ಇಂದು ಎಸ್ಸೆಸ್ಸೆಲ್ಸಿ (40+) ಪರೀಕ್ಷಾ ಸಿದ್ಧತಾ ಕಾರ್ಯಾಗಾರ

KannadaprabhaNewsNetwork |  
Published : Dec 29, 2025, 03:00 AM IST
ಪೋಟೊ28ಕೆಎಸಟಿ1: ಕನ್ನಡಪ್ರಭ ಏಷ್ಯಾನೆಟ್ ಸುವರ್ಣ ನ್ಯೂಸ್ ವತಿಯಿಂದ ಕುಷ್ಟಗಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದ ಮಾಹಿತಿ | Kannada Prabha

ಸಾರಾಂಶ

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಆಂಗ್ಲ ಮತ್ತು ಗಣಿತ ಉಪನ್ಯಾಸಕ ಬಿ. ಪುರುಷೋತ್ತಮ, ವಿಜ್ಞಾನ ಶಿಕ್ಷಕ ಸಿದ್ಧಲಿಂಗೇಶ, ಕನ್ನಡ ಶಿಕ್ಷಕ ಪಿ. ಹರಿಪ್ರಸಾದ ಸೇರಿದಂತೆ ಅನೇಕರು ವಿಶೇಷ ಉಪನ್ಯಾಸ

ಕುಷ್ಟಗಿ: ಕಳೆದ ವರ್ಷದಂತೆ ಈ ವರ್ಷವೂ ಕನ್ನಡಪ್ರಭ, ಏಷ್ಯಾನೆಟ್ ಸುವರ್ಣ ನ್ಯೂಸ್, ಶಾಲಾ ಶಿಕ್ಷಣ ಇಲಾಖೆ, ಶ್ರೀವಿಜಯ ಚಂದ್ರಶೇಖರ ಶೈಕ್ಷಣಿಕ ಮತ್ತು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಹಾಗೂ ಬಳ್ಳಾರಿ ಸನ್ಮಾರ್ಗ ಗೆಳೆಯರ ಬಳಗದ ಸಹಯೋಗದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ತಾಲೂಕಿನ ಸರ್ಕಾರಿ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ (40+) ಪರೀಕ್ಷಾ ಸಿದ್ಧತಾ ಕಾರ್ಯಾಗಾರ, ವಿದ್ಯಾರ್ಥಿಗಳಿಗೆ ತಜ್ಞರಿಂದ ವಿಶೇಷ ಶಿಬಿರ ಡಿ. 29 ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ.

ಶಾಸಕ ದೊಡ್ಡನಗೌಡ ಪಾಟೀಲ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶ್ರೀವಿಜಯ ಚಂದ್ರಶೇಖರ ಶೈಕ್ಷಣಿಕ ಮತ್ತು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಸಿ.ವಿ. ಚಂದ್ರಶೇಖರ ಕಾರ್ಯಾಗಾರ ಉದ್ಘಾಟಿಸಲಿದ್ದಾರೆ, ಬಿಇಒ ಉಮಾದೇವಿ ಬಸಾಪುರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಸಮಾರೋಪ ಸಮಾರಂಭದ ದಿಕ್ಸೂಚಿ ಭಾಷಣವನ್ನು ಮಾಜಿ ಸಚಿವ ಅಮರೇಗೌಡ ಬಯ್ಯಾಪುರ ಮಾಡಲಿದ್ದಾರೆ.

ಕನ್ನಡಪ್ರಭ ಹುಬ್ಬಳ್ಳಿ ಆವೃತ್ತಿಯ ಸ್ಥಾನಿಕ ಸಂಪಾದಕ ಮಲ್ಲಿಕಾರ್ಜುನ ಸಿದ್ದಣ್ಣವರ, ಕುಷ್ಟಗಿ ತಾಲೂಕು ಕ್ಷೇತ್ರ ಸಮನ್ವಯ ಅಧಿಕಾರಿ ಜಗದೀಶಪ್ಪ ಎಂ.ಎಸ್.ವಿ.ಸಿ. ಶಿಕ್ಷಣ ಸಂಸ್ಥೆಯ ಸಿಇಒ ಜಗದೀಶ ಅಂಗಡಿ, ಕನ್ನಡಪ್ರಭ ಹಿರಿಯ ವಿಶೇಷ ವರದಿಗಾರ ಸೋಮರಡ್ಡಿ ಅಳವಂಡಿ, ಕೊಪ್ಪಳ ಗ್ರಾಮೀಣ ಠಾಣೆಯ ಸಿಪಿಐ ಸುರೇಶ ಡಿ. ಸನ್ಮಾರ್ಗ ಗೆಳೆಯರ ಬಳಗದ ಕಾರ್ಯದರ್ಶಿ ಬಿ .ಚಂದ್ರಶೇಖರ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಈ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಆಂಗ್ಲ ಮತ್ತು ಗಣಿತ ಉಪನ್ಯಾಸಕ ಬಿ. ಪುರುಷೋತ್ತಮ, ವಿಜ್ಞಾನ ಶಿಕ್ಷಕ ಸಿದ್ಧಲಿಂಗೇಶ, ಕನ್ನಡ ಶಿಕ್ಷಕ ಪಿ. ಹರಿಪ್ರಸಾದ ಸೇರಿದಂತೆ ಅನೇಕರು ವಿಶೇಷ ಉಪನ್ಯಾಸ ನೀಡಲಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪುಸ್ತಕ ಸಂಸ್ಕೃತಿ ಸಂವೇದನೆಗೆ ಸಂಬಂಧಿಸಿದ್ದು: ಬರಗೂರು
ಜಿಬಿಎ ಚುನಾವಣೆಗೆ ಕಾಂಗ್ರೆಸ್‌ ಅರ್ಜಿಗೆ ₹50 ಸಾವಿರ!