ಪದ್ಯಾಣ ಗೋಪಾಲಕೃಷ್ಣ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆ ದಿನ

KannadaprabhaNewsNetwork |  
Published : Apr 05, 2025, 12:52 AM IST
೩೨ | Kannada Prabha

ಸಾರಾಂಶ

ದಕ್ಷಿಣ ಕನ್ನಡ, ಉಡುಪಿ,ಉತ್ತರ ಕನ್ನಡ,ಕೊಡಗು, ಚಿಕ್ಕಮಗಳೂರು ಹಾಗೂ ಕಾಸರಗೋಡು ಜಿಲ್ಲೆಯ ಕಾರ್ಯನಿರತ ಪತ್ರಕರ್ತರು ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರ ವಯಸ್ಸು 45 ಮೀರಿರಬಾರದು. ಗ್ರಾಮೀಣ ಮತ್ತು ಅಭಿವೃದ್ಧಿಪರ ವರದಿಗಳನ್ನು ಮಾತ್ರ ಪರಿಗಣಿಸಲಾಗುವುದು. ಪ್ರಶಸ್ತಿ 10,001 ರು. ನಗದು, ಪ್ರಶಸ್ತಿ ಫಲಕ ಹಾಗೂ ಸ್ಮರಣಿಕೆ ಒಳಗೊಂಡಿರುತ್ತದೆ.

ಮಂಗಳೂರು : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಗ್ರಾಮೀಣ ಯುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನೀಡಲಾಗುತ್ತಿರುವ ಪ್ರತಿಷ್ಠಿತ ಪ.ಗೋ. (ಪದ್ಯಾಣ ಗೋಪಾಲಕೃಷ್ಣ) ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ನಿಯಮಗಳು: ದಕ್ಷಿಣ ಕನ್ನಡ, ಉಡುಪಿ,ಉತ್ತರ ಕನ್ನಡ,ಕೊಡಗು, ಚಿಕ್ಕಮಗಳೂರು ಹಾಗೂ ಕಾಸರಗೋಡು ಜಿಲ್ಲೆಯ ಕಾರ್ಯನಿರತ ಪತ್ರಕರ್ತರು ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರ ವಯಸ್ಸು 45 ಮೀರಿರಬಾರದು. ಗ್ರಾಮೀಣ ಮತ್ತು ಅಭಿವೃದ್ಧಿಪರ ವರದಿಗಳನ್ನು ಮಾತ್ರ ಪರಿಗಣಿಸಲಾಗುವುದು. ಪ್ರಶಸ್ತಿ 10,001 ರು. ನಗದು, ಪ್ರಶಸ್ತಿ ಫಲಕ ಹಾಗೂ ಸ್ಮರಣಿಕೆ ಒಳಗೊಂಡಿರುತ್ತದೆ. 2024ನೇ ಸಾಲಿನ ಪ್ರಶಸ್ತಿಗೆ 2024ರ ಜನವರಿ 1ರಿಂದ ಡಿಸೆಂಬರ್ 31ರ ವರೆಗೆ ಕನ್ನಡ ಪತ್ರಿಕೆಗಳಲ್ಲಿ ಪ್ರಕಟಗೊಂಡಿರುವ ವರದಿಗಳಿಗೆ ಸೀಮಿತವಾಗಿರುತ್ತದೆ. ಒಬ್ಬರಿಗೆ ಎರಡು ವರದಿಗಳನ್ನು ಮಾತ್ರ ಕಳುಹಿಸಲು ಅವಕಾಶ ಇರುತ್ತದೆ.ಒಂದು ಬಾರಿ ಪ್ರಶಸ್ತಿ ಪಡೆದವರಿಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ. ಒಬ್ಬರಿಗೆ ಅತ್ಯುತ್ತಮ ಎರಡು ವರದಿಗಳನ್ನು ಪ್ರಶಸ್ತಿಗಾಗಿ ಕಳುಹಿಸಲು ಅವಕಾಶ ಇದೆ. ಪ್ರಶಸ್ತಿಗಾಗಿ ಅರ್ಜಿಸಲ್ಲಿಸುವವರು ವರದಿಯ ನಾಲ್ಕು ಪ್ರತಿಗಳನ್ನು(ಒಂದು ಮೂಲಪ್ರತಿ ಕಡ್ಡಾಯ) ಸಲ್ಲಿಸಬೇಕು. ವರದಿಯಲ್ಲಿ ವರದಿಗಾರರ ಬೈಲೈನ್ ಪ್ರಕಟಗೊಂಡಿರಬೇಕು.ಅರ್ಜಿಯೊಂದಿಗೆ ಭಾವಚಿತ್ರವಿರುವ ಸ್ವವಿವರವನ್ನು ಸಲ್ಲಿಸಬೇಕು. ಅರ್ಜಿಗಳನ್ನು ಕಳುಹಿಸಲು 2025 ಏ.5 ಕೊನೆಯ ದಿನ.ಅರ್ಜಿ ಸಲ್ಲಿಸಬೇಕಾದ ವಿಳಾಸ: ಪ್ರಧಾನ ಕಾರ್ಯದರ್ಶಿ , ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಪತ್ರಿಕಾ ಭವನ, ಉರ್ವ ಮಾರ್ಕೆಟ್ ರಸ್ತೆ ,ಮಂಗಳೂರು -6 ಎಂದು ಪ್ರಕಟಣೆ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''