ಹೊಸಕೋಟೆ: ತಾಲೂಕಿನ ನಂದಗುಡಿ ಹೋಬಳಿಯ ತಾವರೆಕೆರೆ ಗ್ರಾಮದಲ್ಲಿಂದು ಶ್ರೀ ರಾಮೇಶ್ವರಸ್ವಾಮಿ ಶ್ರೀ ಸಿದ್ದೇಶ್ವರಸ್ವಾಮಿ ದೊಡ್ಡ ದ್ಯಾವರ ಜಾತ್ರಾ ಮಹೋತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ ಎಂದು ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಸುಮಾರು 12 ಗಂಟೆಗೆ ತಾವರೆಕೆರೆ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಈಗಾಗಲೆ ಹೊಸಕೋಟೆಯಿಂದ ತಾವರೆಕೆರೆವರೆಗೂ ಕೋಲಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಅಭಿಮಾನಿಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸ್ವಾಗತಕ್ಕೆ ಸಿದ್ದವಾಗಿವೆ.
ಇದೇ ವೇಳೆ ಸಚಿವ ಸುರೇಶ್ ಜತೆಯಲ್ಲಿ ಡಿವೈಎಸ್‌ಪಿ ಮಲ್ಲೇಶ್, ಡಿಎಆರ್ ಮಹೇಶ್, ಸಂಚಾರ ಇನ್ಸ್‌ಪೆಕ್ಟರ್ ಶ್ರೀಕಂಠಯ್ಯ ಹಾಗೂ ಇತರೆ ಪೊಲೀಸ್ ಅಧಿಕಾರಿಗಳು ಪರಿಶೀಲಿಸಿದರು.ರಥೋತ್ಸವದ ಪ್ರಯುಕ್ತ ಶಾಸಕ ಶರತ್ ಬಚ್ಚೇಗೌಡರು, ಕೋಲಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ೭೫ರಿಂದ ದೇವಾಲಯದವರೆಗಿನ ರಸ್ತೆಯನ್ನು 1.5 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಿ ಡಾಂಬರೀಕರಣ ಮಾಡಿಸಿದ್ದಾರೆ.
2: ಹೊಸಕೋಟೆ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ಶ್ರೀ ರಾಮೇಶ್ವರಸ್ವಾಮಿ ಶ್ರೀ ಸಿದ್ದೇಶ್ವರಸ್ವಾಮಿ ದೊಡ್ಡ ದ್ಯಾವರ ಜಾತ್ರಾ ಮಹೋತ್ಸವದ ಸಿದ್ದತೆಯನ್ನು ನಗರಾಭಿವೃದ್ಧಿ ಸಚಿವ ಬೈರತಿ ಎಸ್.ಸುರೇಶ್ ಪರಿಶೀಲಿಸಿದರು.