ಭದ್ರಾವತಿ: ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಘಟಕದಿಂದ ಜ.೯ರ ಗುರುವಾರ ನಗರದ ಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ ಶಾಲೆ ಆವರಣದಲ್ಲಿ ತಾಲೂಕು 11ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆ ಅಧ್ಯಕ್ಷೆ ಎಂ.ಎಸ್.ಸುಧಾಮಣಿ ತಿಳಿಸಿದರು.
ಭದ್ರಾವತಿ: ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಘಟಕದಿಂದ ಜ.೯ರ ಗುರುವಾರ ನಗರದ ಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ ಶಾಲೆ ಆವರಣದಲ್ಲಿ ತಾಲೂಕು 11ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆ ಅಧ್ಯಕ್ಷೆ ಎಂ.ಎಸ್.ಸುಧಾಮಣಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬೆಳಿಗ್ಗೆ ೯.೩೦ಕ್ಕೆ ವಿದ್ಯಾಸಂಸ್ಥೆ ಆಡಳಿತಾಧಿಕಾರಿ ಬಿ.ಜಗದೀಶ್ ರಾಷ್ಟ್ರ ಧ್ವಜಾರೋಹಣ ಹಾಗೂ ಪೇಪರ್‌ಟೌನ್ ಪೊಲೀಸ್ ಠಾಣೆ ಉಪ ನಿರೀಕ್ಷಕಿ ಕವಿತ ನಾಡ ಧ್ವಜಾರೋಹಣ ಮತ್ತು ವೇದಿಕೆ ಅಧ್ಯಕ್ಷೆ ಎಂ.ಎಸ್.ಸುಧಾಮಣಿ ಕನ್ನಡ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದರು. ವಿದ್ಯಾಸಂಸ್ಥೆಯ ೮ನೇ ತರಗತಿ ವಿದ್ಯಾರ್ಥಿ ಮನೀಷ್.ಪಿ ಯಾದವ್ ೧೦ ಗಂಟೆಗೆ ಸಮ್ಮೇಳನ ಉದ್ಘಾಟಿಸಲಿದ್ದು, ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ನಗರದ ಪೂರ್ಣಪ್ರಜ್ಞ ವಿದ್ಯಾಸಂಸ್ಥೆ ೯ನೇ ತರಗತಿ ವಿದ್ಯಾರ್ಥಿನಿ ಲಿಖಿತ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದು, ಶಾಸಕ ಬಿ.ಕೆ.ಸಂಗಮೇಶ್ವರ್, ಕಸಾಪ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್, ವಿದ್ಯಾಸಂಸ್ಥೆ ಪ್ರಾಂಶುಪಾಲರಾದ ಡಾ.ಹರಿಣಾಕ್ಷಿ, ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ.ಚನ್ನಪ್ಪನವರ್, ಜಾನಪದ ಪರಿಷತ್ ತಾಲೂಕು ಅಧ್ಯಕ್ಷ ಎಂ.ಆರ್.ರೇವಣಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು. ಬೆಳಿಗ್ಗೆ ೧೧.೩೦ರಿಂದ ೧೨.೧೫ರವರೆಗೆ ಗೋಷ್ಠಿ-೧, ಕವಿಗೋಷ್ಠಿ, ಮಧ್ಯಾಹ್ನ ೧೨.೧೫ರಿಂದ ೧ ಗಂಟೆವರೆಗೆ ಗೋಷ್ಠಿ-೨, ಕವಿಗೋಷ್ಠಿ ಹಾಗೂ ಮಧ್ಯಾಹ್ನ ೨ ಗಂಟೆಯಿಂದ ಗೋಷ್ಠಿ-೩, ಪ್ರಚಲಿತ ವಿದ್ಯಾಮಾನಗಳು ನಡೆಯಲಿವೆ. ಸಂಜೆ ೪ ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ನಗರಸಭೆ ಅಧ್ಯಕ್ಷ ಎಂ.ಮಣಿ ಎಎನ್‌ಎಸ್, ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ಎಂ.ವಿ.ಪಂಚಾಕ್ಷರಿ, ಶಿಕ್ಷಣ ಸಂಯೋಜಕ ದಯಾನಂದ್, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬದರಿನಾರಾಯಣ ಶ್ರೇಷ್ಠಿ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ಸಮ್ಮೇಳನ ಯಶಸ್ವಿಗೊಳಿಸುವಂತೆ ಕೋರಿದರು. ಪತ್ರಿಕಾಗೋಷ್ಠಿಯಲ್ಲಿ ವೇದಿಕೆ ಪ್ರಧಾನ ಕಾರ್ಯದರ್ಶಿ ಜೆ.ಉಮಾಪತಿ, ಖಜಾಂಚಿ ಗಂಗರಾಜ್, ಸಂಘಟನಾ ಕಾರ್ಯದರ್ಶಿ ಬಿ.ಕಾಂತಪ್ಪ, ಕಮಲಾಕುಮಾರಿ, ಮಲ್ಲಿಕಾಂಬ ವಿರೂಪಾಕ್ಷಪ್ಪ, ಕೋಡ್ಲು ಯಜ್ಞಯ್ಯ ಇನ್ನಿತರರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.