ಈಗಿನ ಮಕ್ಕಳೇ ಭಾರತದ ಭವಿಷ್ಯವನ್ನು ರೂಪಿಸುವ ಕೀಲಿ ಕೈ: ಮಹಾಂತೇಶ ಪಿ. ಅಂಗಡಿ

KannadaprabhaNewsNetwork |  
Published : Nov 16, 2025, 03:00 AM IST
ಕಮತಗಿ ಪಟ್ಟಣದಲ್ಲಿನ ಶ್ರೀನಿವಾಸ ಶಿಕ್ಷಣ ಸಂಸ್ಥೆಯ ವಿಶ್ವಚೇತನ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಮತ್ತು ತಾಲೂಕಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕತರಿಗೆ ಸಂಸ್ಥೆವತಿಯಿಂದ ಸನ್ಮಾನಿಸಿ ಗೌರವಿಸಿದರು. | Kannada Prabha

ಸಾರಾಂಶ

ಇಂದಿನ ಮಕ್ಕಳೇ ನಾಳಿನ ಭಾರತದ ಭವಿಷ್ಯವನ್ನು ರೂಪಿಸುವ ಕೀಲಿ ಕೈಗಳಾಗಿದ್ದು, ನಾವು ಅವರನ್ನು ಹೇಗೆ ಬೆಳೆಸುತ್ತೇವೆಯೋ ಅದು ದೇಶದ ಭವಿಷ್ಯ ನಿರ್ಧರಿಸುತ್ತದೆ. ಆದ್ದರಿಂದ ಮಕ್ಕಳ ದಿನಾಚರಣೆ ಕೇವಲ ಒಂದು ಆಚರಣೆಯಲ್ಲ, ಅದು ಪ್ರತಿ ಮಗುವಿನ ಕನಸುಗಳು ಮತ್ತು ಘನತೆ ರಕ್ಷಿಸುವ ಒಂದು ವೇದಿಕೆಯಾಗಿದೆ ಎಂದು ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಶ್ರೀನಿವಾಸ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಮಹಾಂತೇಶ ಪಿ. ಅಂಗಡಿ ಹೇಳಿದರು.

ಕನ್ನಡಪ್ರಭ ವಾರ್ತೆ ಕಮತಗಿ

ಇಂದಿನ ಮಕ್ಕಳೇ ನಾಳಿನ ಭಾರತದ ಭವಿಷ್ಯವನ್ನು ರೂಪಿಸುವ ಕೀಲಿ ಕೈಗಳಾಗಿದ್ದು, ನಾವು ಅವರನ್ನು ಹೇಗೆ ಬೆಳೆಸುತ್ತೇವೆಯೋ ಅದು ದೇಶದ ಭವಿಷ್ಯ ನಿರ್ಧರಿಸುತ್ತದೆ. ಆದ್ದರಿಂದ ಮಕ್ಕಳ ದಿನಾಚರಣೆ ಕೇವಲ ಒಂದು ಆಚರಣೆಯಲ್ಲ, ಅದು ಪ್ರತಿ ಮಗುವಿನ ಕನಸುಗಳು ಮತ್ತು ಘನತೆ ರಕ್ಷಿಸುವ ಒಂದು ವೇದಿಕೆಯಾಗಿದೆ ಎಂದು ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಶ್ರೀನಿವಾಸ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಮಹಾಂತೇಶ ಪಿ. ಅಂಗಡಿ ಹೇಳಿದರು.

ಪಟ್ಟಣದಲ್ಲಿನ ಶ್ರೀನಿವಾಸ ಶಿಕ್ಷಣ ಸಂಸ್ಥೆಯ ವಿಶ್ವಚೇತನ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮಕ್ಕಳ ದಿನಾಚರಣೆ ಹಾಗೂ ಜಿಲ್ಲಾ ಮತ್ತು ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕತರಿಗೆ ಸನ್ಮಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಮಾಜಿ ಪ್ರಧಾನಿ ದಿ.ಜವಾಹರಲಾಲ್ ನೆಹರು ಅವರು ಮಕ್ಕಳೊಂದಿಗೆ ಬಹಳ ಆತ್ಮೀಯ ಸಂಬಂಧ ಹೊಂದಿದ್ದರು. ಅವರು ಶಾಲೆಗಳು ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಮಕ್ಕಳೊಂದಿಗೆ ಬೆರೆಯುತ್ತಿದ್ದರು, ಹೀಗಾಗಿ ತಮ್ಮ ಜನ್ಮದಿನವನ್ನು ಮಕ್ಕಳ ದಿನಾಚರಣೆಯನ್ನಾಗಿ ಆಚರಣೆ ಮಾಡಬೇಕು ಎಂದು ಹೇಳಿದ್ದರು,ಮಕ್ಕಳಿಗೆ ಪಾಠ ಬೋಧನೆ ಜೊತೆಗೆ ಅವರ ಹಕ್ಕುಗಳ ಬಗ್ಗೆ ಅವರ ಸುರಕ್ಷತೆಯ ಬಗ್ಗೆ ಮತ್ತು ಉಜ್ವಲ ಭವಿಷ್ಯಕ್ಕಾಗಿ ನಾವು ಏನು ಮಾಡಬೇಕು ಎಂಬುದನ್ನು ಮಕ್ಕಳ ದಿನಾಚರಣೆಯ ಕಾರ್ಯಕ್ರಮ ನಮಗೆ ನೆನಪಿಸುತ್ತದೆ. ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಅವರಲ್ಲಿ ಅಡಗಿರುವ ಪ್ರತಿಭೆ ಹೊರಹೊಮ್ಮಿಸಲು ಸದಾ ಮುಖ್ಯವೇದಿಕೆ ಕಲ್ಪಿಸಿಕೊಡುತ್ತದೆ. ಪಾಲಕರು ಮಕ್ಕಳ ಶಿಕ್ಷಣದ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂದು ತಿಳಿಸಿದರು.

ಸಂಸ್ಥೆಯ ಅಧ್ಯಕ್ಷ ನಾರಾಯಣ ದೇಶಪಾಂಡೆ, ಉಪಾಧ್ಯಕ್ಷ ಪಿ.ಬಿ. ಬ್ಯಾಳಿ, ಆಢಳಿತಾಧಿಕಾರಿ ದಾನೇಶ್ವರಿ ಎಂ.ಅಂಗಡಿ, ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕತರಾದ ಉಮ್ಮಣ್ಣಪ್ಪ ಯರಗಲ್, ಅಶೋಕ ಚಿತ್ರಗಾರ, ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕತರಾದ ಹುಚ್ಚಮ್ಮ ಹಡಪದ, ಸುನೀಲ ಮಾರಬಸರಿ, ಉಮಾ ಲೆಕ್ಕದ, ಆಡಳಿತ ಮಂಡಳಿಯ ಸದಸ್ಯರು, ಶಾಲೆಯ ಮುಖ್ಯ ಶಿಕ್ಷಕ ರಾಮು ಕುಣಬೆಂಚಿ ಹಾಗೂ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸನ್ಮಾನ : ಸಂಸ್ಥೆ ವತಿಯಿಂದ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕತರಾದ ಉಮ್ಮಣ್ಣಪ್ಪ ಯರಗಲ್, ಅಶೋಕ ಚಿತ್ರಗಾರ, ತಾಲೂಕಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕತರಾದ ಹುಚ್ಚಮ್ಮ ಹಡಪದ, ಸುನೀಲ ಮಾರಬಸರಿ ಅವರನ್ನು ಸನ್ಮಾನಿಸಿ ಗೌರವಿಸಿದರು

PREV

Recommended Stories

ಸೆಸ್ಕ್ ಅಭಿಯಂತರಗೆ ಸನ್ಮಾನ ಕಾರ್ಯಕ್ರಮ
ಕಟೀಲು ಏಳು ಮೇಳಗಳ ದೇವರು, ಪರಿಕರಗಳ ಮೆರವಣಿಗೆ