ಕನ್ನಡಪ್ರಭ ವಾರ್ತೆ ಮಂಡ್ಯ
ಮದ್ದೂರು ತಾಲೂಕು ಭಾರತೀನಗರದಲ್ಲಿ ಸೆ.13ರಂದು ಸ್ಫೂರ್ತಿ ಪತ್ತಿನ ಸಹಕಾರ ಸಂಘದ ಬೆಳ್ಳಿಹಬ್ಬದ ಸಂಭ್ರಮ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಸಂಘದ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಅಧ್ಯಕ್ಷ ಕೆ.ಎಲ್. ಶಿವರಾಮು ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದು ಬೆಳಗ್ಗೆ 8.30ಕ್ಕೆ ನಡೆಯುವ ಆರೋಗ್ಯ ಶಿಬಿರವನ್ನು ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷ ಜಿ.ಡಿ.ಹರೀಶ್‌ಗೌಡ ಉದ್ಘಾಟಿಸುವರು. ಆದಿಚುಂಚನಗಿರಿ ಶಾಖಾ ಮಠದ ಶ್ರೀಪುರುಷೋತ್ತಮಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ತಾವು ಅಧ್ಯಕ್ಷತೆ ವಹಿಸುವುದಾಗಿ ಹೇಳಿದರು.
ಮನ್ಮುಲ್ ಅಧ್ಯಕ್ಷ ಯು.ಸಿ.ಶಿವಕುಮಾರ್, ನಿರ್ದೇಶಕರಾದ ಎಸ್.ಪಿ.ಸ್ವಾಮಿ, ಬಿ.ಆರ್.ರಾಮಚಂದ್ರ, ಹರೀಶ್‌ಬಾಬು, ಒಕ್ಕಲಿಗರ ಸಂಘದ ನಿರ್ದೇಶಕ ಅಶೋಕ್ ಜಯರಾಂ ಇತರರು ಭಾಗವಹಿಸುವರು ಎಂದರು.ಬೆಳಗ್ಗೆ 11.30ಕ್ಕೆ ಬೆಳ್ಳಿಹಬ್ಬದ ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ವಿಶ್ವಒಕ್ಕಲಿಗರ ಮಹಾ ಸಂಸ್ಥಾನ ಮಠದ ಶ್ರೀನಿಶ್ಚಲಾನಂದನಾಥ ಸ್ವಾಮೀಜಿ ವಹಿಸಲಿದ್ದಾರೆ. ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಸಭಾಂಗಣ ಉದ್ಘಾಟಿಸುವರು. ಶಾಸಕ ಕೆ.ಎಂ.ಉದಯ್ ಸಮಾರಂಭ ಉದ್ಘಾಟಿಸುವರು. ಸಹಕಾರ ಮಹಾ ಮಂಡಲದ ಅಧ್ಯಕ್ಷ ಜಿ.ಟಿ.ದೇವೇಗೌಡ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ಶಾಸಕ ದಿನೇಶ್ ಗೂಳಿಗೌಡ ಮರಣ ಪರಿಹಾರ ವಿತರಿಸುವುದು ಎಂದರು.
ಶಾಸಕ ಕೆ.ವಿವೇಕಾನಂದ, ಚಾಂಷುಗರ್ ವ್ಯವಸ್ಥಾಪಕ ನಿರ್ದೇಶಕ ಎಂ.ಶ್ರೀನಿವಾಸನ್, ಕರಾಪಸಂ ಮಹಾಮಂಡಳದ ಅಧ್ಯಕ್ಷ ಎಸ್. ಚಂದ್ರಶೇಖರ್ ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಅಮರಾವತಿ ಅಶ್ವಥ್ ಅತಿಥಿಗಳಾಗಿ ಭಾಗವಹಿಸುವರು ಎಂದರು.ಮಧ್ಯಾಹ್ನ 3 ಗಂಟೆಗೆ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಉಪಸ್ಥಿತಿಯಲ್ಲಿ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಸಮಾರೋಪ ಭಾಷಣ ಮಾಡುವರು. ಶಾಸಕ ಮಧು ಜಿ. ಮಾದೇಗೌಡರು ಸದಸ್ಯರಿಗೆ ಸಾಲದ ಚೆಕ್ ವಿತರಣೆ ಮಾಡುವರು. ಬೆಂಗಳೂರು ಗ್ರಾಮಾಂತರ ಜಿಲ್ಲಾಕಾರಿ ಎ.ಬಿ.ಬಸವರಾಜು, ಮಾಜಿ ಶಾಸಕರಾದ ಮರಿತಿಬ್ಬೇಗೌಡ, ಬಿ.ರಾಮಕೃಷ್ಣ, ಕೆ.ಟಿ. ಶ್ರೀಕಂಠೇಗೌಡ, ಕಲ್ಪನಾ ಸಿದ್ದರಾಜು, ಡಾ. ಮಹೇಶ್‌ಚಂದ್ ಇತರರು ಸಮಾರಂಭದಲ್ಲಿ ಭಾಗವಹಿಸುವರು ಎಂದರು.
ನಮ್ಮ ಸಂಘ 25 ವರ್ಷ ಪೂರೈಸಿ ಬೆಳ್ಳಿ ಹಬ್ಬ ಆಚರಿಸುತ್ತಿದೆ. ಕೇವಲ 100 ಮಂದಿ ಸದಸ್ಯರಿಂದ ಆರಂಭವಾದ ಸಂಘ ಇಂದು 5 ಸಾವಿರಕ್ಕೂ ಹೆಚ್ಚು ಮಂದಿ ಸದಸ್ಯರಿದ್ದಾರೆ. ಈ ಬಾರಿ ಸಂಘವು 11 ಲಕ್ಷ ರು. ಲಾಭ ಗಳಿಸಿದೆ. ಸಮಾರಂಭದ ಅಂಗವಾಗಿ ಸದಸ್ಯರಿಗೆ ಶೇ. 10ರಷ್ಟು ಡಿವಿಡೆಂಡ್ ನೀಡಲಾಗುವುದು ಎಂದರು.ಸುದ್ದಿಗೋಷ್ಠಿಯಲ್ಲಿ ಸ್ಮರಣ ಸಂಚಿಕೆ ಸಂಪಾದಕ ಪ್ರೊ.ಬೋರೇಗೌಡ, ಸಂಘದ ನಿರ್ದೇಶಕರಾದ ವಿನಯ್‌ಕುಮಾರ್, ರಮೇಶ್, ರವೀಂದ್ರ, ಮನೋಹರ್, ರಘು, ಶಿವು ಇತರರು ಇದ್ದರು.