ಇಂದು ಶಿವಕುಮಾರ ಸ್ವಾಮೀಜಿ ಪುಣ್ಯ ಸ್ಮರಣೆ

KannadaprabhaNewsNetwork |  
Published : Jan 21, 2025, 12:30 AM IST
ಇಂದು ಶಿವಕುಮಾರ ಸ್ವಾಮೀಜಿ ಪುಣ್ಯ ಸ್ಮರಣೆ | Kannada Prabha

ಸಾರಾಂಶ

ತುಮಕೂರು: ತುಮಕೂರಿನ ಸಿದ್ದಗಂಗಾ ಮಠದಲ್ಲಿ ಜನವರಿ 21ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ತ್ರಿವಿಧ ದಾಸೋಹಿ ಡಾ: ಶಿವಕುಮಾರ ಸ್ವಾಮೀಜಿಯವರ 6ನೇ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮವನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಉದ್ಘಾಟಿಸಲಿದ್ದಾರೆ.

ತುಮಕೂರು: ತುಮಕೂರಿನ ಸಿದ್ದಗಂಗಾ ಮಠದಲ್ಲಿ ಜನವರಿ 21ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ತ್ರಿವಿಧ ದಾಸೋಹಿ ಡಾ: ಶಿವಕುಮಾರ ಸ್ವಾಮೀಜಿಯವರ 6ನೇ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮವನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಉದ್ಘಾಟಿಸಲಿದ್ದಾರೆ.

ಮೇಘಾಲಯ ರಾಜ್ಯಪಾಲರಾದ ಸಿ.ಎಚ್. ವಿಜಯಶಂಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಸಿದ್ದಗಂಗಾ ಮಠದ ಅಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಹಾಗೂ ಉತ್ತಾಧಿಕಾರಿ ಶಿವ ಸಿದ್ಧೇಶ್ವರ ಸ್ವಾಮೀಜಿ, ಮೈಸೂರಿನ ಸುತ್ತೂರು ವೀರಸಿಂಹಾಸನ ಸಂಸ್ಥಾನ ಮಠದ ಅಧ್ಯಕ್ಷ ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ, ಶ್ರವಣಬೆಳಗೊಳ ಜೈನಮಠದ ಜಗದ್ಗುರು ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ, ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಜಾನಪದ ವಿದ್ವಾಂಸ ನಾಡೋಜ ಡಾ. ಗೊ.ರು.ಚನ್ನಬಸಪ್ಪ ಅವರಿಗೆ ಸಿದ್ಧಗಂಗಾಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮೈಸೂರಿನ ಸಾಹಿತಿ ಡಾ.ಎಚ್.ಟಿ. ಶೈಲಜಾ ಹಾಗೂ ತುಮಕೂರಿನ ಸಮಾಜ ಸೇವಕ ಜಿ.ಎನ್. ಬಸವರಾಜಪ್ಪ ಅವರಿಗೆ ಸಿದ್ಧಗಂಗಾ ಶಿವಕುಮಾರಶ್ರೀ ಪ್ರಶಸ್ತಿ, ಬೆಂಗಳೂರಿನ ಎಸ್. ಶಿವಾನಂದ ಶರ್ಮ, ಎಸ್.ಆರ್. ರೇಣುಕಾರಾಧ್ಯ, ವೆಂಕಟೇಶ ಗೌಡ, ಚಾಮರಾಜ ನಗರ ಜಿಲ್ಲೆ ಮುಳ್ಳೂರಿನ ಶಿವಕುಮಾರಮೂರ್ತಿ, ಚಿಕ್ಕಮಗಳೂರು ಜಿಲ್ಲೆ ಬಾಸೂರಿನ ಬಿ.ಎಂ. ಪರಮೇಶ್ವರಪ್ಪ(ಮರಣೋತ್ತರ) ಸಂಘಸಿರಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸಂಜೆ 6 ಗಂಟೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಶ್ರೀ ಸಿದ್ಧಗಂಗಾ ಮಠದ ಪ್ರಕಟಣೆ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುವಾದಕರು ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ:ಎಸ್.ಜಿ.ಎಸ್‌
9.5 ಲಕ್ಷ ಲಂಚ ಪಡೆದ ಕೇಂದ್ರ ವಿದ್ಯುತ್‌ಸಂಸ್ಥೆ ಜಂಟಿ ನಿರ್ದೇಶಕ ಸಿಬಿಐ ಬಲೆಗೆ