ಇಂದು ವೆಂಕಟೇಶ್ವರ ಜಾತ್ರಾ ಮಹೋತ್ಸವ

KannadaprabhaNewsNetwork |  
Published : Dec 06, 2024, 08:57 AM IST

ಸಾರಾಂಶ

ದೇವರಹಿಪ್ಪರಗಿ ತಾಲೂಕಿನ ಮಣೂರ ಗ್ರಾಮದ ಹತ್ತಿರ ಇರುವ ಶ್ರೀ ವೆಂಕಟೇಶ್ವರ ದೇವಾಲಯದ ನೂತನ ಕಟ್ಟಡ ಉದ್ಘಾಟನೆ ನೆರವೇರಿಸಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆ ಪೂರ್ಣಗೊಂಡಿದೆ. ಡಿ.6 ರಂದು ಬೆಳಗ್ಗೆ ೧೦ ಗಂಟೆಗೆ ಜಾತ್ರಾ ಮಹೋತ್ಸವದ ಪ್ರಯುಕ್ತ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿದೆ ಎಂದು ವೆಂಕಟೇಶ್ವರ ದೇವಾಸ್ಥಾನದ ಸೇವಾ ಸಮಿತಿಯ ಅಧ್ಯಕ್ಷ ಎಲ್.ಆರ್.ಅಂಗಡಿ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ

ತಾಲೂಕಿನ ಮಣೂರ ಗ್ರಾಮದ ಹತ್ತಿರ ಇರುವ ಶ್ರೀ ವೆಂಕಟೇಶ್ವರ ದೇವಾಲಯದ ನೂತನ ಕಟ್ಟಡ ಉದ್ಘಾಟನೆ ನೆರವೇರಿಸಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆ ಪೂರ್ಣಗೊಂಡಿದೆ. ಡಿ.6 ರಂದು ಬೆಳಗ್ಗೆ ೧೦ ಗಂಟೆಗೆ ಜಾತ್ರಾ ಮಹೋತ್ಸವದ ಪ್ರಯುಕ್ತ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿದೆ ಎಂದು ವೆಂಕಟೇಶ್ವರ ದೇವಾಸ್ಥಾನದ ಸೇವಾ ಸಮಿತಿಯ ಅಧ್ಯಕ್ಷ ಎಲ್.ಆರ್.ಅಂಗಡಿ ತಿಳಿಸಿದ್ದಾರೆ.

ಕಾರ್ಯಕ್ರಮದ ಸಾನ್ನಿಧ್ಯವನ್ನು ಸ್ಥಳೀಯ ಹಿರೇಮಠದ ಮರುಳಾರಾಧ್ಯ ಶಿವಾಚಾರ್ಯರು ವಹಿಸಲಿದ್ದಾರೆ. ಸಾನ್ನಿಧ್ಯವನ್ನು ತಿಂಥಣಿಯ ವೀರಗೋಟದ ಅಡವಿಲಿಂಗ ಮಹಾರಾಜರರು, ಬಾಲಗಾವಿ ಗುರುದೇವ ಆಶ್ರಮದ ಅಮೃತಾನಂದ ಮಹಾಸ್ವಾಮಿಗಳು ಹಾಗೂ ತಳೆವಾಡದ ಅಭಿನವ ಸಿದ್ದರತ್ನ ಮದಗೊಂಡೇಶ್ವರ ಮಹಾರಾಜರು ವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಣೂರ ಗ್ರಾಮದ ವೆಂಕಟೇಶ್ವರ ದೇವಸ್ಥಾನ ಸೇವಾ ಸಮಿತಿಯ ಅಧ್ಯಕ್ಷ ಎಲ್.ಆರ್.ಅಂಗಡಿ ವಹಿಸಲಿದೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವಿಜಯಪುರ ಲೋಕಸಭಾ ಸದಸ್ಯರು ಹಾಗೂ ಮಾಜಿ ಕೇಂದ್ರ ಸಚಿವರಾದ ರಮೇಶ ಜಿಗಜಿಣಗಿ, ಸ್ಥಳೀಯ ಶಾಸಕರಾದ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ, ಜಿಲ್ಲಾಧಿಕಾರಿ ಟಿ. ಭೂಬಾಲನ, ಸಿಇಒ ರಿಷಿ ಆನಂದ, ಎಸ್ಪಿ ಲಕ್ಷ್ಮಣ್ಣ ನಿಂಬಾಳ್ಕರ್, ಗ್ರಾಪಂ ಅಧ್ಯಕ್ಷರು ವಹಿಸುವರು. ಅದ್ಧೂರಿ ಜಾತ್ರಾ ಮಹೋತ್ಸವದಲ್ಲಿ ಸುತ್ತ-ಮುತ್ತಲಿನ ಗ್ರಾಮದ ಭಕ್ತಾದಿಗಳು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಕೋರಿದರು.ಇದೇ ಸಂದರ್ಭದಲ್ಲಿ ಮುಖಂಡರಾದ ಎಸ್.ಎನ್.ಬಸವರಡ್ಡಿ, ಪಿ.ಕೆ.ನಾಯಕ ಹಾಗೂ ಸೇವಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯ ರಾಜಕಾರಣಕ್ಕೆ ಎಚ್‌ಡಿಕೆ ಪರೋಕ್ಷ ಇಂಗಿತ
ಜೈಲಿನ ಬ್ಯಾರಕ್‌ಗಳಿಗೆ ಸಿಸಿಟಿವಿ ಕ್ಯಾಮೆರಾ!