ ಗೋವಿಂದ ಭಟ್ ಅವರ ಸ್ಮರಣಾರ್ಥವಾಗಿ ನಿರ್ಮಿಸಿ ಅದರ ನಿರ್ವಹಣೆಯನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಿದ್ದಾರೆ.ಪ್ರತೀ ವರ್ಷವು ತಮ್ಮ ಹುಟ್ಟು ಹಬ್ಬವನ್ನು ವಿವಿಧ ಅನಾಥಾಶ್ರಮ ಹಾಗೂ ಬಡವರ್ಗದವರಿಗೆ ವಿವಿಧ ರೀತಿಯಲ್ಲಿ ನೆರವು ನೀಡುವ ಕಾರ್ಯಕ್ರಮ ಹಾಗೂ ದೀಪಾವಳಿ ಸಂಭ್ರಮವನ್ನು ಶ್ರಮಿಕರೊಂದಿಗೆ ಆಚರಿಸುವ ಪರಿಪಾಠವನ್ನು ಹಲವು ವರ್ಷಗಳಿಂದಲೂ ನಮ್ಮ ಆಶ್ರಮದ ಭಕ್ತಾಧಿಗಳು, ಅಭಿಮಾನಿಗಳು ಕುಟುಂಬಿಕರೊಂದಿಗೆ ನಡೆಸುತ್ತಾ ಬಂದಿದ್ದೇವೆ. ನವೆಂಬರ್ ಎರಡನೇ ವಾರದಲ್ಲಿ ತಮ್ಮ ಉಪಸ್ಥಿತಿಯಲ್ಲಿ ಇನ್ನಷ್ಟು ವಿಶೇಷ ಕಾರ್ಯಕ್ರಮ ನಡೆಸಲು ಚಿಂತನೆ ನಡೆದಿದೆ ಎಂದು ಸ್ವಾಮೀಜಿ ತಿಳಿಸಿದ್ದಾರೆ.

PREV

Recommended Stories

ಸ್ವಸ್ಥ ಶರದ್ ಋತು ಪ್ರಕೃತಿಯ ಲಯದಲ್ಲಿ ಸ್ವಸ್ಥತೆ ! ಶರದ್ ಋತುವಿನ ಆಹಾರ ಮತ್ತು ದಿನಚರ್ಯೆ
ನಟ ದರ್ಶನ್‌ಗೆ ಜೈಲಿನಲ್ಲಿ ಹರಿದ ಚಾದರ : ವಕೀಲರ ವಾದ