ಹುಬ್ಬಳ್ಳಿ:
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಏ. 17ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಡಿಸಿದ ಮಹಿಳಾ ಮೀಸಲಾತಿ ಮಸೂದೆಯನ್ನು ಕಾಂಗ್ರೆಸ್ ಹಾಗೂ ಅವರ ಮಿತ್ರಪಕ್ಷಗಳು ವಿರೋಧಿಸಿದ ಹಿನ್ನೆಲೆಯಲ್ಲಿ ಮಸೂದೆ ಜಾರಿಯಾಗುವಲ್ಲಿ ವಿಫಲವಾಯಿತು. ಕಾಂಗ್ರೆಸ್ ಮಹಿಳಾ ವಿರೋಧಿ ನೀತಿ ಅನುಸರಿಸುತ್ತಿರುವ ಪಕ್ಷವಾಗಿದೆ. ಅವರಿಗೆ ಮಹಿಳೆಯರಿಗೆ ಸಮಾನ ಹಕ್ಕು ದೊರೆಯುವುದು ಬೇಡವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಹಿಂದೆಯೇ ಪ್ರಧಾನ ಮಂತ್ರಿಗಳು ಮಹಿಳಾ ಮೀಸಲಾತಿ ಮಸೂದೆ ಜಾರಿಗೊಳಿಸುತ್ತಿರುವ ವಿಷಯ ತಿಳಿದು ಅವರಿಗೆ ಬೆಂಬಲ, ಶಕ್ತಿ ನೀಡುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದಿಂದ ಹಲವು ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಪ್ರಧಾನಿಗಳಿಗೆ ಬೆಂಬಲ ವ್ಯಕ್ತಪಡಿಸಲಾಗಿತ್ತು. ಜತೆಗೆ 1 ಲಕ್ಷಕ್ಕೂ ಅಧಿಕ ಸಹಿ ಸಂಗ್ರಹ, 5 ಲಕ್ಷಕ್ಕೂ ಅಧಿಕ ಮಿಸ್ಕ್‌ಕಾಲ್ಡ್ ಅಭಿಯಾನ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು ಎಂದರು.ಮಹಿಳಾ ಮೀಸಲಾತಿ ಜಾರಿಗೆ ರಾಜ್ಯದ ಮಹಿಳೆಯರೆಲ್ಲ ಮೆಚ್ಚುಗೆ ವ್ಯಕ್ತಪಡಿಸಿ ರಾಜಕೀಯ ರಂಗದಲ್ಲಿ ಪುರುಷರಷ್ಟೆ ನಮಗೂ ಸ್ಥಾನಮಾನ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಆದರೆ, ಕಾಂಗ್ರೆಸ್ ಹಾಗೂ ಅವರ ಮಿತ್ರಪಕ್ಷಗಳು ಇದನ್ನು ವಿರೋಧಿಸುವ ಮೂಲಕ ಮಹಿಳಾ ಕುಲಕ್ಕೆ ಅವಮಾನ ಮಾಡಿದೆ. ಕಾಂಗ್ರೆಸ್‌ನ ಈ ನಡೆ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಮಹಿಳಾ ಮೋರ್ಚಾದಿಂದ ಹಲವು ರೀತಿಯ ಪ್ರತಿಭಟನೆ ಹಮ್ಮಿಕೊಳ್ಳುವುದರ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಈ ಜನಾಕ್ರೋಶ ಪಾದಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಶೋಭಾ ಕರಂದ್ಲಾಜೆ, ಸಂಸದ ಬಸವರಾಜ ಬೊಮ್ಮಾಯಿ, ವಿಧಾನಸಭೆ ಪ್ರತಿಪಕ್ಷದ ನಾಯಕ ಅರವಿಂದ ಬೆಲ್ಲದ, ಶಾಸಕ ಸಿ.ಸಿ. ಪಾಟೀಲ, ಮಾಜಿ ಸಚಿವ ಶಶಿಕಲಾ ಜೊಲ್ಲೆ, ಮಾಜಿ ಶಾಸಕಿ ರೂಪಾಲಿ ನಾಯಕ, ಮಾಳವಿಕಾ, ಸ್ಥಳೀಯ ಶಾಸಕರಾದ ಮಹೇಶ ಟೆಂಗಿನಕಾಯಿ, ಎಂ.ಆರ್. ಪಾಟೀಲ ಸೇರಿದಂತೆ ಮಾಜಿ ಶಾಸಕರು, ವಿಪ ಸದಸ್ಯರು, ಪಾಲಿಕೆ ಸದಸ್ಯರು, ಬಿಜೆಪಿ ಮುಖಂಡರು, ಮಹಿಳಾ ಪ್ರಮುಖ ಪದಾಧಿಕಾರಿಗಳು, ಮಹಿಳಾ ಕಾರ್ಯಕರ್ತರು, ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದರು.