- ಜಯದೇವ ವೃತ್ತದ ಶಿವಯೋಗಿ ಮಂದಿರದಲ್ಲಿ ಕಾರ್ಯಕ್ರಮ ಆಯೋಜನೆ
- - - ಕನ್ನಡಪ್ರಭ ವಾರ್ತೆ ದಾವಣಗೆರೆ ಸಮಗ್ರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮೂರನೇ ವರ್ಷದ ಕನ್ನಡ ಹಬ್ಬ ಹಾಗೂ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಡಿ.21ರಂದು ಸಂಜೆ 5.30 ಗಂಟೆಗೆ ನಗರದ ಜಯದೇವ ವೃತ್ತದಲ್ಲಿರುವ ಶಿವಯೋಗಿ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಗ್ರ ಕರವೇ ಸಂಸ್ಥಾಪಕ ರಾಜಾಧ್ಯಕ್ಷ ವಿ.ಅವಿನಾಶ್ ಹೇಳಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ತಮ್ಮ ಅಧ್ಯಕ್ಷತೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಕಾರ್ಯಕ್ರಮ ಉದ್ಘಾಟಿಸುವರು. ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಕನ್ನಡಾಂಬೆ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವರು. ಚನ್ನಗಿರಿ ಶಾಸಕ ಬಸವರಾಜ ವಿ. ಶಿವಗಂಗಾ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಿದ್ದಾರೆ. ದಾವಣಗೆರೆ ವಿವಿ ಕುಲಪತಿ ಪ್ರೊ. ಬಿ.ಡಿ.ಕುಂಬಾರ್ ಕರವೇ ಪದಾಧಿಕಾರಿಗಳಿಗೆ ಗುರುತಿನ ಚೀಟಿ ವಿತರಣೆ ಮಾಡುವರು ಎಂದು ಹೇಳಿದರು.
ಸುದ್ದಿಗೋಷ್ಟಿಯಲ್ಲಿ ವೇದಿಕೆಯ ಮಾಲಾ ನಾಗರಾಜ್, ಡಿ.ಜೆ. ರಾಘವೇಂದ್ರ, ಜೆ.ಜಗದೀಶ್, ಭೋಜರಾಜ್, ಆನಂದ್, ರೆಹಮಾನ್ ಖಾನ್, ಫಯಾಜ್, ಸೈಯದ್ ಇಮ್ತಿಯಾಜ್ ಇತರರು ಇದ್ದರು.
ದಾವಣಗೆರೆಯಲ್ಲಿ ಸಮಗ್ರ ಕರ್ನಾಟಕ ರಕ್ಷಣಾ ವೇದಿಕೆಯಿಂದ ಕನ್ನಡ ಹಬ್ಬ, ಕನ್ನಡ ರಾಜ್ಯೋತ್ಸವ ಆಚರಿಸುವ ಕುರಿತು ವಿ.ಅವಿನಾಶ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.