ಇಂದು ಬಾಲಕಿಯರ ರಾಷ್ಟ್ರ ಮಟ್ಟದ ಹಾಕಿ ಪಂದ್ಯಾವಳಿ ಸಮಾರೋಪ

KannadaprabhaNewsNetwork | Published : Jan 8, 2024 1:45 AM

ಸಾರಾಂಶ

17 ವರ್ಷ ವಯೋಮಿತಿಯ ಬಾಲಕಿಯರ ರಾಷ್ಟ್ರಮಟ್ಟದ ಹಾಕಿ ಪಂದ್ಯಾವಳಿಯ ಸಮಾರೋಪ ಸಮಾರಂಭವು ಸೋಮವಾರ ಮಧ್ಯಾಹ್ನ 2 ಗಂಟೆಗೆ ಪೊನ್ನಂಪೇಟೆ ಹಾಕಿ ಟರ್ಫ್ ಮೈದಾನದಲ್ಲಿ ನಡೆಯಲಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರ ಮಟ್ಟದ 17 ವರ್ಷ ವಯೋಮಿತಿಯ ಬಾಲಕಿಯರ ರಾಷ್ಟ್ರಮಟ್ಟದ ಹಾಕಿ ಪಂದ್ಯಾವಳಿಯ ಸಮಾರೋಪ ಸಮಾರಂಭವು ಸೋಮವಾರ ಮಧ್ಯಾಹ್ನ 2 ಗಂಟೆಗೆ ಪೊನ್ನಂಪೇಟೆ ಹಾಕಿ ಟರ್ಫ್ ಮೈದಾನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್. ಭೋಸರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವ ಎಸ್.ಮಧು ಬಂಗಾರಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ಸಚಿವ ಬಿ. ನಾಗೇಂದ್ರ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ. ಎಸ್. ಪೊನ್ನಣ್ಣ, ಸಂಸದ ಪ್ರತಾಪ್ ಸಿಂಹ, ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ವಿಧಾನ ಪರಿಷತ್‌ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಪೊನ್ನಂಪೇಟೆ ಗ್ರಾ.ಪಂ. ಅಧ್ಯಕ್ಷ ಎಚ್.ವಿ.ಗಿರಿಜಾ ಇತರರು ಪಾಲ್ಗೊಳ್ಳಲಿದ್ದಾರೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಕೊಡಗು ಜಿ.ಪಂ. ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತ ಬಿ.ಬಿ.ಕಾವೇರಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯದ ಆಯುಕ್ತರ ಕಚೇರಿಯ ನಿರ್ದೇಶಕರಾದ ಬಿ.ಎಸ್.ರಘುವೀರ್, ಜಂಟಿ ನಿರ್ದೇಶಕರಾದ(ದೈಹಿಕ ಶಿಕ್ಷಣ) ಎಸ್. ಎನ್. ರಮೇಶ್, ಮೈಸೂರು ವಿಭಾಗದ ಶಾಲಾ ಶಿಕ್ಷಣ ಇಲಾಖೆ ವಿಭಾಗೀಯ ಕಾರ್ಯದರ್ಶಿ ಹಾಗೂ ಸಹ ನಿರ್ದೇಶಕರಾದ ಪಾಂಡುರಂಗ, ಮೈಸೂರು ಸಿಟಿಇ ಪ್ರಾಂಶುಪಾಲರು ಹಾಗೂ ಸಹ ನಿರ್ದೇಶಕರಾದ ಗೀತಾಂಭ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎಂ.ಚಂದ್ರಕಾಂತ್, ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ.ಸದಾಶಿವಯ್ಯ ಎಸ್.ಪಲ್ಲೇದ್, ಇತರರು ಪಾಲ್ಗೊಳ್ಳಲಿದ್ದಾರೆ.

Share this article