ಇಂದು ಕ್ಯಾಂಡಲ್ ಲೈಟ್ ಮೆರವಣಿಗೆ

KannadaprabhaNewsNetwork |  
Published : Apr 16, 2024, 01:01 AM IST
15ಕೆಪಿಎಲ್29 ಜಿಲ್ಲಾ ಸ್ವೀಪ್ ಸಮಿತಿಯಿಂದಮಂಗಳವಾರ ಆಯೋಜಿಸಿರುವ ಕ್ಯಾಂಡಲ್ ಲೈಟ್ ಮೆರವಣಿಗೆ ಕಾರ್ಯಕ್ರಮದ ಪೂರ್ವ ಸಿದ್ದತೆಯ ಕುರಿತು ಚರ್ಚಿಸಲು ಸೋಮವಾರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಯಲ್ಲಿನಡೆದ ಸಭೆ | Kannada Prabha

ಸಾರಾಂಶ

ಏಪ್ರಿಲ್ 16 ರಂದು ಸಂಜೆ ಮತದಾನ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಸ್ವೀಪ್ ಸಮಿತಿಯಿಂದ ನಗರದಲ್ಲಿ ಕ್ಯಾಂಡಲ್ ಲೈಟ್ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮ । ಎಲ್ಲ ಅಧಿಕಾರಿ, ಸಿಬ್ಬಂದಿ ಕಡ್ಡಾಯವಾಗಿ ಭಾಗವಹಿಸಲು ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ ಸೂಚನೆಕನ್ನಡಪ್ರಭ ವಾರ್ತೆ ಕೊಪ್ಪಳ

ಏಪ್ರಿಲ್ 16 ರಂದು ಸಂಜೆ ಮತದಾನ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಸ್ವೀಪ್ ಸಮಿತಿಯಿಂದ ನಗರದಲ್ಲಿ ಕ್ಯಾಂಡಲ್ ಲೈಟ್ ಮೆರವಣಿಗೆಯನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮಕ್ಕೆ ಎಲ್ಲ ಇಲಾಖೆಗಳ ಅಧಿಕಾರಿಗಳು ತಮ್ಮ ಸಿಬ್ಬಂದಿಯೊಂದಿಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಜಿಪಂ ಸಿಇಒ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ರಾಹುಲ್ ರತ್ನಂ ಪಾಂಡೆಯ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಸ್ವೀಪ್ ಸಮಿತಿಯಿಂದ ಆಯೋಜಿಸಿರುವ ಕ್ಯಾಂಡಲ್ ಲೈಟ್ ಮೆರವಣಿಗೆ ಕಾರ್ಯಕ್ರಮದ ಪೂರ್ವ ಸಿದ್ದತೆಯ ಕುರಿತು ಚರ್ಚಿಸಲು ಸೋಮವಾರ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತ್ತು ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾನವು ಮೇ 7 ರಂದು ಎರಡನೇ ಹಂತದಲ್ಲಿ ನಡೆಯಲಿದ್ದು, ಈ ಸಂಬಂಧ ಮತದಾರರಲ್ಲಿ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ. ಅದರಂತೆ ಜಿಲ್ಲಾ ಸ್ವೀಪ್ ಸಮಿತಿಯಿಂದ ಜಿಲ್ಲೆಯ ಮತದಾರರಿಗೆ ಜಾಗೃತಿ ಮೂಡಿಸುವ ಸಲುವಾಗಿ ಏ. 16ರ ಸಂಜೆ 7 ಗಂಟೆಗೆ ಕೊಪ್ಪಳ ನಗರದ ಗಂಜ್ ವೃತ್ತದಿಂದ ಅಶೋಕ ವೃತ್ತದವರೆಗೆ ಒಂದು ತಂಡ ಹಾಗೂ ಗಡಿಯಾರ ಕಂಬ ವೃತ್ತದಿಂದ ಅಶೋಕ ವೃತ್ತದವರೆಗೆ ಒಂದು ತಂಡ, ಒಟ್ಟು ಎರಡು ತಂಡಗಳಿಂದ ಕ್ಯಾಂಡಲ್ ಲೈಟ್ ಮೆರವಣಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಎಲ್ಲ ಇಲಾಖೆಗಳ ಅಧಿಕಾರಿಗಳು ತಮ್ಮ ಸಿಬ್ಬಂದಿಯೊಂದಿಗೆ ತಪ್ಪದೇ ಹಾಜರಾಗಬೇಕು. ಮೆರವಣಿಗೆಯಲ್ಲಿ ಭಾಗವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಮೆರವಣಿಗೆ ನಂತರ ಅಶೋಕ ವೃತ್ತದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಮತದಾನದ ಮಹತ್ವದ ಬಗ್ಗೆ ಮಾಹಿತಿ ನೀಡುವುದರೊಂದಿಗೆ ಮತದಾನದ ಪ್ರತಿಜ್ಞಾ ವಿಧಿ ಸ್ವೀಕರಿಸಲಾಗುವುದು. ಮೆರವಣಿಗೆಯು ಶಿಸ್ತುಬದ್ಧವಾಗಿ ಹಾಗೂ ಅರ್ಥಪೂರ್ಣವಾಗಿ ನಡೆಯುವಂತೆ ಇಲಾಖಾ ಅಧಿಕಾರಿಗಳು ಜವಾಬ್ದಾರಿ ವಹಿಸಬೇಕು. ಮೆರವಣಿಗೆ ಸಂದರ್ಭದಲ್ಲಿ ತುರ್ತು ಪರಿಸ್ಥಿತಿ ನಿರ್ವಹಣೆಗಾಗಿ ಆರೋಗ್ಯ ಇಲಾಖೆಯಿಂದ ಒಂದು ಆ್ಯಂಬುಲೆನ್ಸ್‌ ಹಾಗೂ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಬೇಕು. ನಗರಸಭೆಯಿಂದ ಕುಡಿಯುವ ನೀರು ಒದಗಿಸಬೇಕು. ಮೆರವಣಿಗೆ ಮಾರ್ಗದಲ್ಲಿ ಮತದಾನದ ಜಾಗೃತಿ ಕುರಿತು ಅಲ್ಲಲ್ಲಿ ಜಾಗೃತಿ ಸ್ಟಿಕ್ಕರ್‌ಗಳನ್ನು ಅಳವಡಿಸಬೇಕು. ಎಲ್ಲ ಅಧಿಕಾರಿ, ಸಿಬ್ಬಂದಿ ನಿಗದಿತ ಸಮಯಕ್ಕೆ ಹಾಜರಾಗಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಪಂ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಸಹಾಯಕ ಕಾರ್ಯದರ್ಶಿ ಹಾಗೂ ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಶಿವಪ್ಪ ಸುಬೇದಾರ, ತಹಸೀಲ್ದಾರ ವಿಠ್ಠಲ್ ಚೌಗಲಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ತಿಪ್ಪಣ್ಣ ಶಿರಸಗಿ, ಡಿಡಿಪಿಐ ಶ್ರೀಶೈಲ ಬಿರಾದಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

PREV

Recommended Stories

ಶ್ರೀ ಶ್ರೀ ರವಿಶಂಕರ್‌ಗೆ ವರ್ಲ್ಡ್ ಲೀಡರ್ ಫಾರ್ ಪೀಸ್ ಆ್ಯಂಡ್‌ ಸೆಕ್ಯೂರಿಟಿ ಪ್ರಶಸ್ತಿ
ಹಾಡಹಗಲೇ ಮನೆಗೆ ನುಗ್ಗಿ ಚಹಾ ವ್ಯಾಪಾರಿಯ ಕತ್ತು ಕೊಯ್ದು ಹತ್ಯೆ